ಶಿಡ್ಲಘಟ್ಟ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಕ್ಕೆ ಆಗ್ರಹಿಸಿ ಪ್ರತಿಭಟನೆ

Source: tamim | By Arshad Koppa | Published on 12th August 2017, 8:01 AM | State News | Guest Editorial |

ಶಿಡ್ಲಘಟ್ಟ,ಆಗಸ್ಟ್11:ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಎಬಿವಿಪಿ ಸಂಘಟನೆಯ ಆಶ್ರಯದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
    ನಗರದ ತಾಲ್ಲೂಕು ಕಚೇರಿಗೆ ತೆರಳಿದ ವಿದ್ಯಾರ್ಥಿನಿಯರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 300 ಮಂದಿ ವಿದ್ಯಾರ್ಥಿನಿಯರು ವಿವಿಧ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಕಾಲೇಜಿನಲ್ಲಿ ಶೌಚಾಲಯವಿದ್ದರೂ ಬಾಗಿಲು, ಕಿಟಕಿಗಳಿಲ್ಲ, ನೀರಿನ ವ್ಯವಸ್ಥೆಯಿಲ್ಲ ಈ ಸಮಸ್ಯೆಯಿಂದಾಗಿ ತೀವ್ರ ತೊಂದರೆಯಾಗುತ್ತಿದೆ ದೂರದ ಊರುಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಕಷ್ಟ ಪಡುವಂತಾಗಿದೆ ಎಂದು ದೂರಿದರು.
    ರಾತ್ರಿ ವೇಳೆ ಸೂಕ್ತ ಕಾವಲಿಲ್ಲದೆ ಪುಂಡು ಪೋಕರಿಗಳು ಬಂದು ಕಿಟಕಿ, ಗಾಜು, ಬಾಗಿಲನ್ನು ಮುರಿದು ಹೋಗುತ್ತಾರೆ ಗಲೀಜು ಮಾಡಿರುತ್ತಾರೆ. ಈ ಬಗ್ಗೆ ತಾವು ಕ್ರಮ ಕೈಗೊಳ್ಳಬೇಕೆಂದು ಶಿರಸ್ತೆದಾರ ನರೇಂದ್ರ ಅವರನ್ನು ಮನವಿ ಸಲ್ಲಿಸಿದರು.
    ಪ್ರತಿಭಟನೆಯಲ್ಲಿ ಎಬಿವಿಪಿಯ ವಿಭಾಗೀಯ ಸಂಘಟನಾ ಸಂಚಾಲಕ ಮಂಜುನಾಥರೆಡ್ಡಿ, ಶ್ರೀರಾಮ್, ನರೇಶ್‍ಕುಮಾರ್, ವಿದ್ಯಾರ್ಥಿನಿಯರಾದ ಅಂಬಿಕ, ಪಲ್ಲವಿ, ಗೌತಮಿ, ಸೌಜನ್ಯ, ಗಾಯಿತ್ರಿ, ಕಮಲ, ಪವಿತ್ರ, ಸುನಿತ, ಶಾನಾಜ್, ಆಯಿಷಾ ಸುಲ್ತಾನ, ಮೌನಿಕ, ಸುಪ್ರಿಯಾ, ಸಮ್ರೀನ್‍ತಾಜ್ ಮತ್ತಿತರರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...