ಶಿಕ್ಷಕರ ಬಳಗದಿಂದ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಯವರ ಅಭಿನಂದನಾ ಸಮಾರಂಭ

Source: sonews | By Staff Correspondent | Published on 23rd June 2018, 8:59 PM | State News | Don't Miss |

ಶ್ರೀನಿವಾಸಪುರ :   ಪಟ್ಟಣದ ಶ್ರೀ ಶ್ರೀನಿವಾಸಕಲ್ಯಾಣ ಮಂಟಪದಲ್ಲಿ ಶಿಕ್ಷಕರ ಬಳಗದಿಂದ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ರವರಿಗೆ ಹಮ್ಮಿಕೊಳ್ಳಲಾಗಿದ್ದ ಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಮೇಶ್‍ಕುಮಾರ್ ರವರು ಈ ದೇಶದ ಚುನಾವಣೆಗಳ ಅಕ್ರಮಗಳ ಬಗ್ಗೆ ತೀವರ ಆಕ್ರೋಶ ವ್ಯಕ್ತಪಡಿಸಿ ಚುನಾವಣೆಯಲ್ಲಿ ಆಯ್ಕೆಯಾದವರು ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಆದರೆ ಅವರ ಆಶೆಯಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಚುನಾವಣೆಗಳಲ್ಲಿ ಆಯ್ಕೆಯಾದವರು 70-80ಕೋಟಿ ರೂಗಳು ಖಾರ್ಚಾಗಿದೆ ಎಂದು ಹೇಳಿಕೊಳ್ಳುತ್ತಾರೆ. ಇದನ್ನು ಕೇಳಿದರೆ ದೇಶದ ಮತದಾರರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ತೀವ್ರ ಆಕ್ರೋಶಕ್ಕೆ ಒಳಗಾದರು.
     

ಚುನಾವಣೆಗಳಲ್ಲಿ ಸ್ಪರ್ಧಿಸುವವರು ಈ ದೇಶವನ್ನು ಮಾರಾಟ ಮಾಡುವವರು ಇದ್ದಾರೆ ಸರಳ ಸಜ್ಜನಿಕೆಯ ವ್ಯಕ್ತಿಗಳೂ ಇದ್ದಾರೆ. ಇಂತಹ ಅವ್ಯವಸ್ಥೆಯ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬೇಕೋ ಬೇಡವೋ ಎನ್ನುವ ಮಟ್ಟಕ್ಕೆ ಚುನಾವಣೆಗಳು ಬಂದು ನಿಂತಿವೆ. ಈ ದೇಶದ ಪ್ರಧಾನಮಂತ್ರಿ ನರೇಂದ್ರಮೋದಿರವರನ್ನು ದೇಶ ಭಕ್ತ ಎಂದು ಕರೆಯುತ್ತಾರೆ. ಅವರು ನಿಜವಾದ ದೇಶಭಕ್ತರೇ ಆಗಿದ್ದರೆ ಚುನಾವಣೆಗಳಲ್ಲಿ ನಡೆಯುವ ಅಕ್ರಮಗಳನ್ನು ಮೊದಲು ನಿಲ್ಲಿಸಲಿ. ಆಗ ಎಲ್ಲರೂ ಅವರನ್ನು ನಿಜವಾದ ದೇಶಭಕ್ತ ಎಂದು ಕರೆಯೋಣ. ನಾನು ಬಿಜೆಪಿ ಮತ್ತು ಅದರ ಸಿದ್ದಾಂತಗಳನ್ನು ಒಪ್ಪುವುದಿಲ್ಲ. ನನ್ನ ಜೊತೆ ಅಭಿನಂದನೆ ಸ್ವೀಕರಿಸಲು ಬಂದಿರುವ ವೈ.ಎ.ಎನ್ ರವರು ಬಿಜೆಪಿ ಪಕ್ಷದವರೇ ಆಗಿದ್ದರೂ ಅವರು ನನ್ನ ಕಿರಿಯ ಸಹೋದರ ಎಂದು ಒಪ್ಪಿಕೊಳ್ಳುತ್ತೇನೆ ಎಂದರು.
 

ಚುನಾವಣೆಗಳ ಅಕ್ರಮಗಳಿಂದಾಗಿ ವೈ.ಎ.ಎನ್ ರವರು ಹೆಬ್ಬಾಳದಲ್ಲಿ ಸೋತು ಗಾಯ ಮಾಡಿಕೊಂಡರು ಮತ್ತೊಂದು ಚುನಾವಣೆಯಾದ ವಿಧಾನಪರಿಷತ್ತು ಚುನಾವಣೆಯಲ್ಲಿ ಗಾಯಕ್ಕೆ ಬ್ಯಾಂಡೇಜ್ ಕಟ್ಟಿಕೊಂಡು ಚುನಾವಣೆಯನ್ನು ಎದುರಿಸಿ ಗೆಲುವನ್ನು ಕಂಡಿದ್ದಾರೆ. ನಗರ ಪ್ರದೇಶಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಿದ್ದರೂ ಶೇ.25ರಷ್ಟು ಮತದಾನ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ಶೇ.89ರಷ್ಟು ಮತದಾನ ಮಾಡಿರುವುದು ನನಗೆ ಸಂತಸ ತಂದಿದೆ. ಯಾವುದೇ ಮನುಷ್ಯನಿಗೆ ಕರುಣೆ ನಾಚಿಕೆ ಇರಬೇಕು ಅದು ಇಲ್ಲದಿದ್ದರೆ ಅವನೊಬ್ಬ ಜೀವಂತ ಶವ. ಆದರೆ ನಾನು ಅದನ್ನು ಉಳಿಸಿಕೊಂಡಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು.
   

ವಿಧಾನ ಪರಿಷತ್ತಿನ ಸದಸ್ಯ ವೈ.ಎ.ನಾರಾಯಣಸ್ವಾಮಿ ಅಭಿನಂದನೆ ಸ್ವೀಕರಿಸಿ ಮಾತನಾಡಿ ಎಲ್ಲಾ ವರ್ಗಗಳಿಗೂ ಹೋಲಿಕೆ ಮಾಡಿದರೆ ಶಿಕ್ಷಣ ವರ್ಗ ಶ್ರೇಷ್ಠವಾದ ವರ್ಗ. ಸಾಮಾನ್ಯ ಬಡ ರೈತ ಕುಟುಂಬದಿಂದ ಬಂದ ನನ್ನನ್ನು ವಿಧಾನ ಪರಿಷತ್ತಿಗೆ ನೂಕುವ ಕೆಲಸ ಮಾಡಿದ್ದು ಶಿಕ್ದಷಕರನ್ನು ಜೀವನದಲ್ಲಿ ಎಂದೂ ಮರೆಯಲು ಸಾಧ್ಯವಿಲ್ಲ. ದೇಶ ಉಳಿಯಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಆ ಕೆಲಸ ಶಿಕ್ಷಕರಿಂದ ಮಾತ್ರ ಸಾಧ್ಯವಾಗಿದೆ. ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳ ಶಿಕ್ಷಣವನ್ನು ನೀಡಬೇಕಾಗಿದೆ. ಇದರ ಬಗ್ಗೆ ಚಿಂತನೆ ನಡೆಸಬೇಕಾಗಿದೆ ಎಂದರು.
   

ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳು ಇದೆ. ಅವುಗಳನ್ನು ಪರಿಹರಿಸುವ ಜವಾಬ್ದಾರಿ ನನ್ನ ಮೇಲಿದೆ. ಆದರೆ ಶಿಕ್ಷಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರಲ್ಲದೆ ಪ್ರಥಮ ಬಾರಿಗೆ ನನ್ನ ತವರು ಕ್ಷೇತ್ರದಲ್ಲಿ ಅಭಿನಂದನೆ ನೀಡಿದ್ದೀರಿ. ಅದೇ ರೀತಿ ನಾನು ಈ ಕ್ಷೇತ್ರಕ್ಕೆ ಚುನಾವಣೆ ಸಂದರ್ಭದಲ್ಲಿ ಬರದಿದ್ದರೂ ನಿಮ್ಮಲ್ಲಿ ನಾನೂ ಒಬ್ಬ ಎಂದು ನನ್ನನ್ನು ಅಧಿಕ ಮತಗಳಿಂದ ಗೆಲ್ಲಿಸಿದ್ದೀರಿ. ನಿಮ್ಮ ಋಣ ತೀರಿಸಲು ನಾನು ಬದ್ದನಾಗಿದ್ದೇನೆ. ಈ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಸೇರಿದಂತೆ ಅನೇಕ  ಜ್ವಲಂತ ಸಮಸ್ಯೆಗಳು ಕಾಣುತ್ತಿವೆ. ರಮೇಶ್‍ಕುಮಾರ್ ರವರಂತಹ ಮುತ್ಸದಿ ರಾಜಕಾರಣಿಯವರಂತಹವರ ಜೊತೆ ಕೈಜೋಡಿಸಿ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
   

ಇದೇ ಸಂದರ್ಭದಲ್ಲಿ ಪ್ರೌಢಶಾಲಾ, ಪ್ರಾಥಮಿಕ, ಕಾಲೇಜು ಹಾಗೂ ಅನುಧಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ವತಿಯಿಂದ ರಮೇಶ್‍ಕುಮಾರ್ ಮತ್ತು ವೈ.ಎ.ನಾರಾಯಣಸ್ವಾಮಿ ರವರನ್ನು ಸನ್ಮಾನಿಸಲಾಯಿತು. ವಿವಿಧ ಶಿಕ್ಷಕ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಭಿಮಾನಿ ಶಿಕ್ಷಕರು ಉಪಸ್ಥಿತರಿದ್ದರು. ಕೋಚಿಮುಲ್ ವ್ಯವಸ್ಥಾಪಕ ನಿರ್ಧೇಶಕ ಹನುಮೇಶ್, ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಂಜುಂಡಗೌಡ, ಕಾರ್ಯದರ್ಶಿ ಎನ್.ಬಿ.ಗೋಪಾಲಗೌಡ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್, ಪ್ರಾ.ಶಾ.ಶಿ.ಸಂ.ಅಧ್ಯಕ್ಷ ಗೋವಿಂದರೆಡ್ಡಿ, ಶಿಕ್ಷಕರಾದ ಬೈರೇಗೌಡ, ಮುರಳಿಬಾಬು, ಕಲಾಶಂಕರ್, ಬಿಇಓ ಶಂಷುನ್ನೀಸಾ ಇತರರು ಹಾಜರಿದ್ದರು.
 

Read These Next

ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ನೇಮಕ

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ...

ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರೈತಸಂಘದಿಂದ ಮೌನ ಹೋರಾಟ

ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ...

ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ,ಉಪಾಧ್ಯರಾಗಿ ಮಂಜುನಾಥ ಆರಾಧ್ಯ

ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ...

ವಿಶ್ವಾಸಮತ ಯಾಚನೆಗೆ ವಿಪರೀತ ಅಡ್ಡಿಯಾದ ವಿಪ್​ ವಿಚಾರ; ಗದ್ದಲದ ನಡುವೆ ನಾಳೆಗೆ ಉಭಯ ಸದನಗಳ ಕಲಾಪ ಮುಂದೂಡಿಕೆ

ವಿಶ್ವಾಸಮತ ಯಾಚನೆಗೆ ವಿಪರೀತ ಅಡ್ಡಿಯಾದ ವಿಪ್​ ವಿಚಾರ; ಗದ್ದಲದ ನಡುವೆ ನಾಳೆಗೆ ಉಭಯ ಸದನಗಳ ಕಲಾಪ ಮುಂದೂಡಿಕೆ

ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರೈತಸಂಘದಿಂದ ಮೌನ ಹೋರಾಟ

ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ...

ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ,ಉಪಾಧ್ಯರಾಗಿ ಮಂಜುನಾಥ ಆರಾಧ್ಯ

ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ...