ಶಿಡ್ಲಘಟ್ಟ: ಛತ್ರಪತಿ ಶಿವಾಜಿ ಹಾಗೂ ಸಂತಕವಿ ಸರ್ವಜ್ಞ ರವರ ಸಿದ್ಧಾಂತಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಶಾಸಕ ಎಂ.ರಾಜಣ್ಣ 

Source: tamim | By Arshad Koppa | Published on 21st February 2017, 8:19 AM | State News |

ಶಿಡ್ಲಘಟ್ಟ,ಫೆಬ್ರವರಿ20: ಛತ್ರಪತಿ ಶಿವಾಜಿ ಹಾಗೂ ಸಂತಕವಿ ಸರ್ವಜ್ಞ ರವರ ಸಿದ್ಧಾಂತಗಳನ್ನು ಜೀವನದಲ್ಲಿ ರೂಡಿಸಿಕೊಂಡು ಆದರ್ಶ ಸಮಾಜವನ್ನು ನಿರ್ಮಿಸಬೇಕೆಂದು  ಶಾಸಕ ಎಂ.ರಾಜಣ್ಣ ಕರೆ ನೀಡಿದರು.
    ನಗರದ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ ಛತ್ರಪತಿ ಶಿವಾಜಿರವರ ಹಾಗೂ ಸಂತಕವಿ ಸರ್ವಜ್ಞರವರುಗಳ ಜಯತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ ಛತ್ರಪತಿ ಶಿವಾಜಿ ಮತ್ತು ಸಮಾಜದಲ್ಲಿ ಜಾತಿ ಪದ್ದತಿಯನ್ನು ಹೋಗಲಾಡಿಸಲು ಶ್ರಮಿಸಿದ  ಸರ್ವಜ್ಞರ ಜೀವನಾದರ್ಶಗಳು ದಾರಿದೀಪವಾಗಬೇಕೆಂದರು.
     ತಹಶೀಲ್ದಾರ್ ಅಜಿತ್ ಕುಮಾರ್ ರೈ, ಇ.ಓ.ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ನಗರಸಭೆಯ ಅಧ್ಯಕ್ಷ ಬಿ.ಅಫ್ಸರ್‍ಪಾಷ,ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಕಸಾಪ ತಾಲ್ಲೂಕು ಅಧ್ಯಕ್ಷ ಅನಂತ ಕೃಷ್ಣ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಅಧ್ಯಕ್ಷ ಗುರುರಾಜ್‍ರಾವ್, ಮರಾಠಿ ಜನಾಂಗದ ಪ್ರಸಾದ್, ವೆಂಕಟೇಶ್, ಶೇಖರ್, ಕೃಷ್ಣ, ಪಂಡುರಾಂಗರಾವ್ ಮತ್ತಿತರರು ಉಪಸ್ಥಿತರಿದ್ದರು.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...