ಉಡುಪಿ: ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ

Source: sonews | By Staff Correspondent | Published on 10th January 2019, 5:23 PM | Coastal News | Don't Miss |

ಉಡುಪಿ: ಜನವರಿ 26 ರಂದು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯನ್ನು ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಣರಾಜ್ಯೋತ್ವವ ದಿನದಂದು ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಸಾಧನೆ ಮಾಡಿದ ಸರ್ಕಾರಿ ನೌಕರರಿಗೆ ಸವೋತ್ತಮ ಸೇವಾ ಪ್ರಶಸ್ತಿ ಮತ್ತು ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮತ್ತು ಮಕ್ಕಳನ್ನು ಕರೆ ತರಲು ಬಸ್ ವ್ಯವಸ್ಥೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಗಣರಾಜ್ಯೋತ್ಸವ ಆಚರಣೆ ಕುರಿತಂತೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...