ಹಾಸನ:ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಿಂದ ಜಾತ್ಯಾತೀತ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಇಂದು ಎರಡು ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಮಧ್ಯಾಹ್ನ 12.30ಕ್ಕೆ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭವಾನಿ ರೇವಣ್ಣ ಅವರೊಂದಿಗೆ ಆಗಮಿಸಿದ ಪ್ರಜ್ವಲ್ ರೇವಣ್ಣ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ನಾಮಪತ್ರ ಸಲ್ಲಿಸಿದರು.
ನಂತರ ಮತ್ತೆ 2.30 ಗಂಟೆಗೆ ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ. ರೇವಣ್ಣ, ಸಹೋದರ ಸೂರಜ್ ಅವರೊಂದಿಗೆ ಆಗಮಿಸಿ ಮತ್ತೊಂದು ಸೆಟ್ ನಾಮಪತ್ರವನ್ನು ಚುನಾವಣಾಧಿಕಾರಿಯವರಿಗೆ ಸಲ್ಲಿಸಿದರು.