ಅಪ್ರಾಪ್ತ ಬಾಲಕಿಯ ಮೇಲೆ ಯುವಕನಿಂದ ಅತ್ಯಾಚಾರ: ಪ್ರಕರಣ ದಾಖಲು

Source: sonews | By Manju Naik | Published on 26th August 2018, 7:17 PM | Coastal News |

ಭಟ್ಕಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೆನೆಂದು ನಂಬಿಸಿ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ  ಯುವಕನ ಮೇಲೆ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇಲ್ಲಿನ ಮುರ್ಡೇಶ್ವರ ವ್ಯಾಪ್ತಿಯ ಉತ್ತರಕೊಪ್ಪದ ಕಾಮೇಶ್ವರ ಗ್ರಾಮದ ಸಂತೋಷ ಎಂಕ ಮರಾಠೆ(23) ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಈತನು ಅಪ್ರಾಪ್ತ ಬಾಲಕಿಯ ಜೊತೆಗೆ ಮದುವೆಯಾಗುತ್ತೇನೆಂದು ಹೇಳಿ ಆಕೆಯ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿ ಕಳೆದ ಒಂದು ವರ್ಷದ ಹಿಂದೆ ಬಾಲಕಿ ಮನೆಯ ಹಿಂದಿನ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸೆಗಿದ್ದಾನೆಂದು ತಿಳಿದು ಬಂದಿದೆ. ನಂತರ ಮದುವೆ ಆಗುವುದಾಗಿ ಪುಸಲಾಯಿಸಿ ಕಳೆದ ಒಂದು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದ ಎನ್ನಲಾಗಿದೆ. ಈಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿ ತಾಯಿ ಮುರ್ಡೇಶ್ವರ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಕರಣವನ್ನು ಡಿವೈಎಸ್‍ಪಿ ವೆಲೈಂಟೆನ್ ಡಿಸೊಜಾ ನೇತೃತ್ವದಲ್ಲಿ ಮುರ್ಡೇಶ್ವರ ಪಿಎಸ್‍ಐ ನಾಗವ್ವ ಎಂ. ಪಾಟೀಲ್ ದಾಖಲಿಸಿಕೊಂಡಿದ್ದು ಆರೋಪಿ ನಾಪತ್ತೆಯಾಗಿದ್ದು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.  

Read These Next

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...

ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್‍ಗೆ ಸೀಮಿತಗೊಳಿಸುವ ...

ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್  ಪಂಚಾಯತ್ ಅಭಿವೃದ್ದಿ ...