ಮುಂದಿನ ಪೀಳಿಗೆಗಾಗಿ ಜೀವ ಜಲ ಸಂರಕ್ಷಿಸಿ : ಜಿಲ್ಲಾಧಿಕಾರಿ ಅಕ್ರಂ ಪಾಷ

Source: so news | By Manju Naik | Published on 23rd March 2019, 12:11 AM | State News | Don't Miss |


ಹಾಸನ:ನೈಸರ್ಗಿಕವಾಗಿ ದೊರೆಯುವ ನೆಲ,ಜಲ,ವಾಯು ಸಂಪನ್ಮೂಲಗಳಿಗೆ ಗಂಡಾಂತರ ಬಂದೊದಗಿದ್ದು, ನಮ್ಮ ಮುಂದಿನ ಪೀಳಿಗೆಗಾಗಿ ಜೀವಜಲವನ್ನು ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಹೊಯ್ಸಳ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ನೀರಿನ ದಿನಾಚರಣೆಯನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ನೀರಿನ ಮಹತ್ವ ಹೆಚ್ಚಿದ್ದು ಕಾವೇರಿ ವಿಚಾರದಲ್ಲಿ ಆದ ಗಂಭೀರ ಘಟನೆಗಳಿಂದ ಎಚ್ಚೆತ್ತುಕೊಂಡು ಜಲವನ್ನು ಉಳಿಸಬೇಕಿದೆ ಎಂದು ತಿಳಿಸಿದರು.
ಭಾರತದಲ್ಲಿ ಎಷ್ಟೋ ಹಳ್ಳಿಗಳಲ್ಲಿ ನೀರಿನ ಹಾಹಾಕಾರವಿದೆ. ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆರೆ-ಕಟ್ಟೆಗಳ ನಿರ್ಮಾಣ, ಹೂಳು ತೆಗೆಯುವಿಕೆ ಸೇರಿದಂತೆ ಹಲವಾರು ಮಾರ್ಗಗಳನ್ನು ನೆರವೇರಿಸುತ್ತಿದ್ದು ಜಲಸಂರಕ್ಷಣೆ ಕೂಡ ನಡೆಯುತ್ತಿದೆ. ನೀರಿನ ಸಂರಕ್ಷಣೆಯನ್ನು ಕುರಿತು ಸಾರ್ವಜನಿಕರು ಜಾಗೃತರಾಗಿ ಜೀವ ಜಲವನ್ನು ಸಂರಕ್ಷಿಸಿ ಹಿತಮಿತವಾಗಿ ಬಳಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಎ.ಎನ್.ಪ್ರಕಾಶ್ ಗೌಡ ಮಾತನಾಡಿ ಎಲ್ಲರೂ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುತ್ತಿದ್ದು, ಈ ಬಗ್ಗೆ ಜಾಗೃತರಾಗಬೇಕು ನಾವೆಲ್ಲರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ದೈನಂದಿನ ಜೀವನದಲ್ಲಿ ನೀರನ್ನು ಉಳಿಸುವ ಕಾರ್ಯವನ್ನು ಮಾಡಬೇಕು ಎಂದು ಪ್ರಕಾಶ್‍ಗೌಡ ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿವಾಹಕ ಅಧಿಕಾರಿ ಡಾ.ಕೆ.ಎನ್ ವಿಜಯ್ ಪ್ರಕಾಶ್ ಮಾತನಾಡಿ ನಾವು ಜಲಸಂರಕ್ಷಣೆಗೆ ಇಂದೆ ಜಾಗೃತರಾಗಿ ಕಾರ್ಯ ಪ್ರವೃತ್ತರಾಗದೇ ಇದ್ದಲ್ಲಿ ಮುಂದೊಂದು ದಿನ ನೀರಿಗಾಗಿ ಅಪಾಯ ಎದುರಾಗಲಿದೆ ಎಂದು ಅವರು ಹೇಳಿದರು.
ಇಂದು ನೀರಿನ ಕೊರತೆ ಜಾಗತಿಕ ಸಮಸ್ಯೆಯಾಗಿದ್ದು. ಪ್ರತಿ ಹನಿ ನೀರಿನ ಉಳಿವಿಗಾಗಿ ಜವಾಬ್ದಾರಿವಹಿಸಬೇಕಿದೆ. ಜಿಲ್ಲೆಯಲ್ಲಿ 267 ಗ್ರಾಮ ಪಂಚಾಯಿತಿ ಹಂತದಲ್ಲಿ ಹಾಗೂ ಎಲ್ಲಾ ಇಲಾಖೆಗಳು ಒಟ್ಟಾಗಿ ಈ ರೀತಿಯ ಜಲ ಸಂರಕ್ಷಣೆಯ ಕಾರ್ಯವನ್ನು ಮಾಡಬೇಕು ಎಂದರು.
ಸ್ವಾಭಾವಿಕ ಸಂಪನ್ಮೂಲಗಳನ್ನು ಕಾಪಾಡುವಲ್ಲಿ ನಾವು ವಿಫಲವಾಗಿರುವುದರಿಂದ ಅನೇಕ ಜ್ವಲಂತ ಸಮಸ್ಯೆಗಳು ಕಾಣುತ್ತಿವೆ. ಜಲಾಮೃತ ಎಲ್ಲರಿಗೂ ಶಕ್ತಿ ತುಂಬುವಂತದ್ದು, ಪ್ರತಿಯೊಬ್ಬರು ಆತ್ಮವಲೋಕನ ಮಾಡಿಕೊಂಡು ವೈಯಕಿಕವಾಗಿ ನೀರಿನ ಸಂರಕ್ಷಣೆಗೆ ಮುಂದಾಗುವಂತೆ ತಿಳಿಸಿದರು.
ಇದೇ ವೇಳೆ ಕುಡಿಯುವ ನೀರು ಸಂರಕ್ಷಣೆಯ ಕುರಿತು ಪ್ರತಿಜ್ಞೆಯನ್ನು ಜಿಲ್ಲಾಧಿಕಾರಿ ಅಕ್ರಂಪಾಷ ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್.ಟಿ.ವಿ ಸ್ವಾಗತಿಸಿ ಮುಖ್ಯ ಯೋಜನಾಧಿಕಾರಿಗಳಾದ ಪರಪ್ಪಸ್ವಾಮಿ ವಂದಿಸಿದರು.

Read These Next

ನೂತನ ರಾಷ್ಟ್ರೀಯ ಶಿಕ್ಷಣ ನೀತಿ -2020ನ್ನು ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಒಳಪಡಿಸುವಂತೆ  ಎಸ್.ಐ.ಓ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರು ಸರ್ಕಾರಕ್ಕೆ ಆಗ್ರಹ

ಭಟ್ಕಳ:  ಒಕ್ಕೂಟ ವ್ಯವಸ್ಥೆಯ ಅಡಿಯಲ್ಲಿ ರಚಿತವಾಗಿರುವ ಪ್ರಜಾಪ್ರಭುತ್ವ ಭಾರತ ದೇಶದಲ್ಲಿ ಸರ್ಕಾರವು ಯಾವುದೇ ರೀತಿಯ ಕಾನೂನು ಅಥವಾ ...

ಉಡುಪಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎನ್‌ಡಿಆರ್‌ಎಫ್ ಬಳಕೆ-ಗೃಹ ಸಚಿವ ಬೊಮ್ಮಾಯಿ

ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೆಲವು ...

ಶಿವಮೊಗ್ಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ, ಹೊಸ ರೈಲು ಸಂಪರ್ಕ ಮತ್ತು ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ...

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ಕೋಟ : ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ...