ಶಿಡ್ಲಘಟ್ಟ:ಕುಡಿಯುವ ನೀರಿನ ಮತ್ತು ಮೇವಿನ ಸಮಸ್ಯೆ ನಿವಾರಣೆಗೆ ಪ್ರಥಮ ಆದ್ಯತೆ ನೀಡಲು ತಹಶೀಲ್ದಾರ್ ಅಜೀತಕುಮಾರ್ ರೈ ಸೂಚನೆ

Source: tamim | By Arshad Koppa | Published on 22nd February 2017, 11:05 PM | State News |

ಶಿಡ್ಲಘಟ್ಟ,ಫೆಬ್ರವರಿ22: ತಾಲೂಕಿನಲ್ಲಿ ಕುಡಿಯುವ ನೀರು ಮತ್ತು ದನಕರುಗಳಿಗೆ ಮೇವಿನ ಸಮಸ್ಯೆ ಉಲ್ಬಣಗೊಳ್ಳದಂತೆ ಜಾಗೃತಿವಹಿಸಬೇಕೆಂದು ತಹಶೀಲ್ದಾರ್ ಅಜೀತಕುಮಾರ್ ರೈ ಸೂಚಿಸಿದರು.
    ನಗರದ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿಗಳ ಪಿಡಿಓ/ಕಾರ್ಯದರ್ಶಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು/ರಾಜಸ್ವ ನಿರೀಕ್ಷಕರ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಬರಗಾಲ ಆವರಿಸಿದ್ದರಿಂದ ಯಾವುದೇ ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಕೂಡಲೇ ವರದಿ ಸಲ್ಲಿಸಬೇಕೆಂದು ತಹಶೀಲ್ದಾರ್ ಸೂಚಿಸಿದರು ಕುಡಿಯುವ ನೀರಿನ ಸಮಸ್ಯೆಯನ್ನು ಲಘುವಾಗಿ ಪರಿಗಣಿಸುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.
    ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತಾಲೂಕು ಆಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು/ರಾಜಸ್ವ ನಿರೀಕ್ಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ತಾಕೀತು ಮಾಡಿದ ಅವರು ಏನಾದರೂ ಸಮಸ್ಯೆ ಇದ್ದರೇ ಕೂಡಲೇ ಗಮನಕ್ಕೆ ತರಬೇಕೆಂದು ಸಲಹೆ ನೀಡಿ ತಾಲೂಕಿನಲ್ಲಿ ಈಗಾಗಲೇ ಮೇವಿನ ಕೇಂದ್ರಗಳನ್ನು ತೆರೆಯಲಾಗಿದೆ ಪಶು ವೈದ್ಯಾಧಿಕಾರಿಗಳ ಧೃಡಕರಣದೊಂದಿಗೆ ಒಂದು ಹಸುವಿಗೆ ತಲಾ ಐದು ಕೆ.ಜಿಯಂತೆ ವಾರಕ್ಕೆ 35 ಕೆ.ಜಿ.ಮೇವು 70 ರೂಗಳನ್ನು ಪಾವತಿಸಿ ಪಡೆದುಕೊಳ್ಳಲು ರೈತರಿಗೆ ಮನವರಿಕೆ ಮಾಡಿಕೊಡಬೇಕೆಂದರು.
    ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಈಗಾಗಲೇ ಸಿದ್ದತೆ ಮಾಡಿಕೊಳ್ಳಲು ಸರ್ವಸನ್ನದರಾಗಬೇಕೆಂದ ಅವರು ತಾಲೂಕಿನಲ್ಲಿ ಪ್ರಸ್ತುತ ಸುಮಾರು 20 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ ಎಂದು ಮಾಹಿತಿ ಲಭಿಸಿದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ ನೀರು ಪಡೆಯಲು ಯೋಜನೆಯನ್ನು ರೂಪಿಸಿಕೊಳ್ಳಬೇಕೆಂದು ಆದೇಶಿಸಿದರು.
    ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಪಿಡಿಓ/ಕಾರ್ಯದರ್ಶಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ತೂಕದ ಯಂತ್ರಗಳನ್ನು ವಿತರಿಸಲಾಯಿತು ತಾಪಂ ಇಓ ವೆಂಕಟೇಶ್,ಪಶು ಇಲಾಖೆಯ ಸಹಾಯಕ ನಿರ್ದೇಶಕ ಮುನಿನಾರಾಯಣರೆಡ್ಡಿ,


 

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...