ಮಂಗಳೂರು: ‘ಕಲ್ಲಡ್ಕ ಚಲೋ’ ಮುಂದೂಡಿಕೆ: ಎಸ್ಡಿಪಿಐ

Source: sdpi | By Arshad Koppa | Published on 15th July 2017, 9:14 PM | Coastal News | Guest Editorial |

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹಲವಾರು ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ‘ಕಲ್ಲಡ್ಕ ಚಲೋ’ ಹೋರಾಟದ ಬಗ್ಗೆ ವಿಷಯ ಪ್ರಸ್ತಾಪಿಸಿ. ಪಕ್ಷದ ನ್ಯಾಯಯುತ ಬೇಡಿಕೆಗಳು ಈಡೇರದೇ ಇದ್ದಲ್ಲಿ ಜುಲೈ 15ರಂದು ಹೋರಾಟದ ರೂಪುರೇಷೆÀ ಹಾಗೂ ದಿನಾಂಕವನ್ನು ಪ್ರಕಟಿಸುವುದು ಎಂದು ತಿಳಿಯಪಡಿಸಿತ್ತು.
ಎಸ್ಡಿಪಿಐ ಅಮ್ಮುಂಜೆ ವಲಯಾಧ್ಯಕ್ಷ ಅಶ್ರಫ್ ಕಲಾಯಿ ಹತ್ಯೆಯ ಹಿಂದಿರುವ ನೈಜ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಹತ್ಯೆಯ ಹಿಂದಿರುವ ಪ್ರಮುಖ ರೂವಾರಿಗಳಾದ ಶರಣ್ ಪಂಪ್ ವೆಲ್ ಹಾಗೂ ಪ್ರಭಾಕರ್ ಭಟ್ ರನ್ನು ಬಂಧಿಸಿ ತನಿಖೆಗೊಳಪಡಿಸಬೇಕು. ಕಲ್ಲಡ್ಕದಲ್ಲಿ ನಡೆದ ಎಲ್ಲಾ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಬಂಧಿಸಲಾದ ಅಮಾಯಕರ ಯುವಕರನ್ನು ಬಿಡುಗಡೆಗೊಳಿಸುವುದು ಮತ್ತು ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯಲು ಪ್ರಚೋದನೆ ಯನ್ನು ನೀಡುತ್ತಿರುವ ಸಂಘಪರಿವಾರ ಮತ್ತು ಬಿಜೆಪಿ ನಾಯಕರನ್ನು ಹದ್ದು ಬಸ್ತಿನಲ್ಲಿಡುವುದು ಶಾಂತಿ ಸೌಹಾರ್ಧತೆಯನ್ನು ನೆಲೆನಿಲ್ಲಿಸುವುದಕ್ಕೊಸ್ಕರ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ‘ಕಲ್ಲಡ್ಕ ಚಲೋ’ ಹೋರಾಟದ ಬಗ್ಗೆ ಪ್ರಸ್ತಾಪಿಸಲಾಗಿತ್ತು.
ಅದರ ಬಳಿಕ ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಘಟನೆಯಿಂದ ಪ್ರಸ್ತುತ 144 ಸೆಕ್ಷನ್ ಜಾರಿಯಲ್ಲಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕಾರಣದಿಂದ ಹಾಗೂ ಜುಲೈ 21ರ ವರೆಗೆ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಮತ್ತು ಮಾನ್ಯ ಮುಖ್ಯ ಮಂತ್ರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳು ನಮ್ಮ ಬೇಡಿಕೆಗೆ ಸ್ಪಂದಿಸಿ ಅಶ್ರಫ್ ಕಲಾಯಿ ಹತೈ ಹಿಂದಿರುವ ಮಾಸ್ಟರ್ ಮೈಂಡ್‍ಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. ಅದಲ್ಲದೇ ಅಹಿತಕರ ಘಟನೆಗೆ ಕಾರಣಕರ್ತರಾದ ಸಂಘ ಪರಿವಾರದ ನಾಯಕರ ಮೇಲೆ ಪ್ರಕರಣ ದಾಖಲಿಸಿರುವುದರಿಂದ ಹಾಗೂ ಇನ್ನಿತರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂಬ ನಂಬಿಕೆಯಿಂದ ಸದ್ಯ ಜಿಲ್ಲೆಯಲ್ಲಿ ಅಶಾಂತಿ ವಾತಾವರಣದಲ್ಲಿ ಇರುವುದನ್ನು ಗಣನೆಗೆ ತೆಗೆದು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರಾಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಸಹಕಾರ ನೀಡುವ ಉದ್ದೇಶಗಳಿಂದ ‘ಕಲ್ಲಡ್ಕ ಚಲೋ’ ಹೋರಾಟದ ರೂಪುರೇಷೆಯ ಬಗ್ಗೆ ಮುಂದೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ. ಅದೇ ರೀತಿ ಪ್ರಕರಣ ದಾಖಲಾದ ಸಂಘಪರಿವಾರದ ನಾಯಕರನ್ನು ಕೂಡಲೇ ಬಂಧಿಸಬೇಕೆಂದು , ಪ್ರಚೋದನಕಾರಿ ಭಾಷಣ ಮತ್ತು ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ ಜಿಲ್ಲೆಯ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಬೇಕು ಎಂದು ಈ ಮೂಲಕ ಎಸ್ಡಿಪಿಐ  ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಸ್ಥಳ :    ಮಂಗಳೂರು                            
ಅಶ್ರಫ್ ಮಂಚಿ
 ಜಿಲ್ಲಾ ಕಾರ್ಯದರ್ಶಿ

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...