ಮೋದಿ-ಪಾಕ್ ಮ್ಯಾಚ್ ಫಿಕ್ಸಿಂಗ್? ಬಿ.ಕೆ.ಹರಿಪ್ರಸಾದ್ ಆರೋಪ

Source: sonews | By Staff Correspondent | Published on 8th March 2019, 6:11 PM | National News | Don't Miss |

ಹೊಸದಿಲ್ಲಿ: ಪಾಕಿಸ್ತಾನ ಮತ್ತು ನರೇಂದ್ರ ಮೋದಿಯ ನಡುವೆ ಏನಾದರೂ ಮ್ಯಾಚ್-ಫಿಕ್ಸಿಂಗ್ ನಡೆದಿತ್ತೇ ಎಂಬ ಬಗ್ಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟೀಕರಣ ನೀಡಬೇಕು. ಅವರಿಗೆ ತಿಳಿಯದೆ ಪುಲ್ವಾಮ ಘಟನೆ ನಡೆಯಬಾರದಾಗಿತ್ತು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

 

‘ಪುಲ್ವಾಮ ನಂತರ ನಡೆದ ಹಲವು ಘಟನೆಗಳನ್ನು ನೋಡಿದಾಗ, ನರೇಂದ್ರ ಮೋದಿ ಪಾಕಿಸ್ತಾನದ ಜನತೆ ಜತೆ ಮ್ಯಾಚ್-ಫಿಕ್ಸಿಂಗ್ ನಡೆಸಿದ್ದಾರೆಂದು ತೋರುತ್ತದೆ’ ಎಂದು ಗುರುವಾರ ಸುದ್ದಿಗಾರರ ಜತೆ ಮಾತನಾಡುತ್ತಾ ಹರಿಪ್ರಸಾದ್ ಹೇಳಿದರು.

`ಕಳ್ಳತನ'ವಾದ ರಫೇಲ್ ಕಡತಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗಳಿಗೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರ ಪ್ರತಿಕ್ರಿಯೆಗೆ ತಿರುಗೇಟು ನೀಡಿ ಹರಿಪ್ರಸಾದ್ ಮೇಲಿನಂತೆ ಹೇಳಿದ್ದರು.

“ಗುಪ್ತಚರ ವೈಫಲ್ಯವೇ ಪುಲ್ವಾಮ ಘಟನೆಗೆ ಕಾರಣ ಎಂದು ಜಮ್ಮು ಕಾಶ್ಮಿರ ಸರಕಾರ ಬಹಿರಂಗವಾಗಿ ಒಪ್ಪಿಕೊಂಡಿದೆ. ಅವರಿಗೆ ಗೋಮಾಂಸ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ ಆದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರ್‍ ಡಿಎಕ್ಸ್ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಇದು ನರೇಂದ್ರ ಮೋದಿ ಸರಕಾರದ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತದೆ,'' ಎಂದರು.

ಹರಿಪ್ರಸಾದ್ ಅವರ ಹೇಳಿಕೆ ಬೇಜವಾಬ್ದಾರಿಯುತ ಹಾಗೂ ಖಂಡನೀಯ ಎಂದು ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಹೇಳಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...