ಮತದಾನ ಜಾಗೃತಿ ಜಾಥಾ ಕಾರ್ಯಕ್ಕೆ ಚಾಲನೆ

Source: sonews | By Staff Correspondent | Published on 19th March 2019, 11:08 PM | State News |

ಕೋಲಾರ: ಮತದಾರ ಪಟ್ಟಿಯಲ್ಲಿ ಹೆಸರು ಇರುವ ಎಲ್ಲಾ ನಾಗರೀಕರು ಮತದಾನದಂದು ಮತದಾನ ಕೇಂದ್ರಕ್ಕೆ ತೆರಳಿ ಕಡ್ಡಾಯವಾಗಿ  ಮತದಾನ ಮಾಡುವಂತೆ ಪ್ರೆರೇಪಿಸುವ ಹಾಗೂ ಮಾರ್ಗದರ್ಶನವನ್ನು ಮಾಡುವ ಮಹಾನ್ ಕಾರ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ವಯಂಸೇವಕರು ಸೇವಾ ಮನೋಭಾವದಿಂದ ಸಾರ್ವಜನಿಕರಿಗೆ ಮತ್ತಷ್ಟು ಮಾಹಿತಿ ನೀಡಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿದೇರ್ಶಕಿ ಶ್ರೀಮತಿ ಸೌಮ್ಯ ರವರು ಕರೆನೀಡಿದರು.

ಕೋಲಾರ ತಾಲ್ಲೂಕಿನ ಭಟ್ರಹಳ್ಳಿ ಗ್ರಾಮದಲ್ಲಿ ಕೋಲಾರ ಮಹಿಳಾ ಕಾಲೇಜಿನ ವತಿಯಿಂದ ಜರುಗಿದ ಸ್ಕೌಟ್ಸ್- ಗೈಡ್ಸ್ ಶಿಬಿರದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡುತ್ತಾ  ನಮ್ಮ  ರಾಷ್ಟ್ರದ ಅಬಿವೃದ್ದಿಯಲ್ಲಿ ಚುನಾವಣೆಗಳು ಮಹತ್ವದ ಪಾತ್ರ ನಿರ್ವಹಿಸಲಿವೆ ಆ ಕಾರಣದಿಂದ  ಮತದಾನಕ್ಕೆ ಮುಂಚೆ ನಾವು ನೀವು ಯಾವುದೇ ಆಮಿಷಗಳಿಗೆ ಒಳಗಾಗದೆ ನೈತಿಕವಾಗಿ ಮತ ಚಲಾಯಿಸಿ ದೇಶದ ಅಬಿವೃದ್ದಿಗೆ ಸಹಕರಿಸಬೇಕು, ಸ್ಕೌಟ್ಸ್-ಗೈಡ್ಸ್ ಸಂಸ್ಥೆಯು ಸ್ವಯಂ ಸೇವಾ ಸಂಸ್ಥೆಯಾಗಿದ್ದು ಈ ಸಂಸ್ಥೆಯ ಮೂಲಕ ತಾವು ಉತ್ತಮ ಸಂದೇಶಗಳನ್ನು  ಹಾಗೂ ಸರಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪುವಂತೆ ಮಾಡಬೇಕಾದ ಅಗತ್ಯ ಹೆಚ್ಚಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ನ ಗೋವಿಂದ ಗೌಡ ರವರು ಮಾತನಾಡಿ ಯುವ ಮತದಾರರ ಮತಗಳು ಈ ಚುನಾವಣೆಯಲ್ಲಿ ಮಹತ್ವದ ಸ್ಥಾನ ಪಡೆದಿದ್ದು ಸಮಸ್ತ ಮತದಾರರು ಮತದಾನ ಮಾಡುವಂತೆ ಸಾರ್ವಜನಿಕರಿಗೆ ಆರಿವು ಮೂಡಿಸಿ ಕಳೆದ ಬಾರಿಗಿಂತ ಹೆಚ್ಚಿನ ಮತದಾನವಾಗುವಂತೆ ಮಾಡಬೇಕು, ಯಾವುದೇ ಕೊಡುಗೆ ಆಮಿಷಗಳಿಗೆ ಒಳಗಾಗದೆ ಉತ್ತಮ ವ್ಯಕ್ತಿಯನ್ನು ಆಯ್ಕೆಮಾಡಿ ದೇಶದ ಪ್ರಗತಿಗೆ ಕೈಜೋಡಿಸಬೇಕು, ತರಬೇತಿ ಪಡೆದ ತಾವು ತಮ್ಮ ಗ್ರಾಮ ಗಳಲ್ಲಿನ ನಾಗರೀಕರಿಗೆ ಮತದಾನದ ಮಹತ್ವ ಹಾಗೂ ಮತದಾನ ಮಾಡುವ ವಿಧಾನವನ್ನು ತಿಳಿಸಿಕೊಡಬೇಕು ಎಂದು ತಿಳಿಸಿದರು.

ಗ್ರಾಮದ ಎಲ್ಲಾ ಬೀಧಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಿಗೆ ಚುನಾವಣೆಯ ಮಹತ್ವವನ್ನು ತಿಳಿಸುತ್ತಾ ,ಮನೆ ಮನೆಗೆ ಬೇಟಿನೀಡಿ ಮತದಾನ ಯಂತ್ರಗಳು ಹೇಗೆ ಕೆಸಲ ಮಾಡುತ್ತವೆ ಎಂಬುದರ ಅರಿವು ಮೂಡಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಆಯುಕ್ತರಾದ ಕೆ.ಆರ್.ಸುರೇಶ್, ಕಾಲೇಜಿನ ರೇಂಜರ್ ಲೀಟರ್ ಡಾ|| ಮಂಜುಳ, ಜಿಲ್ಲಾ ಸಂಘಟನಾ ಆಯುಕ್ತ ಬಾಬು, ಜಿಲ್ಲಾ ಸಂಘಟಕ ವಿಶ್ವನಾಥ್, ಜಿಲ್ಲಾ ಜಂಟಿ ಕಾರ್ಯದರ್ಶಿ ಉಮಾದೇವಿ ಮುಂತಾದವರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...