ಸೇಲಂ:ತಿರುಚಿದ ನಗ್ನ ಚಿತ್ರ: ಆತ್ಮಹತ್ಯೆಗೆ ಶರಣಾದ ಯುವತಿಯ ಮೃತದೇಹ ಸ್ವೀಕರಿಸಲು ಪೋಷಕರ ನಕಾರ

Source: so news | By Arshad Koppa | Published on 29th June 2016, 7:07 AM | National News | Incidents |

ಸೇಲಂ: ಕಿಡಿಗೇಡಿಗಳು ಫೇಸ್‌ಬುಕ್‌ ಅಕೌಂಟ್ ಗೆ ತಿರುಚಿದ ನಗ್ನ ಅಪ್‌ಲೋಡ್‌ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ 21 ವರ್ಷದ ಯುವತಿಯ ಮೃತದೇಹವನ್ನು ಸ್ವೀಕರಿಸಲು ಎರಡನೇ ದಿನವೂ ಪೋಷಕರು ನಿರಾಕರಿಸಿದ್ದಾರೆ.


ಪೊಲೀಸರ ಪ್ರಕಾರ, ಸೇಲಂ ಜಿಲ್ಲೆಯ ಇಲಂಪಿಳ್ಳೈ ಮೂಲದ ಎ.ವಿನುಪ್ರಿಯಾ ಎಂಬ ಯುವತಿಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದ ಕಿಡಿಗೇಡಿಗಳು, ಆಕೆಯ ತಿರುಚಿದ ನಗ್ನ ಫೋಟೋವೊಂದನ್ನು ಅಪ್ ಲೋಡ್ ಮಾಡಿದ್ದರು. ಇದರಿಂದ ನೊಂದ ವಿನುಪ್ರಿಯಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಯುವತಿ ಬಿಎಸ್ಸಿ ಪದವಿಧರೆಯಾಗಿದ್ದು, ಆಕೆಯ ತಂದೆ ಅಣ್ಣಾದೊರೈ (50) ನೇಯ್ಗೆ ಕೆಲಸ ಮಾಡುತ್ತಾರೆ.
ನಗ್ನ ಚಿತ್ರಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಈ ಕೂಡಲೇ ಆ ಫೇಸ್ ಖಾತೆಯನ್ನು ಬ್ಲಾಕ್ ಮಾಡಿಸುವಂತೆ ಮನವಿ ಮಾಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಅಲ್ಲದೆ ಆರೋಪಿಯನ್ನು ಬಂಧಿಸುವವರೆಗೆ ಮಗಳ ಮೃತದೇಹವನ್ನು ಸ್ವೀಕರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈ ಕೆಟ್ಟ ಪರಿಸ್ಥಿತಿ ನಿಭಾಯಿಸಲಾಗುತ್ತಿಲ್ಲ. ಪೋಷಕರು ನನ್ನನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಫೇಸ್‌ಬುಕ್‌ ಫೋಟೊ ನಿಜ ಎಂದು ಎಲ್ಲರೂ ಅನುಮಾನಿಸುತ್ತಿದ್ದಾರೆ ಎಂದು ಯುವತಿ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಫೇಸ್‌ಬುಕ್‌ನಲ್ಲಿ ಆಕೆಯ ಅರೆನಗ್ನ ಚಿತ್ರ ಇರುವುದಾಗಿ ಸ್ನೇಹಿತರು ತಿಳಿಸಿದಾಗ ವಿನುಪ್ರಿಯಾಗೆ ಆಘಾತವಾಗಿತ್ತು. ಅಣ್ಣಾದೊರೈ ಜೂನ್‌ 23ರಂದು ಈ ಸಂಬಂಧ ದೂರು ದಾಖಲಿಸಿದ್ದರು. ಆದರೆ, ಪೊಲೀಸರು ಈ ಸಂಬಂಧ ಕ್ರಮ ಕೈಗೊಂಡಿರಲಿಲ್ಲ.
ಫೇಸ್‌ಬುಕ್‌ನಲ್ಲಿ ಭಾನುವಾರ ಮತ್ತೊಂದು ಅರೆ ನಗ್ನ ಚಿತ್ರ ಅಪ್‌ಲೋಡ್‌ ಆಗಿತ್ತು. ಅದನ್ನು ಯುವತಿಯ ತಂದೆಯ ಮೊಬೈಲ್‌ಗೆ ಕಳುಹಿಸಲಾಗಿತ್ತು. ಇದರಿಂದ ಬೇಸತ್ತ ವಿನುಪ್ರಿಯ, ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡಿದ್ದರು.
ವಿನುಪ್ರಿಯಾ ಸಾವಿಗೆ ಪೊಲೀಸರೇ ಕಾರಣ ಎಂದಿರುವ ಪೋಷಕರು ಆಕೆಯ ದೇಹವನ್ನು ಪಡೆದುಕೊಳ್ಳಲು ನಿರಾಕರಿಸಿದ್ದಾರೆ. ಮೃತ ದೇಹವನ್ನು ಸೇಲಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮೃತ ಯುವತಿಯ ಸಂಬಂಧಿಕರು ಸರ್ಕಾರಿ ಆಸ್ಪತ್ರೆ  ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...