ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

Source: sonews | By Staff Correspondent | Published on 3rd November 2018, 8:20 PM | Coastal News |

ಕಾರವಾರ:  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳವನ್ನು ‘ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನೆ : ಕರ್ನಾಟಕದ ಕೊಡುಗೆ’ ಎಂಬ ವಿಷಯದಡಿ ನ.23 ಮತ್ತು 24 ರಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿದೆ.
 
ಸಮ್ಮೇಳನದಲ್ಲಿ ಖ್ಯಾತ ಸಂಪನ್ಮೂಲ ತಜ್ಞರುಗಳಿಂದ ಬಾಹ್ಯಾಕಾಶ, ವಿದ್ಯುನ್ಮಾನ, ಕೃಷಿಯಲ್ಲಿ ಜೈವಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿದ್ವತ್ ಪೂರ್ಣ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ.
 
ಸಮ್ಮೇಳನದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ/ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರುಗಳು, ವಿಜ್ಞಾನಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಜ್ಞಾನಾಸಕ್ತರು ಪ್ರತಿನಿಧಿನಿಧಿಗಳಾಗಿ ಭಾಗವಹಿಸಬಹುದಾಗಿದೆ.

ಆಸಕ್ತ ಪ್ರತಿನಿಧಿಗಳು ತಮ್ಮ ಸಂಶೋಧನಾ ಫಲಿತಾಂಶಗಳನ್ನು ಕನ್ನಡದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಪ್ರಸ್ತುತಪಡಿಸಲು ಸಮ್ಮೇಳನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಮೂಲ ಮತ್ತು ಅನ್ವಯಿಕ ವಿಜ್ಞಾನಗಳಿಗೆ ಸಂಬಂಧಿಸಿದ ಯಾವುದೇ ವಿಷಯದ ಪ್ರಾತ್ಯಕ್ಷಿಕೆಗಳನ್ನು ಮಂಡಿಸಬಹುದು. ತಜ್ಞ ಸಮಿತಿಯು ಆಯ್ಕೆ ಮಾಡುವ 3 ಅತ್ಯುತ್ತಮ ಪ್ರಾತ್ಯಕ್ಷಿಕೆಗಳಿಗೆ ನಗದು ಬಹುಮಾನಗಳನ್ನು ನೀಡಲಾಗುವುದು.

ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ಹಾಗೂ ಸಂಶೋಧನಾ ಪ್ರಸ್ತುತಿಯ ಸಾರಾಂಶವನ್ನು ಕಳುಹಿಸಲು ನ.10 ಕೊನೆಯ ದಿನವಾಗಿರುತ್ತದೆ.
 
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಹಾಗೂ ವಿಶ್ವವಿದ್ಯಾಲಯದ ವೆಬ್‍ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ ಮತ್ತು ತಿತಿತಿ.ಜhಚಿಡಿತಿಚಿಜsಛಿieಟಿಛಿeಛಿeಟಿಣಡಿe.oಡಿg ಪಡೆಯಬಹುದು. ಅಕಾಡೆಮಿಯು ಆಯೋಜಿಸಲಾಗುತ್ತಿರುವ ಉದ್ದೇಶಿತ ಸಮ್ಮೇಳನದ ಸದುಪಯೋಗವನ್ನು ವಿಜ್ಞಾನಾಸಕ್ತರು ಪಡೆಯಬಹುದೆಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 


 

Read These Next

ದ.ಕ.ಜಿಲ್ಲೆಯಲ್ಲಿ 441 ಡೆಂಗ್ ಪ್ರಕರಣಗಳು ಪತ್ತೆ; ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗವಾದ ಡೆಂಗ್ ಹಾಗೂ ಮಲೇರಿಯಾ ಹಾವಳಿ ತೀವ್ರಗೊಂಡಿದ್ದು, ನಿನ್ನೆ ಸಂಜೆ (ಗುರುವಾರ) ಶಾಲಾ ...