ಶಿಡ್ಲಘಟ್ಟ: ಪುಸ್ತಕ ಓದಿ  ಜ್ಞಾನರ್ಜನೆಯನ್ನು ಹೆಚ್ಚಿಸಿಕೊಳ್ಳಲು ಶ್ರೀನಿವಾಸಯ್ಯ ಕರೆ

Source: tamim | By Arshad Koppa | Published on 14th August 2017, 7:48 AM | State News | Guest Editorial |


ಶಿಡ್ಲಘಟ್ಟ,ಆಗಸ್ಟ್13: ಸಮಾಜದಲ್ಲಿರುವ ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಮೂಲಕ ಜ್ಞಾನರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ಗ್ರಂಥಾಲಯದ ಮೇಲ್ವಿಚಾರಕ ಶ್ರೀನಿವಾಸಯ್ಯ ತಿಳಿಸಿದರು.
    ನಗರದ ಸಾರ್ವಜನಿಕ ಗ್ರಂಥಾಲಯದ ಆವರಣದಲ್ಲಿ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ಗ್ರಂಥಾಲಯ ವಿಜ್ಞಾನದ ಪಿತಾಮಹಾ ಡಾ.ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ ಮಾತನಾಡಿದ ಅವರು ಸಾರ್ವಜನಿಕ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಪುಸ್ತಕಗಳ ಸಮೇತ ಸುಮಾರು 28,405 ಪುಸ್ತಕಗಳಿವೆ ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ ಓದುಗರು ಹೆಚ್ಚಾಗಬೇಕು ಪುಸ್ತಕಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
    ಗ್ರಂಥಾಲಯದಲ್ಲಿ ಪ್ರತಿನಿತ್ಯ 28 ದಿನ ಪತ್ರಿಕೆಗಳು, 15ಕ್ಕೂ ಹೆಚ್ಚು ವಾರ ಮತ್ತು ಮಾಸಪತ್ರಿಕೆಗಳನ್ನು ತರಿಸುತ್ತೇವೆ ಗ್ರಂಥಾಲಯದ ಸದಸ್ಯರ ಸಂಖ್ಯೆ ಮಾತ್ರ 1,480 ಇದೆ ಈ ಸಂಖ್ಯೆ ಹೆಚ್ಚಾಗಬೇಕಿದೆ ನಾಗರಿಕರು ಈ ನಿಟ್ಟಿನಲ್ಲಿ ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
    ಗ್ರಂಥಾಲಯದ ಸಿಬ್ಬಂದಿ ವರ್ಗದವರು ಹಾಗೂ ಓದುಗರು ಉಪಸ್ಥಿತರಿದ್ದರು.
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...