ಶಿಡ್ಲಘಟ್ಟ:ಪ್ರತಿಯೊಬ್ಬರೂ ಕಡ್ಡಾಯವಾಗಿ ಶೌಚಾಲಯ ಕಟ್ಟಿಸಿಕೊಳ್ಳಲು ಬಿ.ವಿ.ನಾರಾಯಣಸ್ವಾಮಿ ಸೂಚನೆ

Source: tamim | By Arshad Koppa | Published on 22nd September 2017, 1:55 PM | State News |

ಶಿಡ್ಲಘಟ್ಟ,ಸೆಪ್ಟೆಂಬರ್21: ಸಮಾಜದಲ್ಲಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವ ಮೂಲಕ ಬಯಲು ಬಹಿರ್ದೆಸೆ ಮುಕ್ತ ತಾಲೂಕು ಮಾಡಲು ಸಹಕಾರ ನೀಡಬೇಕೆಂದು ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ ಸೂಚಿಸಿದರು.
    ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಜನರಲ್ಲಿ ಅರಿವು ಮೂಡಿಸಿ ರಾಷ್ಟ್ರಪಿತಾ ಗಾಂಧಿಜೀ ಜಯಂತಿ ದಿನದಂದು ಶಿಡ್ಲಘಟ್ಟ ತಾಲೂಕನ್ನು ಬಯಲು ಬಹಿರ್ದೆಸೆ ಮುಕ್ತ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಗುರಿ ಸಾಧಿಸಬೇಕೆಂದು ಸೂಚಿಸಿದರು.
    ತಾಲೂಕು ಮಟ್ಟದ ಅಧಿಕಾರಿಗಳು ಸರಕಾರದಿಂದ ಜಾರಿಗೊಳಿಸುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಜೊತೆಗೆ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅಧಿಕಾರಿಗಳು ಬದ್ದತೆಯನ್ನು ತೋರಿಸಬೇಕೆಂದು ತಾಕೀತು ಮಾಡಿದರಲ್ಲದೆ ಪರಿಶಿಷ್ಠ ಜಾತಿ ಮತ್ತು ಪಂಗಡದ ಜನರಿಗೆ ಸಕಲ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಮಾಜದಲ್ಲಿ ಬದಲಾವಣೆ ತರಬೇಕೆಂದರು.
    ಸ್ತ್ರೀಶಕ್ತಿ ಸಂಘಟನೆಗಳು ಅರಿವು ಮೂಡಿಸಲಿ: ಸಮಾಜದಲ್ಲಿರುವ ಪ್ರತಿಯೊಬ್ಬರು ಶೌಚಾಲಯಗಳನ್ನು ನಿರ್ಮಿಸಿಕೊಂಡು ನೈರ್ಮಲ್ಯ ಕಾಪಾಡಲು ಜಿಲ್ಲಾಡಳಿತ ವಿಶೇಷ ಆಸಕ್ತಿವಹಿಸಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ತ್ರೀಶಕ್ತಿ ಸಂಘಟಗಳ ಸದಸ್ಯರು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ ಬಯಲು ಬಹಿರ್ದೆಸೆ ಪದ್ದತಿಯನ್ನು ಶಾಶ್ವತವಾಗಿ ಅಂತ್ಯಗೊಳಿಸಬೇಕೆಂದು ಮನವಿ ಮಾಡಿದರು.
    ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿರುವ ವಸತಿನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡುವ ಜೊತೆಗ ಸಕಲ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕೆಂದರಲ್ಲದೆ ಅಂಗನವಾಡಿ ಕೇಂದ್ರಗಳು ದುಸ್ಥಿತಿಯಲ್ಲಿದ್ದರೆ ಮಾತ್ರ ಸರಕಾರದ ಅನುದಾನವನ್ನು ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಿಡಿಪಿಓಗೆ ಸೂಚನೆ ನೀಡಿದ ಅಧ್ಯಕ್ಷರು ಮಕ್ಕಳಿಗೆ ಭದ್ರತೆಯನ್ನು ಒದಗಿಸುವ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲು ಅವಕಾಶ ನೀಡುವುದಿಲ್ಲ ಒಂದು ವೇಳೆಯಲ್ಲಿ ನಿರ್ಲಕ್ಷ್ಯವಹಿಸಿದಲ್ಲಿ ನಿರ್ದಾಕ್ಷ್ಯಣ್ಯವಾಗಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.
    ಸಭೆಯಲ್ಲಿ ತಾಪಂ ಇಓ ವೆಂಕಟೇಶ್  ಮಾತನಾಡಿ ಸರಕಾರಿ ವಸತಿ ನಿಲಯಗಳಲ್ಲಿ ಗ್ರಂಥಾಲಯಗಳನ್ನು ನಿರ್ವಹಣೆ ಮಾಡುವ ಜೊತೆಗೆ ಸ್ಪರ್ಧಾತ್ಮಕ ಮತ್ತು ಸಾಮಾನ್ಯ ಜ್ಞಾನವನ್ನು ಬೆಳೆಸುವ ಪುಸ್ತಕಗಳನ್ನು ಖರೀದಿಸಲು ಆದ್ಯತೆ ನೀಡಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಹಾಸ್ಟಲ್‍ಗಳಲ್ಲಿ ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
    ತಾಯಿ ಮತ್ತು ಮಕ್ಕಳ ಮರಣವನ್ನು ತಡೆಗಟ್ಟುವ ಸಲುವಾಗಿ ಗರ್ಭಿಣಿ-ಬಾಣಂತಿಯರಿಗೆ ಅಕ್ಟೋಬರ್ 2 ರಿಂದ ಬಿಸಿಯೂಟವನ್ನು ನೀಡುವ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಜನಪ್ರತಿನಿಧಿಗಳು ಸರಕಾರದ ಯೋಜನೆಯನ್ನು ಯಶಸ್ವಿಗೊಳಿಸಲು ಸಹಕಾರ ನೀಡಬೇಕೆಂದು ಸಿಡಿಪಿಓ ಲಕ್ಷ್ಮೀದೇವಮ್ಮ ಮನವಿ ಮಾಡಿದರಲ್ಲದೆ ತಾಲೂಕಿನಲ್ಲಿ ಎಸ್.ಸಿ/ಎಸ್.ಟಿಗಳ ಮೇಲೆ ಸಾಮಾಜಿಕ ಬಹಿಷ್ಕಾರದ ಪ್ರಕರಣಗಳು ದಾಖಲಾಗಿಲ್ಲ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಹಾಯವಾಣಿಯಲ್ಲಿ ದೂರುಗಳನ್ನು ಸ್ವೀಕರಿಸಿ ನ್ಯಾಯ ಒದಗಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
    ವ್ಯವಸ್ಥಾಪಕ ಪ್ರಸಾದ್,ಮುನಿವೆಂಕಟಪ್ಪ, ಸ್ಥಾಯಿ ಸಮಿತಿಯ ಸದಸ್ಯ ಮುನಿಯಪ್ಪ, ವಹೀದಾ ಸಮೀಉಲ್ಲಾ,ಶಂಕರಮ್ಮ ಮುನಿನರಸಮ್ಮ, ದೀಪಾರಾಮಬಾಬು ಸಮಾಜ ಕಲ್ಯಾಣ ಕಲ್ಯಾಣ ಅಧಿಕಾರಿ,ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಭೋಜಣ್ಣ,ಬಿಸಿಎಂ ಅಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...