ಶಿಡ್ಲಘಟ್ಟ: ಡಿ.ದೇವರಾಜ್ ಅರಸು ಅವರ ಆದರ್ಶಗಳು ಎಲ್ಲರಿಗೆ ದಾರಿದೀಪವಾಗಲು ಅಮ್ಜದ್ ನವಾಜ್ ಕರೆ

Source: tamim | By Arshad Koppa | Published on 24th August 2017, 8:48 AM | Coastal News | Special Report |

ಶಿಡ್ಲಘಟ್ಟ,ಆಗಸ್ಟ್21: ದೇಶದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಚಯಿಸಿದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಮತ್ತು ರಾಜ್ಯದಲ್ಲಿ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಡಿ.ದೇವರಾಜ್ ಅರಸು ಅವರ ಆದರ್ಶಗಳು ಎಲ್ಲರಿಗೆ ದಾರಿದೀಪವಾಗಬೇಕೆಂದು ಬ್ಲಾಕ್ ಕಾಂಗ್ರೇಸ್ ಅಲ್ಪಸಂಕ್ಯಾತರ ಘಟಕದ ಅಧ್ಯಕ್ಷ ಅಮಜದ್ ನವಾಝ್ ಹೇಳಿದರು.


ನಗರದ ಆಶಾಕಿರಣ ಅಂಧಮಕ್ಕಳ ವಸತಿ ಶಾಲೆಯಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಮತ್ತು ಡಿ.ದೇವರಾಜ್ ಅರಸು ಜಯಂತಿ ಅಂಗವಾಗಿ ಬ್ಲಾಕ್ ಕಾಂಗ್ರೆಸ್‍ನ ಅಲ್ಪಸಂಖ್ಯಾತರ ಘಟಕದಿಂದ ಅಂಧ ಮಕ್ಕಳಿಗೆ ಬ್ರೈಲ್ ಲಿಪಿಯ ಸ್ಲೇಟ್‍ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸಲು ಮಾಜಿ ಪ್ರಧಾನಮಂತ್ರಿ ರಾಜೀವ್‍ಗಾಂಧಿ ಮೂಲ ಕಾರಣಕರ್ತರು ಎಂದ ಅವರು ಹಾಗೆಯೇ ಸಮಾಜದಲ್ಲಿರುವ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಡಿ.ದೇವರಾಜ್ ಅರಸು ಅವರ ದೂರದೃಷ್ಠಿಯಿಂದ ರಾಜ್ಯ ಮತ್ತು ರಾಷ್ಟ್ರ ಪ್ರಗತಿಪಥದತ್ತ ಮುನ್ನಡೆಯುತ್ತಿದೆ ಎಂದರು.
 ನಗರಸಭೆ ಸದಸ್ಯ ಅಬ್ದುಲ್ ಗಫೂರ್ ಮಾತನಾಡಿ ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸಿ ಕೃಷಿ,ನೀರಾವರಿ,ಆರೋಗ್ಯ,ಕೈಗಾರಿಕೆ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದರೆ ಮಾಜಿ ಪ್ರಧಾನಮಂತ್ರಿ ದಿ.ರಾಜೀವ್‍ಗಾಂಧಿನವರು ಶಿಕ್ಷಣದ ವ್ಯವಸ್ಥೆಯನ್ನು ಸುಧಾರಿಸಿದರಲ್ಲದೆ ಮಾಹಿತಿ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದ ಫಲದಿಂದಾಗಿ ಇಂದಿನ ಯುವ ಪೀಳಿಗೆ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸುತ್ತಿದ್ದಾರೆ ಎಂದರು.
ಆಶಾಕಿರಣ ಅಂಧ ಮಕ್ಕಳ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಬ್ರೈಲ್ ಲಿಪಿಯ ಮಾದರಿಯ ಸ್ಲೇಟ್‍ಗಳನ್ನು ವಿತರಿಸಲಾಯಿತು. ಮದ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಬ್ದುಲ್ ಗಫೂರ್, ರೀಲರ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಅನ್ಸರ್ ಖಾನ್,ಬಾಷಾ(ರಫೀಖ್),ಯೂಸೂಪ್,ಖಲಂಧರ್, ಅಕ್ರಂಪಾಷ, ವಾಜಿದ್ ಮತ್ತಿತರರು ಉಪಸ್ಥಿತರಿದ್ದರು.

 

Read These Next

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...