ಶಿಡ್ಲಘಟ್ಟ:ರೈತರ 76 ಸಾವಿರ ಕೋಟಿ ಸಾಲ ಮನ್ನಾ - ರೋಗ್ರಗ್ರಸ್ಥವಾಗಿದ್ದ ಡಿಸಿಸಿ ಬ್ಯಾಂಕ್ ಗೆ ಮರುಜೀವ-ಮುನಿಯಪ್ಪ

Source: tamim | By Arshad Koppa | Published on 13th October 2017, 9:29 AM | State News |

ಶಿಡ್ಲಘಟ್ಟ,ಅಕ್ಟೋಬರ್12: ಕೇಂದ್ರದಲ್ಲಿ ಅಧಿಕಾರ ನಡೆಸಿದ ಯುಪಿಎ ಸರಕಾರ ರೈತರ 76 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದ್ದ ಫಲದಿಂದಾಗಿ ರೋಗ್ರಗ್ರಸ್ಥವಾಗಿದ್ದ ಡಿಸಿಸಿ ಬ್ಯಾಂಕ್ ಸಹಿತ ಸಹಕಾರ ಸಂಘಗಳಿಗೆ ಮರುಜೀವ ಬಂದಿದೆ ಎಂದು ಮಾಜಿ ಸಚಿವ ವಿ.ಮುನಿಯಪ್ಪ ಹೇಳಿದರು.
     ನಗರದ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರು ಹಾಗೂ ರೈತರ ಸಹಕಾರ ಸೇವಾ ಬ್ಯಾಂಕಿನಿಂದ ರೈತರಿಗೆ ಕೆಸಿಸಿ ಸಾಲ ಹಾಗೂ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದ ಯುಪಿಎ ಸರಕಾರ ದೇಶದ ಅನ್ನದಾನವಾಗಿರುವ ರೈತರ 76 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿ ಪುನಃ ಸಾಲ ಸೌಲಭ್ಯ ಕಲ್ಪಿಸಲು ಕೈಗೊಂಡ ತೀರ್ಮಾನದಿಂದ ದೇಶಾದ್ಯಂತ ರೋಗಗ್ರಸ್ಥವಾಗಿದ್ದು ಸಹಕಾರ ಸಂಘಗಳು ಪುನರಜೀವ್ ಪಡೆದುಕೊಂಡು ರೈತರು ಮತ್ತು ಸ್ವಸಹಾಯ ಸಂಘಗಳಿಗೆ ನೆರವು ನೀಡುವ ಸ್ಥಿತಿಗೆ ತಲುಪಿವೆ ಎಂದರು.
     ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಮಾತನಾಡಿ, ರಾಜ್ಯದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸುಮಾರು ಒಂದು ಸಾವಿರ ಕೋಟಿಯಷ್ಟು ಸಾಲ ನೀಡಿದ್ದರೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮಾತ್ರವೇ ಸುಮಾರು 500 ಕೋಟಿಯಷ್ಟು ಸಾಲ ವಿತರಿಸಲಾಗಿದೆ ಎಂದರಲ್ಲದೆ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ರೈತರು ಮತ್ತು ಸ್ವಸಹಾಯ ಸಂಘಗಳ ಮಹಿಳೆಯ ಆರ್ಥಿಕವಾಗಿ ಸದೃಡಗೊಳ್ಳಬೇಕೆಂಬುದೇ ತಮ್ಮ ಮುಖ್ಯ ಗುರಿ ಈ ನಿಟ್ಟಿನಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು ಸಹ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದಾರೆ ಎಂದರು.
    ಎಸ್‍ಎಫ್‍ಸಿಎಸ್‍ನಿಂದ ರಸಗೊಬ್ಬರ ಮಾರಾಟ ಕೇಂದ್ರ ಹಾಗೂ ನಲ್ಲಿಮರದಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಯಿತು. ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ರೈತರಿಗೆ ಸಾಲದ ಚೆಕ್‍ಗಳನ್ನು ವಿತರಿಸಲಾಯಿತು.
    ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ನಾಗರಾಜ್, ನಿರ್ದೇಶಕ ಪಿ.ಶಿವಾರೆಡ್ಡಿ,ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಆನಂದ್, ಎಸ್‍ಎಫ್‍ಸಿಎಸ್ ಬ್ಯಾಂಕಿನ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಶೆಟ್ಟಹಳ್ಳಿ ರಾಮಚಂದ್ರ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಗೋಪಾಲ್, ಮಾಜಿ ಅಧ್ಯಕ್ಷ ರಾಮಚಂದ್ರ, ಜಿಲ್ಲಾ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಮುನಿಕೃಷ್ಣಪ್ಪ,ಜಿಪಂ ಮಾಜಿ ಸದಸ್ಯ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಶಿಡ್ಲಘಟ್ಟದಲ್ಲಿ ಎಸ್.ಎಫ್.ಸಿ.ಎಸ್ ಬ್ಯಾಂಕಿನ ಮೂಲಕ ಸ್ವಸಹಾಯ ಸಂಘಗಳು ಮತ್ತು ರೈತರಿಗೆ ಸಾಲಸೌಲಭ್ಯ ವಿತರಣಾ ಸಮಾರಂಭದಲ್ಲಿ ಮಾಜಿ ಸಚಿವ ವಿ.ಮುನಿಯಪ್ಪ ಅವರನ್ನು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಗೋವಿಂದಗೌಡ ಸನ್ಮಾನಿಸಿದರು.

Read These Next