ಶಿಡ್ಲಘಟ್ಟ:  ಶಾಂತಿ ಮತ್ತು ಸೌರ್ಹಾದತೆಯಿಂದ ಹಬ್ಬಗಳನ್ನು ಆಚರಿಸಿ ಆದರ್ಶ ಸಮಾಜ ನಿರ್ಮಿಸಲು ಅಜೀತ್‍ಕುಮಾರ್ ರೈ ಕರೆ

Source: tamim | By Arshad Koppa | Published on 21st August 2017, 8:26 AM | State News | Guest Editorial |

ಶಿಡ್ಲಘಟ್ಟ,ಆಗಸ್ಟ್19: ಶಾಂತಿ ಮತ್ತು ಸೌರ್ಹಾದತೆಯಿಂದ ಹಬ್ಬಗಳನ್ನು ಆಚರಿಸುವ ಮೂಲಕ ಆದರ್ಶ ಸಮಾಜವನ್ನು ನಿರ್ಮಿಸಬೇಕೆಂದು ತಹಶೀಲ್ದಾರ್ ಅಜೀತ್‍ಕುಮಾರ್ ರೈ ಕರೆ ನೀಡಿದರು.
 ಗೌರಿ ಗಣೇಶ್ ಮತ್ತು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ತಾಲೂಕು ಕಛೇರಿಯಲ್ಲಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ನಗರ ಪ್ರದೇಶದಲ್ಲಿ ನಗರಸಭೆಯಿಂದ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳಿಂದ ಪರವಾನಿಗೆಯನ್ನು ಪಡೆದುಕೊಳ್ಳುವ ಮೂಲಕ ಗಣೇಶ್ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ನಿಗಧಿತ ಸ್ಥಳದಲ್ಲಿ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಪರಿಸರವನ್ನು ಸಂರಕ್ಷಣೆ ಮಾಡಲು ಸಹಕಾರ ನೀಡಬೇಕೆಂದು ಕೋರಿದರಲ್ಲದೆ ರಾತ್ರಿ 10ರ ನಂತರ ಧ್ವನಿವರ್ಧಕ ಬಳಕೆ ಮಾಡುವಂತಿಲ್ಲವೆಂದು ಸ್ಪಷ್ಟಪಡಿಸಿದರು.
    ಬ್ರಿಟೀಷರ ವಿರುಧ್ಧ ಹೋರಾಟ ನಡೆಸಲು ಛತ್ರಪತಿ ಶಿವಾಜಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರು ಆದರೇ ಇದೀಗ ಅದನ್ನು ಪ್ರತಿಷ್ಠಾಪಿಸಿಕೊಂಡು ಗ್ರಾಮಗಳಲ್ಲಿ ಗುಂಪುಗಾರಿಕೆ ಸೃಷ್ಠಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಐಕ್ಯತೆಯಿಂದ ಗಣೇಶ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಧಾರ್ಮಿಕ ಕಾರ್ಯಗಳನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಸೌರ್ಹಾದತೆಯನ್ನು ಕಾಪಾಡಬೇಕೆಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಿ ಗಣೇಶ್‍ನ ವಿಗ್ರಹಗಳನ್ನು ವಿಸರ್ಜನೆ ಮಾಡಲು ಸೂಕ್ತ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
    ಡಿವೈಎಸ್ಪಿ ಕೃಷ್ಣಮೂರ್ತಿ ಮಾತನಾಡಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವ ಆಸಕ್ತಿ ಹೊಂದಿರುವ ಯುವಕರು ಅಥವಾ ವ್ಯಕ್ತಿಗಳು ಸಮಿತಿಗಳನ್ನು ರಚಿಸಿ ನಗರ ಪ್ರದೇಶದಲ್ಲಿ ನಗರಸಭೆ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಬೆಸ್ಕಾಂ ಇಲಾಖೆಯಿಂದ ಕಡ್ಡಾಯವಾಗಿ ಪರವಾನಿಗೆಯನ್ನು ಪಡೆದುಕೊಂಡು ಸಮಿತಿ ಸದಸ್ಯರ ಮೊಬೈಲ್ ಸಂಖ್ಯೆಗಳೊಂದಿಗೆ ಮಾಹಿತಿಯನ್ನು ಪೋಲಿಸ್‍ಠಾಣೆಗೆ ನೀಡಬೇಕೆಂದು ಸೂಚಿಸಿದರು.
    ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವ ಕೇಂದ್ರದಲ್ಲಿ ಯಾವುದೇ ರೀತಿಯ ಅವಘಡಗಳನ್ನು ಸಂಭವಿಸದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದ ಅವರು ಸ್ಥಳೀಯ ಸಂಸ್ಥೆಗಳು ಮತ್ತು ಬೆಸ್ಕಾಂ ಇಲಾಖೆಯಿಂದ ಪರವಾನಿಗೆ ಪಡೆದ ಸಂಸ್ಥೆಗಳಿಗೆ ಮಾತ್ರ ಪೋಲಿಸ್ ಇಲಾಖೆಯಿಂದ ಅನುಮತಿ ನೀಡಲಾಗುವುದು ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ಐದು ದಿವಸದೊಳಗೆ ವಿಸರ್ಜನೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
    ನಗರ ಪ್ರದೇಶದಲ್ಲಿ ಪ್ರತಿಷ್ಠಾಪಿಸುವ ಗಣೇಶ್ ಮೂರ್ತಿಗಳನ್ನು ವಿಸರ್ಜನೆ ಮಾಡಲು ತಾಲೂಕಿನ ವೀರಾಪುರ ಬಳಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು ಪರಿಸರಕ್ಕೆ ಪೂರಕವಾಗಿರುವ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕೆಂದು ಪೌರಾಯುಕ್ತ ಜಿ.ಎನ್.ಚಲಪತಿ ಸಲಹೆ ನೀಡಿ ರಸ್ತೆಯಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಯಾವುದೇ ರೀತಿಯ ಅವಕಾಶ ನೀಡುವುದಿಲ್ಲ ನಗರದ ಸೌಂದರ್ಯವನ್ನು ಕಾಪಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
    ಸಿಪಿಐ ವೆಂಕಟೇಶ್,ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್‍ಠಾಣೆಯ ಪಿಎಸ್‍ಐ ಪ್ರದೀಪ್‍ಪೂಜಾರಿ,ದಿಬ್ಬೂರಹಳ್ಳಿ ಪೋಲಿಸ್‍ಠಾಣೆಯ ಪಿಎಸ್‍ಐ ವಿಜಯರೆಡ್ಡಿ,ನಗರಸಭೆಯ ಅಧ್ಯಕ್ಷ ಬಿ.ಅಫ್ಸರ್‍ಪಾಷ,ಹಿರಿಯ ಸದಸ್ಯ ಚಿಕ್ಕಮುನಿಯಪ್ಪ,ಬೆಸ್ಕಾಂ ಎಇಇ ಅನ್ಸರ್‍ಬಾಷ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read These Next

ಜಲಶಕ್ತಿ ಅಭಿಯಾನವನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿ -ಜೆ.ಮಂಜುನಾಥ್

ಇಂದು ಕೋಲಾರ ತಾಲ್ಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ...

ಜಿಲ್ಲಾಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್  ಖಜಾಂಚಿಯಾಗಿ ವಿಜಯ್, ರಾಜ್ಯಪರಿಷತ್‍ಗೆ ಡಿ.ಸುರೇಶ್‍ಬಾಬು ಆಯ್ಕೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕೆ.ಬಿ.ಅಶೋಕ್ ಹಾಗೂ ಖಜಾಂಚಿಯಾಗಿ ಕೆ.ವಿಜಯ್, ರಾಜ್ಯಪರಿಷತ್ ಸದಸ್ಯರಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...