ನ.29 ರಂದು ಚೈತನ್ಯ ಜನಜಾಗೃತಿ ವೇದಿಕೆಯಿಂದ ರಾಜ್ಯೋತ್ಸವ

Source: sonews | By Staff Correspondent | Published on 27th November 2018, 11:28 PM | State News |

ಶ್ರೀನಿವಾಸಪುರ: ಗಡಿ ಪ್ರದೇಶದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು. ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅನ್ಯ ಭಾಷಿಕರ ಗಮನ ಸೆಳೆಯಬೇಕು ಎಂದು ಚೈತನ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಶ್ರೀನಾಥ ಬಾಬು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವೇದಿಕೆ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಟ್ಟಣದಲ್ಲಿ 22 ವರ್ಷಗಳಿಂದ ರಾಜ್ಯೋತ್ಸವ ಆಚರಿಸುವುದರ ಮೂಲಕ ಕನ್ನಡ ಜಾಗೃತಿ ಮೂಡಿಸಲಾಗುತ್ತಿದೆ. ನೆಲ, ಜಲ ಹಾಗೂ ಕನ್ನಡ ಭಾಷೆಯ ರಕ್ಷಣೆ ಕುರಿತು ಹಿರಿಯರಿಂದ ಮಾರ್ಗದರ್ಶನ ಕೊಡಿಸಲಾಗುತ್ತಿದೆ ಎಂದು ಹೇಳಿದರು.

.29 ರಂದು ಬೆಳಿಗ್ಗೆ 11.30 ಗಂಟೆಗೆ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಲಾಗುವುದು. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ತೂಪಲ್ಲಿ ಆರ್‌.ಚೌಡರೆಡ್ಡಿ, ಸಿ.ಆರ್‌.ಮನೋಹರ್, ಚಿತ್ರ ನಟ ಪ್ರೇಮ್‌, ನಿರ್ಮಾಪಕ ಸಮೃದ್ಧಿ ಮಂಜುನಾಥ್ಭಾಗವಹಿಸುವರು, ಸಮಾಜ ಸೇವಕ ಗಣಪತಿ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಮುಖಂಡರಾದ ಪೂಲು ಶಿವಾರೆಡ್ಡಿ, ರವಿ, ಕೆ.ಶ್ರೀಕಾಂತ್‌, ಪ್ರಸನ್ನ ಇದ್ದರು.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...