ಶಿಡ್ಲಘಟ್ಟ: ಸಾದಲಿ ಗ್ರಾಮದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ

Source: tamim | By Arshad Koppa | Published on 18th January 2017, 11:39 PM | State News |

ಶಿಡ್ಲಘಟ್ಟ,ಜನವರಿ18: ಎಸ್.ಎನ್.ಕ್ರಿಯಾ ಟ್ರಸ್ಟ್ ಹಾಗೂ ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯ ಸಹಯೋಗದಲ್ಲಿ ತಾಲೂಕಿನ ಸಾದಲಿ ಗ್ರಾಮದಲ್ಲಿ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗಾಗಿ ಆಯ್ಕೆಯಾದ ಗ್ರಾಮಸ್ಥರನ್ನು ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಗೆ ಕಳುಹಿಸಲಾಯಿತು.
    ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡ-ಕೂಲಿ ಕಾರ್ಮಿಕರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಎಲ್ಲಾ ವಿಧವಾದ ಖಾಯಿಲೆಗಳಿಗೆ ತಪಾಸಣೆ ನಡೆಸಿದರಲ್ಲದೆ ಶಸ್ತ್ರಚಿಕಿತ್ಸೆಗಾಗಿ ಆಯ್ಕೆಯಾದ 130 ಮಂದಿಯನ್ನು ಆಸ್ಪತ್ರೆಯ ಬಸ್ಸಿನ ಮೂಲಕ  ಗರ್ಭಕೋಶ,ಹೊಟ್ಟೆಯಲ್ಲಿ ಗಡ್ಡೆ,ಮಧುಮೇಹ,ನೇತ್ರ ಶಸ್ತ್ರಚಿಕಿತ್ಸೆ ಸೇರಿದಂತೆ ಇನ್ನಿತರೆ ಖಾಯಿಲೆಗಳಲ್ಲಿ ನರಳುತ್ತಿರುವ ಬಡಜನರ ನೆರವಿಗೆ ಆನೂರಿನ ಎಸ್.ಎನ್.ಕ್ರಿಯಾ ಟ್ರಸ್ಟ್ ಧಾವಿಸಿದೆ ಅರಿವಿನ ಕೊರತೆ ಹಾಗೂ ಆರ್ಥಿಕ ಮುಗ್ಗಟ್ಟನಿಂದ ತೊಂದರೆಯನ್ನು ಅನುಭವಿಸುತ್ತಿದ್ದವರು ಕೊನೆಗೂ ಸಮಸ್ಯೆಯಿಂದ ಮುಕ್ತಿ ಕಾಣುವ ಸಂಭ್ರಮದಲ್ಲಿದ್ದನ್ನು ಕಂಡುಬಂದಿತ್ತು.
    ಈ ಸಂದರ್ಭದಲ್ಲಿ ಆನೂರು ಎಸ್.ಎನ್.ಕ್ರಿಯಾ ಟ್ರಸ್ಟ್‍ನ ಕಾರ್ಯದರ್ಶಿ ವಿಶ್ವನಾಥ್,ಆನೂರು ದೇವರಾಜ್,ಟಿಪ್ಪುಸೆಕ್ಯೂಲರ್ ಸೇನೆಯ ಅಧ್ಯಕ್ಷ ಮೌಲಾ,ಇಂತಿಯಝ್,ಸಮೀರ್,ಶರತ್,ಮೋಹನ್,ಬೂದಾಳ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...