ಮತದಾನಗೈದ ಮತಗಟ್ಟೆ ಅಧಿಕಾರಿಗಳು

Source: sonews | By sub editor | Published on 6th May 2018, 12:41 AM | State News | Don't Miss |

ಶ್ರೀನಿವಾಸಪುರ: ಇದೇ ತಿಂಗಳು ಮೇ 12 ರಂದು ನಡೆಯುವ ವಿಧಾನ ಸಭೆ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಾಲ್ಲೂಕು ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮತಗಟ್ಟೆ ವ್ಯವಸ್ಥೆ ಮಾಡಲಾಗಿತ್ತು.

ಶ್ರೀನಿವಾಸಪುರ ತಾಲ್ಲೂಕು ಕಚೇರಿಯಲ್ಲಿ ಚುನಾವಣೆ ಕಾರ್ಯದ ನಿಮಿತ್ತ ಕೆಲಸ ಮಾಡುವ ಮತಗಟ್ಟೆ ಸಿಬ್ಬಂದಿಗೆ ಅನುಕೂಲವಾಗುವಂತೆ ಗುರುವಾರದಿಂದ ಮತಗಟ್ಟೆ ವ್ಯವಸ್ಥೆ ಮಾಡಿದ್ದು ಸಿಬ್ಬಂದಿ ಕಳೆದೆರಡು ದಿನದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಹಾಗಾಗಿ ಗುರುವಾರ 128 ಮತಗಳು ಚಲಾವಣೆಗೊಂಡಿದ್ದರೆ ಶುಕ್ರವಾರ 200 ಮತಗಳು ಚಲಾವಣೆಯಾಗಿವೆ. ಮತದಾನ ಮಗಿದ ನಂತರ ಸಂಬಂದಿಸಿದ ಮತಪೆಟ್ಟಿಗೆಗಳನ್ನು ತಾಲ್ಲೂಕು ಕಚೇರಿಯಲ್ಲಿರುವ ಖಜಾನೆಯಲ್ಲಿ  ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ.

ಮತ ಹಕ್ಕನ್ನು ಚಲಾಯಿಸಲು ಸರ್ಕಾರಿ ನೌಕರರು ಶುಕ್ರವಾರ ಮಹಿಳೆಯರು ಹಾಗು ಪುರುಷರು ಪ್ರತ್ಯೇಕ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು.  ಇದೇ ವೇಳೆ  ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಅಂಚೆ ಮತಗಳ ನೋಡಲ್ ಅಧಿಕಾರಿಯಾಗಿ ಭಾಗ್ಯಲಕ್ಷ್ಮಿ ರವರು ಉಪಸ್ಥಿತರಿದ್ದರು. 

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...