ಮರಳು ಸಾಗಣೆ ವಾಹನ ಟಿ4ಯು ಕ್ಯಾಂಪ್‍ಗೆ ಹಾಜರಾಗಲು ಸೂಚನೆ

Source: sonews | By Staff Correspondent | Published on 26th October 2018, 11:35 PM | Coastal News | Don't Miss |

ಕಾರವಾರ :ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮರಳು ಸಾಗಾಣಿಕೆ ಮಾಡಲು ಇಚ್ಚಿಸುವ ವಾಹನಗಳ ಮಾಲೀಕರು ತಮ್ಮ ವಾಹನ ಹಾಗೂ ವಾಹನಕ್ಕೆ ಅಳವಡಿಸಿರುವ ಜಿಪಿಎಸ್ ಸಾಧನಗಳೊಂದಿಗೆ ನಿಗದಿತ ದಿನಾಂಕಗಳಂದು ಟಿ4ಯು ಸಂಸ್ಥೆ ಆಯೋಜಿಸಿರುವ ಸರ್ವೀಸ್ ಕ್ಯಾಂಪ್ ಪ್ರದೇಶಗಳಿಗೆ ಹಾಜರಾಗುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರು ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಮೊಹಮ್ಮದ್ ಸಸ್ರುಲ್ಲಾ ತಿಳಿಸಿದ್ದಾರೆ.

ಅದರಂತೆ ದಿನಾಂಕ 29-10-2018ರಿಂದ 30-10-2018ರವರೆಗೆ ಹೊನ್ನಾವರ- ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ, ಕುಮಟಾ- ಮಣಕಿ ಮೈದಾನ, ಕುಮಟಾ ಪಟ್ಟಣ, ಅಂಕೋಲಾ- ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ, ದಿನಾಂಕ 01-11-2018ರಂದು ಕಾರವಾರ- ಆರ್‍ಟಿಒ ಕಚೇರಿ ಹತ್ತಿರ, ಶಿರಸಿ- ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ ಇಲ್ಲಿಗೆ ವಾಹನಗಳನ್ನು ಹಾಜರುಪಡಿಸಬೇಕು.

ಹೆಚ್ಚಿನ ಮಾಹಿತಿಗೆ ಮೊಬೈಲ್ ದೂರವಾಣೀ 9480495786, 9880704756, 9448016051 ಮತ್ತು 9731076554 ಇಲ್ಲಿಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ.29ರಂದು ಶಿರಸಿಯಲ್ಲಿ ವಿಕಲಚೇತರಿಗೆ ಸಾಧನ ಸಲಕರಣೆಗಳ ವಿತರಣೆ

ಕಾರವಾರ : ಕೇಂದ್ರ ಸರ್ಕಾರದ ವಿಶೇಷ ಆಡಿಪ್ ಯೋಜನೆಯಡಿ ವಿಕಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಶಿಬಿರ ದಿನಾಂಕ 29-10-2018ರಂದು ಬೆಳಿಗ್ಗೆ 11.30ಗಂಟೆಗೆ ಶಿರಸಿ ನಗರಸಭೆ ವಿಕಾಸಾಶ್ರಮ ಮೈದಾನದಲ್ಲಿ ನಡೆಯಲಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ವಿಕಲಚೇತನರ ಹಾಗೂ ಹಿರಿಯ ಸಬಲೀಕರಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಕ್ರಿಶನ್‍ಪಾಲ ಗುರ್ಜಾರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಉದ್ಘಾಟಿಸಲಿದ್ದು, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವಾನ್ವಿತ ಉಪಸ್ಥಿತಿಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...