ಶಿಡ್ಲಘಟ್ಟ:ಅಕ್ಷರದಾಸೋಹ ಯೋಜನೆಗೆ ಕಳಪೆ ಗುಣಮಟ್ಟದ ದಿನಸಿ ಪದಾರ್ಥ ಪೂರೈಕೆ-ಧಿಡೀರ್ ಪರಿಶೀಲನೆ

Source: tamim | By Arshad Koppa | Published on 22nd September 2017, 1:57 PM | State News |

ಶಿಡ್ಲಘಟ್ಟ,ಸೆಪ್ಟೆಂಬರ್21: ಅಕ್ಷರದಾಸೋಹ ಯೋಜನೆಯಡಿ ಬಿಸಿಯೂಟ ತಯಾರಿಸಲು ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿಯ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ನಗರದ ಶಾರದಾ ವಿದ್ಯಾಸಂಸ್ಥೆಗೆ ದಿಡೀರ್ ಭೇಟಿ ನೀಡಿ ಅಕ್ಷರದಾಸೋಹ ಯೋಜನೆಯ ಪದಾರ್ಥಗಳನ್ನು ಪರಿಶೀಲಿಸಿದರು.
    ನಗರದ ಅನುದಾನಿತ ಶಾರದಾ ವಿದ್ಯಾಸಂಸ್ಥೆಗೆ ದಿಢೀರ್ ಭೇಟಿ ನೀಡಿದ ತಾಪಂ ಅಧ್ಯಕ್ಷರು ಅಕ್ಷರದಾಸೋಹ ಯೋಜನೆಯಡಿ ಬಿಸಿಯೂಟ ತಯಾರಿಸಲು ಅಕ್ಕಿ ಮತ್ತು ತೊಗರಿ ಬೇಳೆಯನ್ನು ಪರಿಶೀಲಿಸಿ ಅಸಮಾಧಾನ ವ್ಯಕ್ತಪಡಿಸಿದರು.
    ಶಾರದಾ ವಿದ್ಯಾಸಂಸ್ಥೆಗೆ ಭೇಟಿ ನೀಡಿ ಅಕ್ಷರದಾಸೋಗ ಯೋಜನೆಗೆ ಸಂಬಂಧಿಸಿದಂತೆ ಸರಬರಾಜು ಮಾಡಿರುವ ಅಕ್ಕಿ ಮತ್ತು ಬೇಳೆಯನ್ನು ಪರಿಶೀಲಿಸಿದಾಗ ಕಳಪೆ ಮಟ್ಟದ ತೊಗರಿ ಬೇಳೆಯನ್ನು ಸರಬರಾಜು ಮಾಡಿರುವುದನ್ನು ಪತ್ತೆಹಚ್ಚಿದ್ದರಲ್ಲದೆ ಕಳಪೆ ಮಟ್ಟದ ತೊಗರಿ ಬೇಳೆ ಸರಬರಾಜು ಮಾಡಿದ್ದರು ಸಹ ತಾವು ಏಕೆ ದೂರು ನೀಡಿಲ್ಲವೆಂದು ಮುಖ್ಯ ಶಿಕ್ಷಕರನ್ನು ಪ್ರಶ್ನಿಸಿದರು ನಿಮ್ಮ ಮಕ್ಕಳಿಗೆ ಇದೇ ರೀತಿಯ ಆಹಾರವನ್ನು ತಯಾರಿಸುತ್ತೀರಾ ಅವರು ನಿಮ್ಮ ಮಕ್ಕಳ ಅಲ್ಲವೇ? ಎಂದು ಪ್ರಶ್ನಿಸಿ ಕೂಡಲೇ ಬದಲಾಯಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
    ಶಾಲೆಯಲ್ಲಿ ಸುಮಾರು 233 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಬಹುತೇಕ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮುಖ್ಯಶಿಕ್ಷಕರು ಮಾಹಿತಿ ನೀಡಿದರು ಅಕ್ಷರದಾಸೋಹ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ನ್ಯಾಯಯುತವಾಗಿ ಆಹಾರವನ್ನು ಪೂರೈಕೆ ಮಾಡಲಾಗುತ್ತದೆಯೇ? ಎಂಬುದರ ವಿಚಾರದಲ್ಲಿ ಶಿಕ್ಷಕರನ್ನು ಮತ್ತು ಸಂಸ್ಥೆಯ ಮುಖ್ಯಸ್ಥರನ್ನು ಸಮಗ್ರವಾಗಿ ಮಾಹಿತಿ ಸಂಗ್ರಹಿಸಿದರಲ್ಲದೆ ಅಕ್ಕಿ ಮತ್ತು ಬೇಳೆ ಸರಬರಾಜಿಗೆ ಸಂಬಂಧಿಸಿದಂತೆ ಕಡತಗಳನ್ನು ಪರಿಶೀಲಿಸಿ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದರು.
    ಈ ಸಂದರ್ಭದಲ್ಲಿ ತಾಪಂ ವೆಂಕಟರಾಯಪ್ಪ, ಶಾರದಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್, ಮುಖ್ಯೋಪಾಧ್ಯಾಯಿನಿ ವಿಜಯ, ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕøತರಾದ ಹೇಮಕುಮಾರಿ,ಸಹ ಶಿಕ್ಷಕ ಕೆಂಪಣ್ಣ 

ಶಿಡ್ಲಘಟ್ಟದ ಶಾರದಾ ವಿದ್ಯಾಸಂಸ್ಥೆಯಲ್ಲಿ ಅಕ್ಷರದಾಸೋಹ ಯೋಜನೆಗೆ ಸಂಬಂಧಿಸಿದಂತೆ ನೀಡಲಾಗಿರುವ ನಿರ್ವಹಿಸಿರುವ ಕಡತಗಳನ್ನು ತಾಪಂ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ಪರಿಶೀಲಿಸಿದರು. 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...