ಶಿಡ್ಲಘಟ್ಟ:ರಾಜ್ಯದಲ್ಲಿ ದುರಾಡಳಿದ ನಡೆಸುತ್ತಿರುವ ಕಾಂಗ್ರೇಸ್ ಸರಕಾರವನ್ನು ವಜಾಗೊಳಿಸಲು ಬಿಜೆಪಿ ಮೆರವಣಿಗೆ

Source: tamim | By Arshad Koppa | Published on 24th August 2017, 8:14 AM | State News |

ಶಿಡ್ಲಘಟ್ಟ,ಆಗಸ್ಟ್23: ರಾಜ್ಯದಲ್ಲಿ ದುರಾಡಳಿದ ನಡೆಸುತ್ತಿರುವ ಕಾಂಗ್ರೇಸ್ ಸರಕಾರವನ್ನು ವಜಾಗೊಳಿಸಲು ಆಗ್ರಹಿಸಿ ತಾಲೂಕಿನ ಬಿಜೆಪಿ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    
ನಗರದ ಶ್ರೀ ಬಸವೇಶ್ವರ ದೇವಾಲಯದಿಂದ ಪಂಜಿನ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಭ್ರಷ್ಟಚಾರದಲ್ಲಿ ತೊಡಗಿರುವ ಭ್ರಷ್ಟ ಸಚಿವರನ್ನು ರಕ್ಷಣೆ ಮಾಡುವ ಮೂಲಕ ರಾಜ್ಯ ಸರಕಾರ ದುರಾಡಳಿತ ನಡೆಸುತ್ತಿದ್ದು ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಆದಾಯ ತೆರಿಗೆ ಅಧಿಕಾರಿಗಳಿಂಂದ ದಾಳಿಗೆ ಒಳಗಾದ ಸಚಿವರಾದ ಡಿ.ಕೆ.ಶಿವಕುಮಾರ್,ಜಾರಿಕಿಹೋಳಿ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಿದಿದ್ದ ಪಕ್ಷದಲ್ಲಿ ಉಗ್ರ ರೀತಿಯ ಹೋರಾಟ ನಡೆಸಲಾಗುವುದೆಂದು ಪ್ರತಿಭಟಕಾರರು ಎಚ್ಚರಿಕೆ ನೀಡಿದರು.
    
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭ್ರಷ್ಟಚಾರ ನಿಗ್ರಹದಳವನ್ನು ದುರುಪಯೋಗ ಮಾಡಿಕೊಂಡು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುಧ್ಧ ಸುಳ್ಳು ಮೊಕದಮೆಗಳನ್ನು ಹೂಡುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿರುವ ಕಾಂಗ್ರೇಸ್ ಸರಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು ಭಷ್ಟಚಾರ ಮತ್ತು ದುರಾಡಳಿತ ನಡೆಸುತ್ತಿರುವ ಕಾಂಗ್ರೇಸ್ ಸರಕಾರವನ್ನು ವಜಾಗೊಳಿಸುವ ತನಕ ಹೋರಾಟವನ್ನು ತೀವ್ರಗೊಳಿಸಲಾಗುವುದೆಂದರು.
    
ಪ್ರತಿಭಟನೆಯಲ್ಲಿ ಭಾಜಪ ಮುಖಂಡ ಕರ್ಣಶ್ರೀ ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷ ಡಿ.ಆರ್.ಶಿವಕುಮಾರ್‍ಗೌಡ,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀರಾಮರೆಡ್ಡಿ,ಸುರೇಂದ್ರಗೌಡ,ರಾಜ್ಯ ಸ್ಲಂ ಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ್,ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್,ಮಂಜುಳಮ್ಮ,ಸುಜಾತಮ್ಮ ಮತ್ತಿತರರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...