ಶಿಡ್ಲಘಟ್ಟ:  ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೈರ್ಮಲ್ಯ ಕಾಪಾಡಲು ಆದ್ಯತೆಗೆ ಡಾ. ಅನಿಲ್ ಕುಮಾರ್ ಕರೆ

Source: tamim | By Arshad Koppa | Published on 5th January 2017, 8:45 AM | State News |



ಶಿಡ್ಲಘಟ್ಟ,ಜನವರಿ03: ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೈರ್ಮಲ್ಯ ಕಾಪಾಡಲು ಹೆಚ್ಚು ಒತ್ತು ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‍ಕುಮಾರ್ ಹೇಳಿದರು.
    ನಗರದ ಸ್ತ್ರೀಶಕ್ತಿ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು ಆಯೋಜಿಸಿದ್ದ ಕಾರ್ಯಗಾರವನ್ನು ಮಾತನಾಡಿದ ಅವರು ವೈಜ್ಞಾನಿಕವಾಗಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಿಬ್ಬಂದಿ ವಿಶೇಷ ಆಸಕ್ತಿವಹಿಸಬೇಕೆಂದು ಸಲಹೆ ನೀಡಿದ ಅವರು ಪ್ರತ್ಯೇಕವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದರು.
    ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಮೂಲಕ ರೋಗಿಗಳು ತ್ವರಿತವಾಗಿ ಗುಣಮುಖರಾಗಲು ಸಹಕರಿಸಬೇಕೆಂದರಲ್ಲದೇ ಅಪಘಾತಕ್ಕೊಳಗಾಗಿ ಚಿಕಿತ್ಸೆಗೆಂದು ಬರುವ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡುವ ವಿಧಾನ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಅರಿವು ಮೂಡಿಸಿದರು.
    ಆಸ್ಪತ್ರೆಗಳಲ್ಲಿ ರೋಗಿಗಳ ಆರೋಗ್ಯವನ್ನು ವಿಚಾರಿಸಲು ಬರುವ ಸಂಬಂಧಿಕರಿಗೆ ಯಾವುದೇ ರೀತಿಯಯ ಸೋಂಕು ತೆಗಲುದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಎಚ್ಚರವಹಿಸಿ ಪ್ರತ್ಯೇಕವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ಜಾಗೃತಿವಹಿಸಬೇಕೆಂದು ಸೂಚಿಸಿದರು.
    ಜಿಲ್ಲೆಗೆ ಮಾದರಿ ಸಾರ್ವಜನಿಕ ಆಸ್ಪತ್ರೆ: ಆರೋಗ್ಯ ಇಲಾಖೆಯ ಮೂಲಕ ಜಾರಿಗೊಳಿಸುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಆಸ್ಪತ್ರೆಗಳಿಗೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆ ಮಾದರಿಯಾಗಿದೆ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹ ಉತ್ತಮವಾಗಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
    ಹೆಚ್ಚು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಯೋಜನಾ ನಿರ್ವಹಣಾಧಿಕಾರಿ ಡಾ.ಚಂದ್ರಮೋಹನ್,ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೀಮಾ,ಫ್ಲೋರೈಡ್ ತಜ್ಞರಾದ ವಿನೋದ್,ಡಾ.ಸುರೇಂದ್ರ(ಆರ್.ಸಿ.ಎಚ್),ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸುನೀತಾ,ಹಿರಿಯ ಸಹಾಯಕ ಆರೋಗ್ಯ ಅಧಿಕಾರಿ ದಾದಾಪೀರ್,ನಂದಿನಿ,ಅಫ್ರೋಝ್,ಚೈತ್ರ ಮತ್ತಿತರರು ಉಪಸ್ಥಿತರಿದ್ದರು.
    ರಾಷ್ಟ್ರೀಯ ಆರೋಗ್ಯ ಅಭಿಯಾನ,ಸ್ವಚ್ಛಭಾರತ ಅಭಿಯಾನ,ಕಾಯಕಲ್ಪ ಯೋಜನೆ ಕಾರ್ಯಕ್ರಮದ ಮೂಲಕ ಫೆಸೆಲಿಟಿ ಲೆವೆಲ್ ತರಬೇತಿ ಕಾರ್ಯಗಾರದಲ್ಲಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು,ಎ.ಎನ್.ಎಂಗಳು,ಸ್ಟಾಫ್‍ನರ್ಸಗಳು,ಪ್ರಯೋಗಾಲಯ ತಂತ್ರಜ್ಞರು,ಔಷಧಿ ವಿತರಿಕರು,ಗುಮಾಸ್ತರು,ಡಿಗ್ರೂಪ್ ನೌಕರರು,ಸ್ವಚ್ಛತಾ ಕಾರ್ಯನಿರ್ವಹಿಸುವ ಸಿಬ್ಬಂದಿ ಭಾಗವಹಿಸಿದರು.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...