ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ; ಸ್ಕೂಟರ್ ಚಾಲಕ ಮೃತ್ಯು

Source: sonews | By Staff Correspondent | Published on 18th March 2019, 5:57 PM | Coastal News | Don't Miss |

ಭಟ್ಕಳ: ಇಲ್ಲಿನ ಬಂದರ್ ರಸ್ತೆಯ ಮಗ್ದೂಮ್ ಕಾಲೋನಿ ಬಳಿ ಭಾನುವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟಿದ್ದಾರೆ.

ಮೃತರನ್ನು ಮುಹಮ್ಮದ್ ಉಮರ್ ಕುಂದನಗುಡಾ(76) ಎಂದು ಗುರುತಿಸಲಾಗಿದೆ. 

ವಯೋವೃದ್ಧರಾದ ಇವರು ಡೋಂಗರಪಳ್ಳಿಯ ಎಪಿಜೆ ಅಬ್ದುಲ್ ರಸ್ತೆಯ ತಮ್ಮ ಸಂಬಂಧಿಕರ ಮನೆಯಿಂದ ಬರುತ್ತಿರುವಾಗ ಅತಿವೇಗದಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. 

ತಲೆಗೆ ಗಂಭೀರ ಪ್ರಮಾಣದ ಪೆಟ್ಟು ಬಿದ್ದ ಕಾರಣ ಅವರನ್ನು ಸ್ಥಳಿಯ ಆಸ್ಪತ್ರೆಯೊಂದರಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ರವಾನಿಸಲಾಗಿತ್ತು ಎನ್ನಲಾಗಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 2ಗಂಟೆ ಸುಮಾರು ನಿಧನರಾದರೆಂದು ಅವರ ಕುಟುಂಬ ಮೂಲಗಳು ತಿಳಿಸಿವೆ. 

ಘಟನೆಗೆ ಸಂಬಂಧಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾರು ಸಮೇತ ಚಾಲಕನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡು ಕಾನೂನು ಕ್ರಮ ಜರಗಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...