ಸಂಘಸಂಸ್ಥೆಗಳಿಂದ ಕಸಾಪ ಅಧ್ಯಕ್ಷರ ವಿರುದ್ಧ ಆಕ್ರೋಷ

Source: sonews | By Staff Correspondent | Published on 3rd January 2018, 11:29 PM | State News | Don't Miss |

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ವಿವಿಧ ದಲಿತ ಸಂಘಟನೆಗಳು ಇದ್ದರೂ ಸಹ ಮತ್ತು ತಾಲ್ಲೂಕಿನಲ್ಲಿ ನೂರಾರು ದಲಿತ ಕಲಾವಿದರು ಇದ್ದರೂ ಯಾರಿಗೂ ಆಹ್ವಾನ ನೀಡದಿರುವುದು ತುಂಬಾ ಖಂಡನೀಯ ವಿಷಯವಾಗಿದೆಯೆಂದು ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ನರಸಿಂಹ ಮೂರ್ತಿ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾ ಘೋಷ್ಟಿಯಲ್ಲಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ ಯಾರೋಬ್ಬರ ಖಾಸಗಿ ವಸ್ತುವಲ್ಲ ಹಾಗೂ ಅಧ್ಯಕ್ಷಗಿರಿಯು ಕಿರೀಟವೂ ಅಲ್ಲ, ಪ್ರತಿ ಮೂರು ವರ್ಷಕ್ಕೊಮ್ಮ ಬದಲಾವಣೆಯಾಗುತ್ತಿರುತ್ತದೆ. ಆದರೆ ಈಗಿನ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಬೇರಗೌಡ ತಮ್ಮ ನಡೆಯನ್ನು ಸರಿಯಾಗಿ ನಡೆದುಕೊಳ್ಳದಿರುವುದು ಮತ್ತು ತಮ್ಮದೇ ಧೋರಣೆಯಲ್ಲಿ ಕರ ಪತ್ರಗಳನ್ನು ಮತ್ತು ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಹಂಚುತ್ತಿರುವುದು ಸರಿಯಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಸರ್ಕಾರಿ ನೌಕರರ ಭವನದಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಮತ್ತು ತಾಲ್ಲೂಕು ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ಮತ್ತು ತಾಲ್ಲೂಕು ದಂಡಾಧಿಕಾರಿ ವೈ.ರವಿಯವರ ಸಮ್ಮುಖದಲ್ಲಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಅದರಂತೆ ಕಾರ್ಯಕ್ರಮ ಯಶಸ್ವಿಗೆ ಹಲವು ಸಮಿತಿಗಳನ್ನು ರಚಿಸಿ ಆಯಾ ಸಮಿತಿಗೆ ಉಸ್ತುವಾರಿಯನ್ನು ನೀಡಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಸಿಬೇಕೆಂದು ತಿಳಿಸಿದರು. ಆದರೆ ಯಾವುದೇ ಸಮಿತಿಯನ್ನು ರಚಿಸಿದೇ ಹಿಂದಿನ ಸಂಪ್ರದಾಯಗಳನ್ನು ಮುರಿದು ರಾಜಕೀಯ ಸಭೆಗಳಲ್ಲಿ ನಡೆಯುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಸಾಹಿತ್ಯ ಪರಿಷತ್ ಸಮ್ಮೇಳನವನ್ನು ನಡೆಸಲು ಹೊರಟಿದ್ದಾರೆಂದು ಹೇಳಿದರು.
ಈ ಸಂಧರ್ಭದಲ್ಲಿ ಕರವೇ ಚಂದು, ವೆಂಕಟೇಶ್, ಚಂದ್ರಕಳ, ರೆಡ್ಡೆಪ್ಪ ಮತ್ತು ತಾಲ್ಲೂಕಿನ ವಿವಿಧ ಸಂಘಟನೆಗಳ ಮುಖಂಡರುಗಳು ಮತ್ತು ಪಧಾಧಿಕಾರಿಗಳು ಭಾಗವಹಿಸಿದ್ದರು.

ಹೃದಯಾಘಾತದಿಂದ ರೈಲ್ವೆ ಸಿಬ್ಬಂದಿ ಸಾವು
ಶ್ರೀನಿವಾಸಪುರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮೀಕಾಂತ್ (45) ಕರ್ತವ್ಯ ನಿರ್ವಹಣೆ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಬಂಗಾರಪೇಟೆ ರೈಲ್ವೆ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆಯನ್ನು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನೆರವೇರಿಸಲಾಯಿತು.
ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ರೈಲ್ವೆ ಸಿಬ್ಬಂದಿ ತೀವ್ರ ಶೋಕವನ್ನು ವ್ಯಕ್ತಪಡಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...