ಹಿರಿಯ ರಾಜಕಾರಣಿ ಚೆರ್ಕಳಂ ಅಬ್ದುಲ್ಲಾ ನಿಧನ

Source: sonews | By sub editor | Published on 27th July 2018, 6:17 PM | State News | National News | Don't Miss |

ಕಾಸರಗೋಡು: ಹಿರಿಯ ರಾಜಕಾರಣಿ, ಕೇರಳದ ಮಾಜಿ ಸಚಿವ ಚೆರ್ಕಳಂ ಅಬ್ದುಲ್ಲಾ ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. 

ಕಳೆದ ಕೆಲ ದಿನಗಳಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆರ್ಕಳಂ ಅಬ್ದುಲ್ಲರನ್ನು ವೈದ್ಯರ ಸಲಹೆಯಂತೆ ನಿನ್ನೆ ತಡರಾತ್ರಿ ಮನೆಗೆ ಕರೆತರಲಾಗಿತ್ತು. ಇಂದು ಬೆಳಗ್ಗೆ 8:20ಕ್ಕೆ ಸ್ವಗೃಹದಲ್ಲಿ ಅವರು ಕೊನೆಯುಸಿರೆಳೆದರು 

ಮಂಜೇಶ್ವರದ ಮಾಜಿ ಶಾಸಕರಾಗಿದ್ದ ಚೆರ್ಕಳಂ ಅಬ್ದುಲ್ಲ ಅವರು ಮುಸ್ಲಿಂ ಲೀಗ್ ರಾಜ್ಯ ಕೋಶಾಧಿಕಾರಿಯೂ ಆಗಿದ್ದರು.

ಕಾಂಗ್ರೆಸ್ ನೇತೃತ್ವದ ಐಕ್ಯರಂಗದ ಘಟಕ ಪಕ್ಷವಾದ ಮುಸ್ಲಿಂ ಲೀಗ್‌ನ ಪ್ರಮುಖ ನಾಯಕರಾಗಿದ್ದ ಚೆರ್ಕಳಂ 1987ರಿಂದ 2001ರ ತನಕ ನಾಲ್ಕು ಬಾರಿ ಮಂಜೇಶ್ವರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, 2001ರಲ್ಲಿ ಎ .ಕೆ.ಆ್ಯಂಟನಿಯವರ ಸಚಿವ ಸಂಪುಟದಲ್ಲಿ ಸ್ಥಳೀಯಾಡಳಿತ ಸಚಿವರಾಗಿದ್ದರು.

ಕಾಸರಗೋಡಿಯ ಚೆರ್ಕಳ ನಿವಾಸಿಯಾಗಿದ್ದ ಚೆರ್ಕಳಂ ಅಬ್ದುಲ್ಲ 1987ರಲ್ಲಿ ಬಿಜೆಪಿಯ ಎಚ್.ಶಂಕರ ಆಳ್ವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು. ಇವರ ಈ ಗೆಲುವಿನೊಂದಿಗೆ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ಪಾಲಾಗಿತ್ತು. 1992ರಲ್ಲಿ ಬಿಜೆಪಿಯ ಜನಪ್ರಿಯ ನಾಯಕರಾಗಿದ್ದ ಕೆ .ಜಿ.ಮಾರಾರ್‌ವಿರುದ್ಧ 1,072 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಯುಡಿಎಫ್‌ನ್ನು ಮತ್ತೆ ಗೆಲ್ಲುವಂತೆ ಮಾಡಿದ ಹೆಗ್ಗಳಿಕೆ ಚೆರ್ಕಳಂ ಅವರದ್ದು.

1996ರಲ್ಲಿ ಬಿಜೆಪಿಯ ಸಿ.ಕೆ.ಪದ್ಮನಾಭನ್‌ರನ್ನು ಸೋಲಿಸಿ ಮೂರನೇ ಬಾರಿ ಆಯ್ಕೆಯಾಗಿದ್ದ ಚೆರ್ಕಳಂ ಅವರು, 2001ರಲ್ಲಿ ಬಿಜೆಪಿಯ ಸಿ.ಕೆ.ಪದ್ಮನಾಭನ್ ಅವರನ್ನು ಮತ್ತೆ ಸೋಲಿಸಿ ನಾಲ್ಕನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದರು. ಹಲವು ವರ್ಷಗಳ ಕಾಲ ಮುಸ್ಲಿಂ ಲೀಗ್ ಹಾಗೂ ಯುಡಿಎಫ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚೆರ್ಕಳಂ ಅವರು ವಿಧಾನಸಭಾ ಅಧಿವೇಶನದಲ್ಲಿ ಕನ್ನಡದ ಕಹಳೆ ಮೊಳಗಿಸುವ ಮೂಲಕ ಕನ್ನಡಿಗರ ಮನ ಗೆದ್ದಿದ್ದರು.

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಮಾಡಿದ ಮೊದಲ ಸಚಿವ ಎಂಬ ಹೆಗ್ಗಳಿಕೆಗೂ ಚೆರ್ಕಳಂ ಅಬ್ದುಲ್ಲಾ ಪಾತ್ರರಾಗಿದ್ದಾರೆ.

Read These Next

ಬಯಲು ಸೀಮೆಯ ಹಾಲು ಒಕ್ಕೂಟದ ಭ್ರಷ್ಟಚಾರ ಹಾಗೂ ನೇಮಕಾತಿಗಳಲ್ಲಿ ಆಗಿರುವ ಹಗರಣವನ್ನು  ಸಿ.ಬಿ.ಐಗೆ ಒಪ್ಪಿಸುವಂತೆ ರೈತಸಂಘ ಆಗ್ರಹ

ಕೋಲಾರ: ಬಯಲು ಸೀಮೆಯ ಹಾಲು ಒಕ್ಕೂಟದ ಬ್ರಹ್ಮಾಂಡ ಭ್ರಷ್ಟಚಾರ ಹಾಗೂ ನೇಮಕಾತಿಗಳಲ್ಲಿ ಆಗಿರುವ ಹಗರಣವನ್ನು  ಸಿ.ಬಿ.ಐಗೆ ಒಪ್ಪಿಸಬೇಕು ...

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಸುಸೂತ್ರವಾಗಿ ಆರಂಭಗೊಂಡ ಐಸಿಎಸ್‍ಇ ಪರೀಕ್ಷೆ; ಮೊದಲ ದಿನ ಎಲ್ಲ ವಿದ್ಯಾರ್ಥಿಗಳು ಹಾಜರು

ಭಟ್ಕಳ: ಇದೇ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿರುವ ನ್ಯೂ ಶಮ್ಸ್ ಸ್ಕೂಲ್ ...