ನಿಗದಿತ ಪ್ರಮಾಣ ಮತ್ತು ದರದಲ್ಲಿ ಪಡಿತರ ವಿತರಣೆಗೆ ಸೂಚನೆ

Source: S O News service | By Staff Correspondent | Published on 5th December 2016, 11:04 PM | Coastal News | Don't Miss |

ಕಾರವಾರ: ಜಿಲ್ಲೆಯಲ್ಲಿ ಪ್ರತಿ ಮಾಹೆ ಅರ್ಹ ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಯವರು ಕೂಪನ್ ಮೇಲೆ ಮುದ್ರಿಸಿದ ಪ್ರಮಾಣದಂತೆ ಪಡಿತರವನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 

ಕಾರ್ಡುದಾರರು ಸಹ ತಾವು ಪಡೆದ ಕೂಪನ್‌ನಲ್ಲಿ ನಮೂದಿಸಿದ ಪ್ರಮಾಣದಂತೆ ನ್ಯಾಯಬೆಲೆ ಅಂಗಡಿಯಿಂದ ಪಡಿತರವನ್ನು ಪಡೆದುಕೊಳ್ಳಬೇಕು. ಒಂದು ವೇಳೆ ನ್ಯಾಯಬೆಲೆ ಅಂಗಡಿಕಾರರು ಕೂಪನ್ ಮೇಲೆ ಮುದ್ರಿಸಿದ ಪ್ರಮಾಣಕ್ಕಿಂತ ಕಡಿಮೆ ನೀಡಿದಲ್ಲಿ ಮತ್ತು ಹೆಚ್ಚಿನ ದರ ಪಡೆದಲ್ಲಿ ಈ ಬಗ್ಗೆ ಸಂಬಂಧಿಸಿದ ತಾಲೂಕಿನ ತಹಶಿಲ್ದಾರರಿಗೆ ದೂರನ್ನು ಸಲ್ಲಿಸಲು ತಿಳಿಸಿದೆ. ಅದರಂತೆ ನ್ಯಾಯಬೆಲೆ ಅಂಗಡಿಕಾರರು ಕೂಪನ್ ಮೇಲೆ ನಮೂದಿಸಿದಂತೆ ನಿಗದಿತ ಪ್ರಮಾಣದ ಪಡಿತರ ಆಹಾರಧಾನ್ಯಗಳನ್ನು ನೀಡಲು ನಿರಾಕರಿಸಿದ್ದಲ್ಲಿ ಸದರಿ ನ್ಯಾಯಬೆಲೆ ಅಂಗಡಿಕಾರರ ವಿರುದ್ದ ನಿಯಮಾನುಸಾರ ಕ್ರಮವಹಿಸಲಾಗುವದು ಎಂದು ಅವರು ಎಚ್ಚರಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಾರವರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಡಿಸೆಂಬರ್ ೧೦ ರಂದು ಕಾರವಾರ ನಗರಕ್ಕೆ ಆಗಮಿಸುವರು.
ಅವರು ಬೆಳಿಗ್ಗೆ ೯.೩೦ ಗಂಟೆಗೆ ಸಾರ್ವಜನಿಕರನ್ನು ಭೇಟಿಯಾಗಿ ೧೦ ಗಂಟೆಗೆ ಕರಾವಳಿ ಉತ್ಸವ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ೧೦.೩೦ ಗಂಟೆಗೆ ನಗರದಿಂದ ಅಂಕೋಲಾಕ್ಕೆ ನಿರ್ಗಮನ. ೧೧ ಗಂಟೆಗೆ ಅಂಕೋಲಾದ ಸತ್ಯಾಗ್ರಹ ಸ್ಮಾರಕ ವಿದ್ಯಾಲಯ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧ ಗಂಟೆಗೆ ಅಂಕೋಲಾದಿಂದ ನಿರ್ಗಮನ. ೧.೩೦ ಗಂಟೆಗೆ ಕಾರವಾರ ಆಗಮಿಸಿ, ನಗರದ ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ಕಾಮಗಾರಿಗಳಿಗೆ ಚಾಲನೆ ನೀಡುವರು. ಮ. ೩ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗೇರು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಭಾಗವಹಿಸುವರು. ಸಂಜೆ ೫ ಗಂಟೆಗೆ ಕರಾವಳಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಕಾರವಾರದಲ್ಲಿ ವಾಸ್ತವ್ಯ ಹೂಡುವರು. ಡಿಸೆಂಬರ್ ೧೧ ರಂದು ಬೆಳಿಗ್ಗೆ ೭ ಗಂಟೆಗೆ ಕರಾವಳಿ ಉತ್ಸವ ಅಂಗವಾಗಿ ನಡೆಯುವ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ೭.೩೦ ಗಂಟೆಗೆ ಬೆಳಗಾವಿಗೆ ಹೊರಡುವರು. 

ಅರ್ಜಿ ಆಹ್ವಾನ
ಕಾರವಾರ: ಪ್ರಸ್ತಕ ಸಾಲಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯಲು ದೈಹಿಕ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
 ಅರ್ಹ ಆಸಕ್ತ ಫಲಾನುಭವಿಗಳು ಆಯಾ ತಾಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲಭವನ ಕಟ್ಟಡ ಕಾರವಾರ ಇವರಿಗೆ ಡಿಸೆಂಬರ್ ೧೯ ರೊಳಗೆ ಅರ್ಜಿ ಸಲ್ಲಿಸುವದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೮೨-೨೨೧೯೧೪ ಸಂಪರ್ಕಿಸುವದು. 

ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ 
ಕಾರವಾರ: ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಗಳಲ್ಲಿ ಡಿಸೆಂಬರ್ ೫ ರಿಂದ ೧೭ ರ ವರೆಗೆ ಎರಡು ಹಂತಗಳಲ್ಲಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಯನ್ನು ಮಾಡಲಾಗುವದು. ಶಾಲೆ ಬಿಟ್ಟ ಮಕ್ಕಳು ಕಂಡಲ್ಲಿ ಸಾರ್ವಜನಕರು ಸಂಬಂಧಿತ ತಾಲೂಕಿನ ಬಿ.ಇ.ಓ, ಬಿ.ಆರ್.ಸಿ. ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಲು ಕೋರಲಾಗಿದೆ. 


ಕರಾವಳಿ ಉತ್ಸವ: ಕಬಡ್ಡಿ ಸ್ಪರ್ಧೆ
ಕಾರವಾರ: ಕರಾವಳಿ ಉತ್ಸವ ಅಂಗವಾಗಿ ಡಿಸೆಂಬರ್ ೧೧ರಂದು ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗುತ್ತಿದ್ದು, ಆಸಕ್ತ ತಂಡಗಳು ಹೆಸರು ನೊಂದಾಯಿಸಲು ಕೋರಲಾಗಿದೆ.
ಮಾಲಾದೇವಿ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನ ೧೫ಸಾವಿರ ರೂ, ದ್ವಿತೀಯ ಬಹುಮಾನ ೧೦ಸಾವಿರ ರೂ ಹಾಗೂ ತೃತೀಯ ಬಹುಮಾನ ೭೫೦೦ರೂ ನಿಗದಿಪಡಿಸಲಾಗಿದೆ. ಪ್ರತಿ ತಂಡಕ್ಕೆ ಪ್ರವೇಶ ಶುಲ್ಕ ರೂ. ೫೦೦ ಇರುವುದು. ಭಾಗವಹಿಸಲು ಇಚ್ಛಿಸುವ ತಂಡಗಳು ತಮ್ಮ ಹೆಸರನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಉತ್ತರಕನ್ನಡ ಜಿಲ್ಲೆ ಇಲ್ಲಿ ಡಿಸೆಂಬರ್ ೬ರ ಒಳಗಾಗಿ ನೊಂದಾಯಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಊಟ ತಿಂಡಿಯ ವ್ಯವಸ್ಥೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೯೮೮೦೭೪೮೮೨೧, ೯೪೮೦೮೮೬೫೫೧, ೯೪೪೯೩೫೯೬೧೩ ಸಂಪರ್ಕಿಸಬಹುದು.

 ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಪ್ರಸ್ತಕ ಸಾಲಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿPರ ಸಬಲೀಕರಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಅರ್ಹ ಆಸಕ್ತ ಫಲಾನುಭವಿಗಳು ಆಯಾ ತಾಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲಭವನ ಕಟ್ಟಡ ಕಾರವಾರ ಇವರಿಗೆ ಡಿಸೆಂಬರ್ ೧೯ ರೊಳಗೆ ಅರ್ಜಿ ಸಲ್ಲಿಸುವದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೮೨-೨೨೧೯೧೪

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...