ಶಿಡ್ಲಘಟ್ಟ:ರಾಜ್ಯದಲ್ಲಿ ಮಹಿಳೆಯರು ಶೈಕ್ಷಣಿಕ,ಸಾಮಾಜಿಕ,ರಾಜಕೀಯ ಹಾಗೂ ಆರ್ಥಿಕವಾಗಿ ಸಬಲರಾಗಲು ಮುನಿಯಪ್ಪ ಕರೆ

Source: tamim | By Arshad Koppa | Published on 23rd October 2017, 8:06 AM | State News |

ಶಿಡ್ಲಘಟ್ಟ,ಅಕ್ಟೋಬರ್22: ರಾಜ್ಯದಲ್ಲಿ ಮಹಿಳೆಯರು ಶೈಕ್ಷಣಿಕ,ಸಾಮಾಜಿಕ,ರಾಜಕೀಯ ಹಾಗೂ ಆರ್ಥಿಕವಾಗಿ ಸಬಲರಾಗಬೇಕೆಂದು ಕಾಂಗ್ರೇಸ್ ಸರಕಾರ ವಿಶೇಷ ಆದ್ಯತೆ ನೀಡಿದೆ ಎಂದು ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ವಿ.ಮುನಿಯಪ್ಪ ಹೇಳಿದರು.
    ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಶಿಡ್ಲಘಟ್ಟ ತಾಲೂಕು ಬ್ಲಾಕ್ ಕಾಂಗ್ರೇಸ್ ಮಹಿಳಾ ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾತನಾಡಿದ ಅವರು ಸಮಾಜದಲ್ಲಿ ಮಹಿಳೆಯರು ಸಮಾನರಾಗಿ ಬದುಕಬೇಕೆಂದು ಅನೇಕ ಕ್ರಾಂತಿಕಾರಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಮಹಿಳೆಯರಿಗೆ ಎಲ್ಲಾ ರಂಗಗಳಲ್ಲಿ ಮೀಸಲಾತಿಯನ್ನು ಜಾರಿಗೊಳಿಸಲು ಸರಕಾರ ಬದ್ದವಾಗಿದೆ ಎಂದರು.
    ಸ್ತ್ರೀಶಕ್ತಿ ಸಂಘಗಳ ರಚನೆ: ಗ್ರಾಮೀಣ ಅಭಿವೃಧ್ಧಿಯಲ್ಲಿ ಸಕ್ರೀಯ ಪಾತ್ರವಹಿಸುತ್ತಿರುವ ಸ್ತ್ರೀಶಕ್ತಿ ಸಂಘಗಳನ್ನು ಮಾಜಿ ಸಚಿವೆ ಮೋಟಮ್ಮ ವಿಶೇಷ ಆಸಕ್ತಿವಹಿಸಿ ರಚಿಸಿದರು ಪ್ರತಿಯೊಂದು ಹಳ್ಳಿಯಲ್ಲಿ ಸ್ತ್ರೀಶಕ್ತಿ ಸಂಘಗಳನ್ನು ರಚಿಸಿಕೊಂಡು ಮಹಿಳೆಯರು ಉದ್ಯೋಗಾಧಾರಿತ ತರಬೇತಿಗಳನ್ನು ಪಡೆದುಕೊಂಡು ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು.
    ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗ, ದಲಿತರು ಸೇರಿ ಎಲ್ಲ ವರ್ಗ, ಜಾತಿ, ಧರ್ಮದವರಿಗೂ ಪಕ್ಷ ಸಂಘಟನೆಯಲ್ಲಿ ಸಮಾನ ಅವಕಾಶ ಕೊಡಲಾಗುತ್ತಿದೆ, ಈ ತಿಂಗಳ ಅಂತ್ಯಕ್ಕೆ ಎಲ್ಲ ಘಟಕಗಳ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಯನ್ನು ಮುಗಿಸಲಾಗುವುದು ಎಂದು ವಿವರಿಸಿದರು.
    ಶಿಡ್ಲಘಟ್ಟ ತಾಲೂಕು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಮಳ್ಳೂರು ಗ್ರಾಮದ ವನಿತಾಶ್ರೀನಿವಾಸ್ ಸೇರಿದಂತೆ ವಿವಿದ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಿಸಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.
    ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಸಮಿತಿ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ, ಹಾಪ್‍ಕಾಮ್ಸ್ ಅಧ್ಯಕ್ಷ ಮುತ್ತೂರು ಚಂದ್ರೇಗೌಡ,ಎಪಿಎಂಸಿ ನಿರ್ದೇಶಕ ಮೇಲೂರು ಮುರಳಿ,ಮಳ್ಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯರಾಂರೆಡ್ಡಿ, ಕಾಚಹಳ್ಳಿ ರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು...

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...