ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು

Source: s o news | By Manju Naik | Published on 6th July 2018, 12:54 PM | State News |

ಕಾರವಾರ: ದಾಂಡೇಲಿಯ ಕೆರವಾಡ ಗ್ರಾಮದಲ್ಲಿ ಬಾಲಕಿಯೊಬ್ಬಳ ಅತ್ಯಾಚಾರ ಆರೋಪಿಗೆ ಜಿಲ್ಲಾ ನ್ಯಾಯಾಲಯವು ಪೋಕ್ಸೊ ಕಾಯ್ದೆಯಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 50,500 ದಂಡ ವಿಧಿಸಿದೆ.ಆರೋಪಿ ಇಮಾಮ್ ಹುಸೇನ್ ಕುದ್ದುನವರ (60) 2013ರ ಏಪ್ರಿಲ್‌ನಲ್ಲಿ ಬಾಲಕಿಯ ಮನೆಗೆ ನುಗ್ಗಿ ಕೃತ್ಯ ಎಸಗಿದ್ದ.

ಯಾರಿಗಾದರೂ ಹೇಳಿದರೆ ಕತ್ತು ಹಿಸುಕಿ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದ ಎಂದು ದಾಂಡೇಲಿ ಗ್ರಾಮಾಂತರ ಠಾಣೆಯ ಅಂದಿನ ಡಿವೈಎಸ್‌ಪಿ ಸಾರಾ ಫಾತಿಮಾ ಸೈಯದ್ ಆದಿಲ್ 
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಠ್ಠಲ್ ಎಸ್ ಧಾರವಾಡಕರ ಅವರು ಆರೋಪಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ದಂಡದ ಮೊತ್ತದ ಪೈಕಿ ₹ 40 ಸಾವಿರವನ್ನು ಸಂತ್ರಸ್ತೆಗೆ ನೀಡಲು ಆದೇಶ ಮಾಡಿದ್ದಾರೆ.

Read These Next

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...