ರಾಜಕೀಯ ಲಾಭಕ್ಕಾಗಿ ಡೋಂಗಿ ಕೋಮುವಾದ ಹುಟ್ಟು ಹಾಕಿದ್ದಾರೆ : ಎಚ್.ಎಸ್.ದೊರೆಸ್ವಾಮಿ

Source: S O News service | By Staff Correspondent | Published on 24th October 2016, 6:12 PM | State News | National News | Don't Miss |


ಬೆಂಗಳೂರು: ರವಿವಾರ ಇಲ್ಲಿನ ವಸಂತನಗರದ ಸರ್ದಾರ್ ಪಟೇಲ್ ಭವನದಲ್ಲಿ ಶಾಂತಿ ಮತ್ತು ಮಾನವೀಯತೆ ಅಭಿಯಾನ ಸ್ವಾಗತ ಸಮಿತಿ ಏರ್ಪಡಿಸಿದ್ದ ‘ಸದ್ಭಾವನಾ ಮಂಚ್’, ಕರ್ನಾಟಕ ಉದ್ಘಾಟನೆ ಹಾಗೂ ‘ಸದ್ಭಾವನಾ’ ಪ್ರಶಸ್ತಿ ಪ್ರದಾನ ಸಮಾರಂಭವನ್ನುzಶಿಸಿ ಅವರು ಮಾತನಾಡಿದರು.
ರಾಜಕೀಯ ಲಾಭ ಪಡೆಯುವ ಹಿನ್ನಲೆಯಲ್ಲಿ ಕೆಲವರು ಪರೋಕ್ಷವಾಗಿ ಕುಮ್ಮಕು ನೀಡಿ ಕೋಮುವಾದ ಭಿತ್ತಿದ್ದಾರೆ. ಇದನ್ನು ಡೋಂಗಿ ಕೋಮುವಾದ ಎನ್ನಬಹುದು. ಅದೇ ರೀತಿ, ಉzಶ ಪೂರಕವಾಗಿಯೇ ಕೋಮುವಾದ ಹುಟ್ಟು ಹಾಕಿ ಲಾಭ ಪಡೆಯುತ್ತಿದ್ದಾರೆ. ಇಂತಹ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಎಲ್ಲ ಸಮುದಾಯಗಳು ಒಗ್ಗೂಡಿ ಹೋರಾಟ ನಡೆಸಬೇಕೆಂದು ಕರೆ ನೀಡಿದರು.
ಮುಸ್ಲಿಮ್ ಸಮುದಾಯ ಪ್ರತ್ಯೇಕವಾಗಿ ಉಳಿಯುವ ಸಂಪ್ರದಾಯ ಮುರಿಯಬೇಕು. ಆರೋಗ್ಯಕರ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಜೊತೆಗೆ ಜನರ ಹಕ್ಕುಗಳ ಹೋರಾಟದಲ್ಲಿ ಸಕ್ರಿಯವಾಗಬೇಕು ಎಂದ ಅವರು, ರಾಜಕೀಯ ಶಕ್ತಿಗಳು ಧರ್ಮ-ಜಾತಿ ಆಧರಿಸುವುದನ್ನು ಕೈಬಿಟ್ಟು, ಜಾತ್ಯತೀಯ ಮನೋಭಾವ ಬೆಳೆಸಲು ಮುಂದಾಗಬೇಕೆಂದು ದೊರೆಸ್ವಾಮಿ ಹೇಳಿದರು.
ಅಭಿಯಾನ ಸಂಚಾಲಕರಾದ ಅಕ್ಬರ್ ಅಲಿ ಉಡುಪಿ ಮಾತನಾಡಿ ೨೦೧೬ರ ಅಗಸ್ಟ್ ೨೧ ರಿಂದ ಸೆಪ್ಟಂಬರ್ ೪ರವರೆಗೆ ನಡೆದ ಶಾಂತಿ ಮತ್ತು ಮಾನವೀಯತೆ ರಾಷ್ಟ್ರೀಯ ಅಭಿಯಾನ ನಮ್ಮ ರಾಜ್ಯದಲ್ಲಿಯೂ ಯಶಸ್ವಿಯಾಗಿ ನಡೆಯಿತು. ಈ ಅಭಿಯಾನದ ಧ್ಯೇಯೋದ್ದೇಶಗಳನ್ನು ಭವಿಷ್ಯದಲ್ಲಿಯೂ ನಿರಂತವಾಗಿ ಸಾಧಿಸಲು ಜಿಲ್ಲಾ, ಗ್ರಾಮ, ಕೇರಿ ಮತ್ತು ವಾರ್ಡ್ ಮಟ್ಟಗಳಲ್ಲಿಯೂ ಸದ್ಭಾವನಾ ಮಂಚ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಆ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಸದ್ಭಾವನಾ ಮಂಚನ್ನು ಇಂದು ಉದ್ಘಾಟಿಸಲಾಗಿದೆ. ಇದರ ಸಂಚಾಲಕರಾಗಿ ರಾಜ್ಯ ಬಸವ ಸಮಿತಿಯ ಅಧ್ಯಕ್ಷರಾದ ಶ್ರೀ ಅರವಿಂದ ಜತ್ತಿಯವರು ಆಯ್ಕೆಯಾಗಿರುತ್ತಾರೆ ಎಂದು ತಿಳಿಸಿದರು 
ಪ್ರಶಸ್ತಿ ಪದಾನ:  ಕೋಮು ಸೌಹಾರ್ದಕ್ಕೆ ಶ್ರಮಿಸಿದ ಹಿನ್ನಲೆಯಲ್ಲಿ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ, ಡಾ|ನಾ.ಡಿಸೋಜಾ ಮತ್ತು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್ ಅವರಿಗೆ ‘ಸದ್ಭಾವನಾ’ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ನಿತ್ಯೋತ್ಸವ ಕವಿ ಪ್ರೋ ನಿಸಾರ್ ಅಹ್ಮದ್ ಹಾಗೂ ಗದಗದ ತೊಂಟದ ಶ್ರೀಶ್ರೀ ಸಿದ್ಧಲಿಂಗ ಸ್ವಾಮೀಜಿಗಳಿಗೂ ಈ ಪ್ರಶಸ್ತಿ ಪ್ರದಾನವಾಗಿದ್ದು, ಕಾರಣಾಂತರಗಳಿಂದ ಬರಲು ಅಸಾಧ್ಯವಾದುದರಿಂದ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದರು. 
ಕಾರ್ಯಕ್ರಮದಲ್ಲಿ ಅಮೀರೆ ಶರಿಯತ್ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಜಾಮಿಯಾ ಮಸ್ಜಿದ್‌ನ ಖತೀಬ-ಓ-ಇಮಾಮ ಮೌಲಾನ ಮಖ್ಸೂದ್ ಇಮ್ರಾನ್ ರಶಾದಿ, ಜಮಾ‌ಅತೆ ಇಸ್ಲಾಮೀ ಹಿಂದ್‌ನ ರಾಜ್ಯಾಧ್ಯP ಮುಹಮ್ಮದ್ ಅತ್ಹರು ಶರೀಫ್, ಸತ್ಯನಾರಾಯಣ ಮಲ್ಲಿಪಟ್ನ, ಸುಧಾರೆಡ್ಡಿ, ಸ್ವಾಗತ ಸಮಿತಿಯ ಸಂಚಾಕರಾದ ಮುಹಮ್ಮದ್ ಯೂಸುಫ್ ಕನ್ನಿ ಸೇರಿ ಪ್ರಮುಖರು ಹಾಜರಿದ್ದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭಿಯಾನದ ಸ್ವಾಗತ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ದೊಡ್ಡಸಂಖ್ಯೆಯಲ್ಲಿ ಹಾಜರಿದ್ದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಬೇಲಿಮಠ ಮಹಾ ಸಂಸ್ಥಾನದ ಶ್ರೀಶ್ರೀಶ್ರೀ ಶಿವಾನುಭವ ಶಿವರುದ್ರ ಮಹಾಸ್ವಾಮಿಗಳು ವಹಿಸಿದ್ದರು.
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...