ಶಿಡ್ಲಘಟ್ಟ:ದೇವರಮಳ್ಳೂರಿಗೆ ತಹಶೀಲ್ದಾರ್ ಅಜೀತ್‍ಕುಮಾರ್ ರೈ ಭೇಟಿ

Source: tamim | By Arshad Koppa | Published on 21st August 2017, 7:54 AM | State News | Guest Editorial |


ಚರಂಡಿಗಳನ್ನು ಸ್ವಚ್ಛಗೊಳಿಸಲು ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳಿಗೆ ಸೂಚನೆ

ಶಿಡ್ಲಘಟ್ಟ,ಆಗಸ್ಟ್19: ದೇವಸ್ಥಾನಗಳ ತವರೂರೆಂದು ಖ್ಯಾತಿ ಹೊಂದಿರುವ ತಾಲೂಕಿನ ದೇವರಮಳ್ಳೂರಿಗೆ ತಹಶೀಲ್ದಾರ್ ಅಜೀತ್‍ಕುಮಾರ್ ರೈ ಭೇಟಿ ನೀಡಿ ಪರಿಶೀಲಿಸಿದರು.
    ಗ್ರಾಮಸ್ಥರೊಂದಿಗೆ ಗ್ರಾಮದಲ್ಲಿ ದಲಿತರ ಕಾಲೋನಿ ಸಹಿತ ಇನ್ನಿತರೆ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿದ ತಾಲೂಕು ದಂಡಾಧಿಕಾರಿಗಳು ಗ್ರಾಮ ಚಾವಡಿ,ಗ್ರಾಮ ಸಹಾಯಕರ ಮನೆ,ಹದಗೆಟ್ಟಿರುವ ಚರಂಡಿಗಳನ್ನು ವೀಕ್ಷಣೆ ಮಾಡಿ ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕೆಂದು  ಸೂಚನೆ ನೀಡಿದರು.
    ತಾಲೂಕಿನಲ್ಲಿ ಕೆಲವು ಗ್ರಾಮಗಳಲ್ಲಿ ನೈರ್ಮಲ್ಯ ಹದಗೆಟ್ಟಿರುವುದರಿಂದ ಡೆಂಘಿ ಮತ್ತಿತರರ ಸಾಂಕ್ರಾಮಿಕ ರೋಗಗಳು ಹರಡುತ್ತಿದೆ ನೀವು ದೇವರನಮಳ್ಳೂರು ಗ್ರಾಮದಲ್ಲಿ ಸ್ವಚ್ಛತೆ ಕಾರ್ಯವನ್ನು ನಡೆಸಲು ಯಾಕೆ ನಿರ್ಲಕ್ಷ್ಯವಹಿಸಿದ್ದೀರಿ ಎಂದು ಸ್ಥಳದಲ್ಲೇ ಇದ್ದ ಪಿಡಿಓ ರಮಾಕಾಂತ್ ಅವರ ಕಾರ್ಯವೈಖರಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
    ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಶುಧ್ಧ ನೀರಿನ ಘಟಕದ ಸುತ್ತಮುತ್ತ ಹದಗೆಟ್ಟಿರುವ ನೈರ್ಮಲ್ಯವನ್ನು ಕಂಡ ತಾಲೂಕು ದಂಡಾಧಿಕಾರಿಗಳು ಕುಡಿಯುವ ನೀರಿನಲ್ಲಿ ತ್ಯಾಜ್ಯ ನೀರು ಮಿಶ್ರಣಗೊಂಡು ಆರೋಗ್ಯ ಹದಗೆಟ್ಟರೇ ಯಾರು ಹೊಣೆಗಾರರು? ಎಂದು ಪಿಡಿಓ ಅವರನ್ನು ಪ್ರಶ್ನಿಸಿದಾಗ ಸಾರ್ ಕೂಲಿ ಕಾರ್ಮಿಕರ ಸಮಸ್ಯೆಯಿಂದ ಸ್ವಚ್ಛತಾ ಕೆಲಸಗಳನ್ನು ಕೈಗೊಳ್ಳಲು ವಿಳಂಭವಾಗಿದೆ ಈ ಕೂಡಲೇ ಸ್ವಚ್ಛತಾ ಕಾಮಗಾರಿಗಳನ್ನು ನಡೆಸಲು ಆದ್ಯತೆ ನೀಡುವುದಾಗಿ ಪಿಡಿಓ ಭರವಸೆ ನೀಡಿದರು.
    ಇದೇ ಸಂರ್ಭದಲ್ಲಿ ದೇವರಮಳ್ಳೂರು ಗ್ರಾಮದಲ್ಲಿ ನಿವೇಶನರಹಿತರಿಗೆ ನಿವೇಶನ ಸೌಲಭ್ಯ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಮಾದಿಗ ದಂಡೋರ ಸಮಿತಿಯ ಅಧ್ಯಕ್ಷ ಕೃಷ್ಣ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಮಾಡಿದರು ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ತಾಲೂಕು ದಂಡಾಧಿಕಾರಿಗಳು ಸೂಕ್ತ ಜಾಗವನ್ನು ಗುರುತಿಸಿ ನಿವೇಶನ ನೀಡಲು ಪ್ರಾಮಾಣ ಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೃಷ್ಣಪ್ಪ,ಕೃಷ್ಣೆಗೌಡ,ಗ್ರಾಮದ ಹಿರಿಯ ಮುಖಂಡರಾದ ವೆಂಕೋಬರಾವ್,ಗ್ರಾಮ ಲೆಕ್ಕಾಧಿಕಾರಿ ತ್ರಿಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...