ಪುಲ್ವಾಮ ಉಗ್ರ ದಾಳಿ: ಕರ್ನಾಟಕದ ಯೋಧ ಹುತಾತ್ಮ!

Source: so news | By MV Bhatkal | Published on 15th February 2019, 12:22 AM | State News | Don't Miss |

ಬೆಂಗಳೂರು: ಪುಲ್ವಾಮದಲ್ಲಿ ಫೆ.14 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರ ಪೈಕಿ ಕರ್ನಾಟಕದ ಯೋಧ ಸಹ ಇದ್ದಾರೆ. 
ಹುತಾತ್ಮ ಯೋಧರ ಸಂಖ್ಯೆ 44 ಕ್ಕೆ ಏರಿಕೆಯಾಗಿದ್ದು, ಹುತಾತ್ಮ ಯೋಧರಿಗಾಗಿ ದೇಶದ ಜನತೆಯ ದುಃಖಮಡುಗಟ್ಟಿದೆ.  
18 ವರ್ಷಗಳಿಂದ ಸಿಆರ್ ಪಿಎಫ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕದ ಮಂಡ್ಯದ ಗುಡಿಗೆರೆಯ ಯೋಧ ಹೆಚ್ ಗುರು ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 
ಕಳೆದ 6 ತಿಂಗಳ ಹಿಂದೆ ವಿವಾಹವಾಗಿದ್ದ ಯೋಧ ಗುರು, ರಜೆಗಾಗಿ ಕಳೆದ ವಾರ ಊರಿಗೆ ಬಂದಿದ್ದರು. ರಜೆ ಮುಗಿಸಿಕೊಂಡು ವಾಪಸ್ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಬೆನ್ನಲ್ಲೇ ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ  ಮದ್ದೂರು ತಾಲೂಕಿನ ಗುಡಿಗೆರೆಯ ಗುರು 2011 ರಲ್ಲಿ ಸಿಆರ್ ಪಿಎಫ್ ಗೆ ಸೇರಿದ್ದರು

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...