ಗುಣಾತ್ಮಕ ಫಲಿತಾಂಶ ಪಡೆಯಲು ಬಿಇಒ ಶಮ್ಸುನ್ನೀಸಾ ಸಲಹೆ

Source: sonews | By Staff Correspondent | Published on 22nd March 2018, 12:05 AM | State News | Don't Miss |

ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ತರುವುದರ ಮೂಲಕ ತಾಲ್ಲೂಕಿನ ಶೈಕ್ಷಣಿಕ ಪರಂಪರೆ ಉಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಮ್ಸುನ್ನೀಸಾ  ಹೇಳಿದರು.
  
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬುಧವಾರ ಭೇಟಿ ನೀಡಿ 10 ನೇ ತರಗತಿ ವಿದ್ಯಾರ್ಥಿಗಳ ಪ್ರಗತಿ ಪರಿಶೀಲಿಸಿದ ಬಳಿಕ ಪ್ರವೇಶ ಪತ್ರ ವಿತರಿಸಿ ಮಾತನಾಡಿದ ಅವರು, ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದೆ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಬೇಕು ಎಂದು ಹೇಳಿದರು.
  
ತಾಲ್ಲೂಕಿನಲ್ಲಿ 2679 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಮಾ.23 ರಿಂದ ಏ.6 ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ವಿಶ್ವಾಸದಿಂದ ಎದುರಿಸಬೇಕು. ಭಯ ಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
  
ತಾಲ್ಲೂಕಿನ ಎಲ್ಲ ಪ್ರೌಢ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಸರಣಿ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲಾಗಿದೆ. ಮಕ್ಕಳ ಬುದ್ಧಿ ಮತ್ತೆಗೆ ಅನುಗುಣವಾಗಿ, ಎಲ್ಲ ಮಕ್ಕಳೂ ಉತ್ತೀರ್ಣರಾಗುವಂತೆ ಬೋಧಿಸಲಾಗಿದೆ. ಶಿಕ್ಷಕರು ಹೆಚ್ಚಿನ ಶ್ರಮವಹಿಸಿ ಮಕ್ಕಳ ಹಿತಕ್ಕಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು.
  
ಉಪ ಪ್ರಾಂಶುಪಾಲೆ ಬಿ.ರೇಣುಕಮ್ಮ ಮಾತನಾಡಿ, ವಿದ್ಯಾರ್ಥಿಗಳು  ದುರದರ್ಶನ ಹಾಗೂ ಮೊಬೈಲ್ ಫೋನ್ನಿಂದ ದೂರವಿದ್ದು ಪರೀಕ್ಷೆಗೆ ಸಿದ್ಧತೆ ನಡೆಸಬೇಕು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.

ಶಿಕ್ಷಕಿಯರಾದ ವರಲಕ್ಷ್ಮಿ,, ವಿ.ರಾಮಲಕ್ಷ್ಮಮ್ಮ, ಕೆ.ವಿ.ಶಾರದಮ್ಮ, ಜರೀನಾ ಅಂಜಂ, ಶಿಕ್ಷಕ ಆರ್.ಸುಬ್ರಮಣಿ ಇದ್ದರು.

ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬುಧವಾರ ಬಿಇಒ ಶಂಷುನ್ನೀಸಾ ಭೇಟಿ ನೀಡಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಿಸಿದರು.

 


 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...