ಕಾರವಾರ: ಸೆ. ೧೬ ರಂತೆ ಜಿಲ್ಲೆಯಲ್ಲಾದ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟs

Source: tamim | By Arshad Koppa | Published on 20th October 2017, 12:24 PM | State News |

ಶಿಡ್ಲಘಟ್ಟ,ಅಕ್ಟೋಬರ್19: ಮಹಿಳೆಯರು ಶೈಕ್ಷಣಿಕವಾಗಿ ಮೇಲುಗೈ ಸಾಧಿಸಿ ಉದ್ಯೋಗಾಧಾರಿತ ತರಬೇತಿಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಿ ಜೀವನ ನಡೆಸಿದಾಗ ಮಾತ್ರ ಸದೃಡ ರಾಷ್ಟ್ರವನ್ನು ನಿರ್ಮಿಸಲು ಸಾಧ್ಯವೆಂದು ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಅದ್ಯಕ್ಷ ಆಂಜಿನಪ್ಪ(ಪುಟ್ಟು) ತಿಳಿಸಿದರು.
    ನಗರದಲ್ಲಿ ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಕಛೇರಿಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಬಡ ಹೆಣ್ಣು ಮಕ್ಕಳಿಗೆ ಉಚಿತ ಹೊಲಿಗೆಯಂತ್ರ, ಶ್ರವಣದೋಷ ಇರುವವರಿಗೆ ಶ್ರವಣ ಯಂತ್ರ ಹಾಗೂ ಅಂಗವಿಕಲರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜೀವನದ ಚಕ್ರದಲ್ಲಿ ಪತಿಯೊಂದಿಗೆ ಪತ್ನಿ ಸಹ ದುಡಿದಾಗ ಮಾತ್ರ ಕುಟುಂಬ ನಿರ್ವಹಣೆಯ ಜೊತೆಗೆ ಆದರ್ಶ ಸಮಾಜವನ್ನು ನಿರ್ಮಿಸಲು ಸಾಧ್ಯವೆಂದು ಪ್ರತಿಪಾದಿಸಿದ ಅವರು ಈ ನಿಟ್ಟಿನಲ್ಲಿ ಟ್ರಸ್ಟ್‍ನ ಮೂಲಕ ವಿಶೇಷ ತರಬೇತಿ ಶಿಬಿರಗಳನ್ನು ಆಯೋಜಿಸಿ ಮಹಿಳೆಯರನ್ನು ಸ್ವಾವಲಂಬಿಗಳಾಗಿ ಜೀವನ ನಡೆಸಲು ಪ್ರೋತ್ಸಾಹಿಸಲಾಗುತ್ತದೆ ಎಂದರು.
    ಸಮಾಜದಲ್ಲಿರುವ ಪುರುಷರಂತೆ ಸಮಾನರಾಗಿ ಮಹಿಳೆಯರು ವಿವಿಧ ರಂಗಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ದೇಶದ ಜನಸಂಖ್ಯೆಯಲ್ಲಿ ಸಿಂಹಪಾಲು ಹೊಂದಿರುವ ಮಹಿಳೆಯರು ಶೈಕ್ಷಣಿಕ,ಸಾಮಾಜಿಕ,ರಾಜಕೀಯ ಹಾಗೂ ಆರ್ಥಿಕವಾಗಿ ಸದೃಡರಾಗಿ ಸಬಲರಾಗಿ ಸ್ವಾವಲಂಬಿಗಳಾಗಿ ಜೀವನ ನಡೆಸುವ ಮೂಲಕ ಮುಖ್ಯವಾಹಿನಿಯಲ್ಲಿ ಬರಬೇಕೆಂದು ಕರೆ ನೀಡಿದರು.
    ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ಎಸ್.ವಿ.ಐಯರ್, ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಕಾರ್ಯದರ್ಶಿ ವಿಶ್ವನಾಥ್,ಗೌರವಾಧ್ಯಕ್ಷ ಆನೂರು ದೇವರಾಜು, ತಾಪಂ ಸದಸ್ಯ ಶ್ರೀನಿವಾಸ್, ಮಳಮಾಚನಹಳ್ಳಿ ಬೈರೇಗೌಡ,ಆನೂರು ನಟರಾಜ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ,ನಾರಾಯಣಸ್ವಾಮಿ, ಟಿಪ್ಪಿಸೆಕ್ಯೂಲರ್ ಸೇನೆಯ ಅಪ್ಸರ್ ಪಾಷ ಮತ್ತಿತರರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...