ಭಟ್ಕಳದ ಹರೀಶ್ ನಾಯ್ಕ ರಾಜ್ಯ ಕಬಡ್ಡಿ ತಂಡಕ್ಕೆ ಆಯ್ಕೆ

Source: sonews | By sub editor | Published on 1st January 2018, 6:24 PM | Coastal News | State News | Don't Miss |

ಭಟ್ಕಳ: ಇಲ್ಲಿನ ಸರ್ಪನಕಟ್ಟಾ ಸ್ಪೋಟ್ರ್ಸ್ ಕ್ಲಬ್ ತಂಡದ ಕಬಡ್ಡಿ ಆಟಗಾರ ಹಾಗೂ ಪ್ರೋಕಬಡ್ಡಿಯ ಬೆಂಗಳೂರು ಬುಲ್ಸ್ ತಂಡದ ಸದಸ್ಯ ಹರೀಶ್ ನಾಯ್ಕ ರಾಜ್ಯ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದಾರೆ. 
2 ಬಾರಿ ಪ್ರೋಕಬಡ್ಡಿಯ ಬೆಂಗಳೂರು ಬುಲ್ಸ್ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಇವರು ತೆಲಂಗಾಣದ ಹೈದರಾಬಾದ್ ನಲ್ಲಿ ಜ.7ರಂದು ನಡೆಯಲಿರುವ 65ನೇ ರಾಷ್ಟ್ರೀಯ ಹಿರಿಯರ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. 
ಭಾರತದ ಕಬಡ್ಡಿ ತಂಡದ ಮಾಜಿ ಕ್ಯಾಪ್ಟನ್ ಬಿ.ಸಿ,ರಮೇಶ, ಉತ್ತರಕನ್ನಡ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಶನ್ ಹಾಗೂ ಭಟ್ಕಳ ತಾಲೂಕು ಕಬಡ್ಡಿ ಅಸೋಸಿಯೇಶನ್ ಹರೀಶ್ ನಾಯ್ಕರನ್ನು ಆ ಮಟ್ಟಕ್ಕೆ ತಲುಪುವಲ್ಲಿ ಸಹಕರಿಸಿದ್ದಾರೆ. 
ರಾಜ್ಯ ತಂಡಕ್ಕೆ ಆಯ್ಕೆಗೊಂಡ ಹರೀಶ್ ನಾಯ್ಕ ರನ್ನು ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಅಧ್ಯಕ್ಷ ಇಮ್ತಿಯಾಜ್ ಉದ್ಯಾವರ್, ಸರ್ಪನಕಟ್ಟಾ ಸ್ಪೋಟ್ರ್ಸ್ ಅಸೋಸಿಯೇಶನ್ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. 
 

Read These Next

ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆಗೆ  ಅಂಜುವiನ್ ಮಹಿಳಾ ಮಹಾವಿದ್ಯಾಲಯದ ಶ್ರೀಲತಾ ಹೆಗಡೆ ಆಯ್ಕೆ

ಭಟ್ಕಳ:ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮಾನ್ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ...

ವಿವಾಹಿತ ಮಹಿಳೆ ಆತ್ಮಹತ್ಯೆ

ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಬುಧವಾರ ರಾತ್ರಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ...

ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆಗೆ  ಅಂಜುವiನ್ ಮಹಿಳಾ ಮಹಾವಿದ್ಯಾಲಯದ ಶ್ರೀಲತಾ ಹೆಗಡೆ ಆಯ್ಕೆ

ಭಟ್ಕಳ:ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮಾನ್ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ...