ಎಸ್‍ಸಿ,ಎಸ್ಟಿ ವರ್ಗದ ಮೇಲಾಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಪ್ರಧಾನಿಗಳಿಗೆ ಮನವಿ

Source: sonews | By Staff Correspondent | Published on 1st October 2018, 6:16 PM | Coastal News | Don't Miss |

ಮುಂಡಗೋಡ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಆಗುತ್ತಿರವ ಅನ್ಯಾಯ ಅವಮಾನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕ್ರಮಕೈಗೊಂಡು ಅವರ ರಕ್ಷಣೆ ಸರಕಾರ ಮುಂದಾಗಬೇಕು ಎಂದು ಮುಂಡಗೋಡ ಕೃಷಿಕೂಲಿಕಾರ ಸಂಘದ ತಾಲೂಕ ಅಧ್ಯಕ್ಷ ಭೀಮಣ್ಣ ಭೋವಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ದೇಶಾದ್ಯಂತ ಇಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಹಕ್ಕುಗಳ ಹೋರಾಟದ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಕಳೆದ 3-4 ವರ್ಷಗಳಿಂದ ದೇಶದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಜೀವಹಾನಿ ಆಸ್ತಿಪಾಸ್ತಿಗಳ ರಕ್ಷಣೆಗೆ ಇಲ್ಲದಂತಾಗಿದೆ. ಗೋಮಾಂಸದ ಹೆಸರಿನಲ್ಲಿ  ಜಾತಿನಿಂದನೆ, ಅವಮಾನ ಮಾಡಿ ಅವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಸಂವಿಧಾನ ನೀಡಿದ ಮೀಸಲಾತಿಯನ್ನು ಕಸಿದುಕೊಳ್ಳಲು ಸಂಚು ನಡೆಯುತ್ತಿದೆ ಸರ್ಕಾರದಿಂದ ಮಂಜೂರಾದ ಭೂಮಿಯನ್ನು ಕಬಳಿಸಾಗುತ್ತಿದೆ. ಗ್ರಾಮಗಳಲ್ಲಿ ಸಾರ್ವಜನಿಕ ಬಾವಿಗಳಿಗೆ ಕ್ಷೌರದ ಅಂಗಡಿಗಳಿಗೆ, ದೇವಸ್ಥಾನಗಳಿಗೆ ನಿರಾಕರಣೆ ಮಾಡಲಾಗುತ್ತಿದೆ ಇದು  

ಅಸ್ಪøಶ್ಯತೆ ಇನ್ನೂ ಜೀವಂತವಾಗಿದೆ ಎಂದು ತೋರಿಸಿಕೊಡುತ್ತಿದೆ, ಪೊಲೀಸರು ಇಂತಹ ಆಚರಣೆ ಮಾಡುವವರ ವಿರುದ್ದ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲು ಮಾಡಿಕೊಳ್ಳುವುದಿಲ್ಲ. ದೌರ್ಜನ್ಯ ಪ್ರಕರಣಗಳಲ್ಲಿ ಬಿಗಿಯಾದ ಕಾನೂನು ಕ್ರಮ ಜರಗಿಸುವ ಬದಲಾಗಿ ರಾಜಿ ಮೂಲಕ ಪ್ರಕರಣಗಳನ್ನು ಮುಚ್ಚಿ ಹಾಕಲಾಗುತ್ತಿದೆ ಇದರಿಂದ ನಮಗೆ ರಕ್ಷಣೆ ಇಲ್ಲದಂತಾಗಿದೆ ಸರಕಾರವು ನಮ್ಮ ರಕ್ಷಣೆಗೆ ಬರಬೇಕೆಂದು ಈ ಮೂಲಕ ಒತ್ತಾಯಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ರಾಜಕುಮಾರ ಪವಾರ, ಭೂತೇಷ ಚಿತ್ರಗಾರ, ಹನಮಂತ ನ್ಯಾಸರ್ಗಿ, ಲಕ್ಷ್ಮೀ ರಾಯ್ಕರ , ವಾಣಿ ತೇವರ ಸೇರಿದಂತೆ ಮುಂತಾದ ಕೃಷಿಕೂಲಿಕಾರ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...