ತಾಲೂಕಾ ವರ್ತಕರ ಸಂಘದ ಅಧ್ಯಕ್ಷ ವೆಂಕಟೇಶ ಪ್ರಭು  ನಿದನ

Source: sonews | By Staff Correspondent | Published on 9th February 2019, 11:23 PM | Coastal News | Don't Miss |

ಭಟ್ಕಳ: ಶಿರಾಲಿಯ ವೆಂಕಟೇಶ ಪ್ರಭು ಗುಂಡಿಲ್ (68) ಇವರು ಅಲ್ಪ ಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಬೆಳಗಿನ ಜಾವ ನಿದನ ಹೊಂದಿದರು. 

ಹಲವಾರು ಮಠ ಮಂದಿಗಳ ಜೀರ್ಣೋದ್ಧಾರಕ್ಕೆ ಕಾರಣೀಕರ್ತರಾದ ಇವರು ಶ್ರೀ ಪರ್ತಗಾಳಿ ಜೀವೋತ್ತಮ ಮಠದ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿವರ ಆಪ್ತ ಶಿಷ್ಯರಲ್ಲಿ ಓರ್ವರಾಗಿದ್ದರು. 

ಸಹಕಾರಿ ರಂಗದಲ್ಲಿ ತೊಡಗಿಸಿಕೊಂಡಿದ್ದ ಇವರು ಶ್ರೀ ಮಾರುತಿ ಸಹಕಾರಿ ಪತ್ತಿನ ಸಂಘದ ಹಿರಿಯ ನಿರ್ದೇಶಕರು. ತಾಲೂಕಾ ವರ್ತಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. 

ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

ವೆಂಕಟೇಶ ಪ್ರಭು ಅವರ ನಿದನದ ಸುದ್ದಿ ತಿಳಿದು ಶಿರಾಲಿ ಹಾಗೂ ಭಟ್ಕಳ ನಗರದಲ್ಲಿ ಅನೇಕ ಅಂಗಡಿಗಳನ್ನು ಬಂದ್ ಮಾಡಿ ಅವರಿಗೆ ಗೌರವ ಸಲ್ಲಿಸಲಾಯಿತು. 

ಮೃತರ ಅಂತಿಮ ದರ್ಶನವನ್ನು ಸಾವಿರಾರು ಜನರು ಪಡೆದುಕೊಂಡಿದ್ದು ಶಾಸಕ ಸುನಿಲ್ ನಾಯ್ಕ, ಮಾಜಿ ಶಾಸಕರಾದ ಜೆ.ಡಿ.ನಾಯ್ಕ, ಮಂಕಾಳ ಎಸ್. ವೈದ್ಯ, ಮಾರುತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಪೈ, ಪ್ರಮುಖರಾದ ವರ್ತಕರ ಸಂಘದ ಎಂ.ಎಸ್. ಮೊಹತೆಶಮ್, ಪದ್ಮನಾಭ ಪೈ, ಮಹಮ್ಮದ್ ಇಕ್ಬಾಲ್, ಮಹಮ್ಮದ್ ಅಸ್ಲಂ, ಮಂಜುನಾಥ ಪ್ರಭು, ಶ್ರೀ ಕೃಷ್ಣಾ ಮಿಲ್ಸ್ಕ್‍ನ ಪುತ್ತು ಪೈ, ಜಿ.ಎಸ್.ಬಿ. ಸಮಾಜದ ಶಿರಾಲಿ ಅಧ್ಯಕ್ಷ ಡಿ.ಜೆ.ಕಾಮತ್, ಭಟ್ಕಳ ಅಧ್ಯಕ್ಷ ಹರಿಶ್ಚಂದ್ರ ಕಾಮತ್,  ಕಾಮತ್ ಹೋಟೆಲ್ಸ್‍ನ ಆರ್. ಆರ್. ಕಾಮತ್ ಸೇರಿದಂತೆ ಅನೇಕರು ಆಗಮಿಸಿದ್ದರು.  ದಕ್ಷಿಣ ಕನ್ನಡ, ಉಡುಪಿ, ಹುಬ್ಬಳ್ಳಿಯಿಂದ ವ್ಯಾಪಾರಸ್ಥರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.    

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...