ಶಿಡ್ಲಘಟ್ಟ: ಏಳನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಕನಿಷ್ಠ ಕೂಲಿ ನೀಡಲು ಆಗ್ರಹ

Source: tamim | By Arshad Koppa | Published on 21st January 2017, 9:04 AM | State News |

ಶಿಡ್ಲಘಟ್ಟ,ಜನವರಿ20: ಏಳನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಕನಿಷ್ಠ ಕೂಲಿ ನೀಡಬೇಕೆಂದು ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ರಾಜ್ಯ ಅಕ್ಷರ ದಾಸೋಹ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.
     ನಗರದ ಪ್ರವಾಸಿಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಾಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿದರು ಹಿಂದಿನ ಸರ್ಕಾರ ಘೋಷಣೆ ಮಾಡಿದ ಹೆಚ್ಚುವರಿ ಸಂಭಾವನೆಯನ್ನು ಇಂದಿನ ಸರ್ಕಾರ ಜಾರಿಗೊಳಿಸಬೇಕು. 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು. ಅಡುಗೆ ಮಾಡುವಾಗ ಸಂಭವಿಸುವ ಅಪಘಾತ ಮೊತ್ತವನ್ನು ಹೆಚ್ಚಿಸಬೇಕು. ಐಸಿಡಿಎಸ್ ಯೋಜನೆಗೆ ಕಡಿತ ಮಾಡಿದ ಅನುದಾನವನ್ನು ಕೇಂದ್ರ ಸರ್ಕಾರ ವಾಪಸ್ ಮಾಡಬೇಕು ಐಸಿಡಿಎಸ್ ಯೋಜನೆಯನ್ನು ಬಲಿಷ್ಠಗೊಳಿಸಬೇಕು. ಕನಿಷ್ಠ ವೇತನ ಮತ್ತು ನಿವೃತ್ತಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
      ಸಿ.ಐ.ಟಿ.ಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಮುನಿಲಕ್ಷ್ಮಮ್ಮ, ಎಸ್.ಎಂ.ಮಂಜುಳಾ, ಎಂ.ಆರ್.ಗೀತಾ, ಅಶ್ವತ್ಥಮ್ಮ, ಗುಲ್ಜಾರ್, ಟಿ.ಮಂಜುಳಮ್ಮ, ಫಯಾಜುಲ್ಲಾ, ಖಲೀಲ್, ನರಸಿಂಹಪ್ಪ, ವೆಂಕಟರಮಣಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

 

Read These Next

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...