ಶಿಕ್ಷಕ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ಕವನ ರಚನಾ ಸ್ಪರ್ಧೆ

Source: sonews | By sub editor | Published on 23rd August 2018, 11:09 PM | Coastal News | Don't Miss |


ಭಟ್ಕಳ:   ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ವಿಧ್ಯಾರ್ಥಿ -ಶಿಕ್ಷಕ- ರಾಷ್ಟ್ರನಿರ್ಮಾಣ ಎಂಬ ವಿಷಯದ ಕುರಿತು ಸ್ವರಚಿತ ಕವನ ರಚನಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸ್ಪರ್ಧೇಯು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿಯೇ ನಡೆಯಲಿದೆ. 

ಆಸಕ್ತ ಶಿಕ್ಷಕರು ತಮ್ಮ ಸ್ವರಚಿತ ಕವಿತೆಯನ್ನು ಇದೇ ಆಗಸ್ಟ 30ನೇ ತಾರೀಖಿನಂದು ಸಂಜೆ 5ಗಂಟೆಯ ಒಳಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ತಲುಪಿಸಬೇಕೆಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ. 

ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ
ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕಿನ ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ  ಕನ್ನಡ ನಾಡು ನುಡಿ,ಸಂಸ್ಕøತಿಗೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ದಿನಾಂಕ 1-9-2018ರ ಶನಿವಾರ ಮುಂಜಾನೆ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಜರುಗಲಿದ್ದು ಪ್ರತಿ ಪ್ರೌಢಶಾಲೆಯಿಂದ ಮೂರು ವಿಧ್ಯಾರ್ಥಿಗಳನ್ನೊಳಗೊಂಡ ಒಂದು ತಂಡಕ್ಕೆ ಭಾಗವಹಿಸಲು ಅವಕಾಶವಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಯಾದಿಯನ್ನು ದಿನಾಂಕ 30-08-2018ರ ಗುರುವಾರ ಸಂಜೆ 5ಗಂಟೆಯ ಒಳಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಗೆ ತಲುಪಿಸುವಂತೆ ಕಸಾಪ ತಾಲೂಖಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448756091 ದೂರವಾಣಿಯನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.
 

Read These Next

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...