ಶಿಡ್ಲಘಟ್ಟ:ವಿವಿಧೆಡೆ ಅಂಗಡಿಗಳ ಮೇಲೆ ಧಾಳಿ-ನಾಲ್ಕು ಕ್ವಿಂಟಾಲ್ ಪ್ಲಾಸ್ಟಿಕ್ ವಶಕ್ಕೆ

Source: tamim | By Arshad Koppa | Published on 29th July 2017, 8:25 PM | State News | Guest Editorial |

ಶಿಡ್ಲಘಟ್ಟ,ಜುಲೈ29: ನಗರದ ವಿವಿಧಡೆ ದಾಳಿ ನಡೆಸಿದ ನಗರಸಭೆ ಆಧಿಕಾರಿಗಳು 4 ಕ್ವಿಂಟಾಲ್‍ನಷ್ಟು ಪ್ಲಾಸ್ಟಿಕ್ ವಶ ಪಡಿಸಿಕೊಂಡಿದ್ದು 17 ಸಾವಿರ ರೂಪಾಯಿಗಳ ದಂಡ ವಿಧಿಸಿ ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
    ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ನೇತೃತ್ವದಲ್ಲಿ ಪರಿಸರ, ಆರೋಗ್ಯ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಯು ದಿಡೀರ್ ದಾಳಿ ನಡೆಸಿ ನಾಲ್ಕು ಕ್ವಿಂಟಾಲ್‍ನಷ್ಟು ಪ್ಲಾಸ್ಟಿಕ್ ವಶಪಡಿಸಿಕೊಂಡು 17 ಸಾವಿರ ರೂಪಾಯಿಗಳ ದಂಡ ವಿಧಿಸಿದರು.
    ನಗರದ ಪ್ರವಾಸಿ ಮಂದಿರ ರಸ್ತೆ, ಸಾರಿಗೆ ಬಸ್ ನಿಲ್ದಾಣ ಬಳಿ ಇರುವ ಬೇಕರಿ, ಬಟ್ಟೆ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್ ಕವರ್ ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್‍ನ್ನು ವಶಪಡಿಸಿಕೊಂಡರು ಮಳಿಗೆಗಳಲ್ಲಿ ಪ್ಲಾಸ್ಟಿಕ್ ದಾಸ್ತಾನು ಮಾಡಿದ್ದ ಹಿನ್ನೆಲೆಯಲ್ಲಿ ದಂಡ ವಿಧಿಸಿ ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡಿದ್ದೇ ಆದಲ್ಲಿ ಪರವಾನಗಿಯನ್ನು ರದ್ದುಪಡಿಸುವ ಎಚ್ಚರಿಕೆ ನೀಡಿದರು.
    ಕೆಲ ಅಂಗಡಿ, ಬೇಕರಿ ಮಾಲೀಕರು ಪ್ಲಾಸ್ಟಿಕ್ ಮಾರಾಟ ಮಾಡಬಾರದು ಅಂತ ನಮಗೆ ಗೊತ್ತಿಲ್ಲ ನಾವು ಪ್ಲಾಸ್ಟಿಕ್ ಕವರ್‍ಗಳಷ್ಟೆ ಮಾರಾಟ ಮಾಡುತ್ತಿದ್ದೇವೆ, ಈ ಬಾರಿ ಬಿಡಿ ಮುಂದಿನ ಬಾರಿ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳನ್ನು ಕೇಳಿಕೊಂಡು ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ನೋಡಿದರು ಆದರೆ ಯಾವುದೆ ಮುಲಾಜು ನೋಡದ ಅಧಿಕಾರಿಗಳು ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿ ಮುಂದೆ ಮಾರಾಟ ಮಾಡಿದ್ದೇ ಆದಲ್ಲಿ ವ್ಯಾಪಾರ ವಹಿವಾಟಿನ ಪರವಾನಗಿಯನ್ನೆ ರದ್ದುಪಡಿಸುವ ಎಚ್ಚರಿಕೆ ನೀಡಿದರು.
    ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸಯೀದಾ, ಆಂಜಿನಪ್ಪ, ರಾಜಸ್ವ ನಿರೀಕ್ಷಕ ಮಧು,ಅಪ್ಪಿ,ನೀರು ಸರಬರಾಜು ವಿಭಾಗದ ಮುರಳಿ ಇನ್ನಿತರೆ ನಗರಸಭೆಯ ಆಧಿಕಾರಿ, ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.


 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...