ಶಿಡ್ಲಘಟ್ಟ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಸಲು ಮಂಗಳಾನಂದನಾಥ ಸ್ವಾಮೀಜಿ  ಕರೆ

Source: tamim | By Arshad Koppa | Published on 21st January 2017, 9:04 AM | State News | Special Report |

ಶಿಡ್ಲಘಟ್ಟ,ಜನವರಿ20: ಸಮಾಜದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕಾರ,ಸಂಸ್ಕøತಿಯನ್ನು ಸಹ ಬೆಳೆಸಬೇಕೆಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು.
    ತಾಲೂಕಿನ ಹನುಮಂತಪುರ ಗೇಟ್‍ನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಮಾತೃಭೋಜನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಗುವಿನ ಮೊದಲ ಪಾಠಶಾಲೆ ಮನೆಯಾಗಿರುವುದರಿಂದ ಪೋಷಕರು ಸಮಾಜದ ಅಭಿವೃಧ್ಧಿಗೆ ಪೂರಕವಾಗಿರುವ ವಿಚಾರಗಳನ್ನು ಮನದಟ್ಟ ಮಾಡಿಕೊಡಬೇಕು,ಗುರುಹಿರಿಯರನ್ನು ಗೌರವ ಸಮರ್ಪಣೆ,ಸಂಸ್ಕಾರ,ಶಿಸ್ತು ಮತ್ತು ಸಂಸ್ಕøತಿಯನ್ನು ಸಂರಕ್ಷಣೆ ಮಾಡುವ ವಾತಾವರಣವನ್ನು ನಿರ್ಮಿಸಬೇಕೆಂದರು.
    ಮಕ್ಕಳು ಸಹ ತಂದೆ-ತಾಯಿಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು,ಗುರುಗಳ ಮಾರ್ಗದರ್ಶನದಲ್ಲಿ ಪಾಠಪ್ರವಚನಗಳನ್ನು ಪಡೆದುಕೊಂಡು ಜ್ಞಾನವಂತರಾಗಿ ಸಮಾಜದಲ್ಲಿ ಉನ್ನತಸ್ಥಾನಗಳನ್ನು ಅಲಂಕರಿಸಿ ಆದರ್ಶಜೀವನ ನಡೆಸಬೇಕೆಂದರು.
    
ಬಿಜಿಎಸ್ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗು ಪೋಷಕರ ಪಾತ್ರ ಬಹಳಷ್ಟು ಮಹತ್ತರವಾದದ್ದು ಹಾಗಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಸಹಕಾರವನ್ನು ಪೋಷಕರು ಶಿಕ್ಷಕರಿಗೆ ನೀಡಬೇಕು ಎಂದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಸುಗಮ ಸಂಗೀತ ಗಾಯಕಿ ರತ್ನಮಾಲಾ ಪ್ರಕಾಶ್ ರನ್ನು ಶಾಲಾ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

    ಶಾಲಾ ಮಕ್ಕಳ ಪೋಷಕರು ಮಾತೃಭೋಜನ ಸಮಾರಂಭಕ್ಕಾಗಿ ತಯಾರಿಸಿ ತಂದಿದ್ದ ವಿವಿಧ ರೀತಿಯ ತಿಂಡಿಗಳನ್ನು ಮಕ್ಕಳು ಹಾಗು ಪೋಷಕರು ಸವಿದರು.
ಕಾರ್ಯಕ್ರಮದಲ್ಲಿ ಎಸ್‍ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಆರ್.ಮಹದೇವ್ ಮುಖಂಡರಾದ ಕೆಂಪರೆಡ್ಡಿ, ದೇವರಾಜ್, ತಾಲೂಕು ಒಕ್ಕಲಿಗರ ಯುವಸೇನೆಯ ಅಧ್ಯಕ್ಷ ಜೆ.ವಿ.ವೆಂಕಟಸ್ವಾಮಿ, ಪುರುಷೋತ್ತಮ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...