ರಾಜ್ಯದ ಮತದಾರರೇ ಎಚ್ಚರ!: ಅಲ್ಪಸಂಖ್ಯಾತರ ಮತಗಳನ್ನು ಈ ರೀತಿ ಒಡೆಯುತ್ತಿದೆ ‘ಮೋಸದ ಗುಂಪು’

Source: sonews | By Staff Correspondent | Published on 10th May 2018, 11:18 PM | Coastal News | State News | Special Report | Don't Miss |

ವಿಶೇಷ ವರದಿ:

ರಾಜ್ಯವು ವಿಧಾನಸಭಾ ಚುನಾವಣೆಯನ್ನು ಎದುರು ನೋಡುತ್ತಿದ್ದು, ರಾಜ್ಯದ ಜನರು ತಮ್ಮ ಹಕ್ಕು ಚಲಾಯಿಸಲು ಎರಡೇ ದಿನಗಳು ಬಾಕಿಯುಳಿದಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿವೆ.

ಈ ಹಿಂದಿನ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಚುನಾವಣೆಯು ತುಸು ವಿಭಿನ್ನವೆಂದೇ ಹೇಳಬಹುದು. ಈ ಮೊದಲೆಲ್ಲಾ ಮನೆ-ಮನೆ ಪ್ರಚಾರ, ಸಾರ್ವಜನಿಕ ಸಭೆ, ರ್ಯಾಲಿ, ಸಮಾವೇಶಗಳು ರಾಜಕೀಯ ಪಕ್ಷಗಳಿಗೆ ನೆರವಾಗುತ್ತಿದ್ದರೆ, ಈ ಬಾರಿ ಸಾಮಾಜಿಕ ಜಾಲತಾಣ ಈ ಎಲ್ಲದ್ದಕ್ಕಿಂತ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸ್ಯಾಪ್, ಟ್ವಿಟರ್ ಗಳಲ್ಲಿ ರಾಜಕೀಯ ಚರ್ಚೆಗಳು ತುಸು ಬಿರುಸಾಗಿಯೇ ನಡೆಯುತ್ತಿದೆ. ಆದರೆ  ಇದೇ ಸಾಮಾಜಿಕ ಜಾಲತಾಣಗಳನ್ನು ‘ಸಂಘಟಿತ ಗುಂಪೊಂದು’ ಅತ್ಯಂತ ಯೋಜನಾಬದ್ಧವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಮತದಾರರು ಎಚ್ಚರಿಕೆ ವಹಿಸಬೇಕಾಗಿದೆ.

ಹಸಿ ಹಸಿ ಸುಳ್ಳುಗಳ ಮೂಲಕ, ಧಾರ್ಮಿಕ ವಿಚಾರಗಳನ್ನೆತ್ತಿ ಜನರ ಭಾವನೆಗಳನ್ನು ಕೆರಳಿಸುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಮತದಾರರ ದಾರಿ ತಪ್ಪಿಸಲೆಂದೇ ಸಾವಿರಾರು ಜನರ ಗುಂಪೊಂದು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಮೊದಲು ಕೆಲ ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲೂ ಇಂತಹದ್ದೇ ಬೃಹತ್ ತಂಡವೊಂದು ಷಡ್ಯಂತ್ರ ನಡೆಸಿತ್ತು ಎಂದು ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿದ್ದವು. ಈ ತಂಡದಲ್ಲಿ ರಾಜ್ಯದ ಮಾತ್ರವಲ್ಲದೆ, ಹೊರರಾಜ್ಯಗಳ ಸಾವಿರಾರು ಮಂದಿಯಿದ್ದಾರೆ. ಈ ಕೆಲಸಕ್ಕಾಗಿ ಇವರು ಮೀಸಲಾಗಿದ್ದು, ಸಾಮಾಜಿಕ ಜಾಲತಾಣಗಳನ್ನು ಮಾತ್ರವಲ್ಲದೆ, ಮನೆ ಮನೆ ಭೇಟಿ ಕಾರ್ಯಕ್ರಮದಲ್ಲೂ ಹಲವು ಅನೈತಿಕ ದಾರಿಗಳ ಮೂಲಕ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ವರದಿಗಳಲ್ಲಿ ತಿಳಿಸಲಾಗಿತ್ತು.

ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುವ ಬದಲು, ರಾಜ್ಯದ ಸಮಗ್ರ ಅಭಿವೃದ್ಧಿಯ ಬಗ್ಗೆ ಕಾಳಜಿ ವ್ಯಕ್ತಪಡಿಸುವ ಬದಲು ಈ ತಂಡವು ಮನೆ-ಮನೆಗಳಿಗೆ ತೆರಳಿ ಧಾರ್ಮಿಕ ವಿಚಾರಗಳನ್ನು ಎತ್ತಿ ಜನರ ಭಾವನೆಯನ್ನು ಕೆರಳಿಸುತ್ತಿದೆ. ಇದಕ್ಕಾಗಿ ಈ ತಂಡದಲ್ಲಿ ಇಂತಿಷ್ಟು ಮನೆಗಳಿಗೆ ಇಂತಿಷ್ಟು ವ್ಯಕ್ತಿಗಳು ಮೀಸಲಿಡಲಾಗುತ್ತದೆ ಹಾಗು ಈ ಷಡ್ಯಂತ್ರವನ್ನು ಯಶಸ್ವಿಯಾಗಿ ಜಾರಿಗೊಳಿಸುವ ಜವಾಬ್ದಾರಿ ವಹಿಸಲಾಗುತ್ತದೆ. ಇವರು ಸಾಮಾಜಿಕ ಜಾಲತಾಣಗಳು, ಕರಪತ್ರಗಳು, ಕೌನ್ಸೆಲಿಂಗ್ ಹೀಗೆ ಹಲವು ರೀತಿಯಲ್ಲಿ ಧಾರ್ಮಿಕ ವಿಚಾರಗಳನ್ನೇ ಪ್ರಮುಖ ಅಸ್ತ್ರವನ್ನಾಗಿಟ್ಟುಕೊಂಡು ಮತದಾರರನ್ನು ಮರುಳು ಮಾಡುತ್ತಿದ್ದಾರೆ. ಹೆಚ್ಚಿನ ಮತದಾರರಿಗೆ ಇಂತಹ ‘ವ್ಯವಸ್ಥಿತ ಮೋಸ’ದ ಬಗ್ಗೆ ಅರಿವೇ ಇಲ್ಲ. ಧಾರ್ಮಿಕ ವಿಚಾರಗಳನ್ನು ಮುಂದಿಡುವ ಈ ತಂಡ ಪ್ರಮುಖ ಸಮಸ್ಯೆಗಳನ್ನು, ಅಭಿವೃದ್ಧಿಯ ವಿಚಾರಗಳನ್ನು ಮರೆಮಾಚುತ್ತದೆ. ಈ ಮೂಲಕ ರಾಜ್ಯದ ಅಭಿವೃದ್ಧಿಗಿಂತಲೂ ‘ಬೇರೆಯದೇ ಒಂದು’ ನಮ್ಮ ಅಗತ್ಯ ಎನ್ನುವ ಭ್ರಮೆಯನ್ನು ಸೃಷ್ಟಿಸುತ್ತದೆ ಎಂದು ಈ ಬಗೆಗಿನ ಹಲವು ವರದಿಗಳು ತಿಳಿಸಿದ್ದವು.

ಇಷ್ಟೇ ಅಲ್ಲದೆ ಅಲ್ಪಸಂಖ್ಯಾತರ ಮತಗಳನ್ನು ಒಡೆಯುವುದು ಸಹ ಈ ತಂಡದ ಪ್ರಮುಖ ಕೆಲಸವಾಗಿದೆ. ಇದಕ್ಕಾಗಿ ಹಲವು ರೀತಿಯ ಮೋಸದಾಟಗಳನ್ನು ಈ ತಂಡ ಆಡುತ್ತಿದೆ. ಧಾರ್ಮಿಕ ಯಾತ್ರೆಯ ಹೆಸರಿನಲ್ಲಿ ಅಲ್ಪಸಂಖ್ಯಾತ ಮತದಾರರನ್ನು ಕರೆದುಕೊಂಡು ಹೋಗಲಾಗುತ್ತಿದೆ. ಕೆಲ ಅಲ್ಪಸಂಖ್ಯಾತರನ್ನು ಮುಂದಿಟ್ಟು ಅಲ್ಪಸಂಖ್ಯಾತರ ಮತಗಳನ್ನು ಒಡೆಯಲಾಗುತ್ತಿದೆ. ಇದು ಅತ್ಯಂತ ಗಂಭೀರ ಅಪಾಯವಾಗಿದ್ದು, ಅಲ್ಪಸಂಖ್ಯಾತರು ಈ ಬಗ್ಗೆ ಎಚ್ಚರ ವಹಿಸಬೇಕಾಗಿದೆ. ಇಂತಹ ಕೃತ್ಯಗಳಿಗೆ ಈ ತಂಡವು ಕೆಲ ಅಲ್ಪಸಂಖ್ಯಾತ ವ್ಯಕ್ತಿಗಳನ್ನೇ ಬಳಸುತ್ತಿದೆ. ಅಲ್ಪಸಂಖ್ಯಾತ ಮತಗಳ ವಿಭಜನೆಯೇ ಇವರ ಒಟ್ಟು ‘ಟಾರ್ಗೆಟ್’.

ಅಲ್ಪ ಸಂಖ್ಯಾತರಲ್ಲಿರುವ ಸಣ್ಣ ಸಣ್ಣ ಧಾರ್ಮಿಕ ಭಿನ್ನಾಭಿಪ್ರಾಯಗಳನ್ನು ದೊಡ್ಡದು ಮಾಡಿ, ಅಲ್ಪಸಂಖ್ಯಾತರ ನಡುವೆ ಒಡಕು ಮೂಡಿಸುತ್ತದೆ. ಈ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗು ಆರ್ಥಿಕ ಕ್ಷೇತ್ರಗಳಲ್ಲಿ ಅಲ್ಪ ಸಂಖ್ಯಾತ ಸಮುದಾಯ ಎದುರಿಸುತ್ತಿರುವ ನೈಜ ಹಾಗು ಗಂಭೀರ ಸಮಸ್ಯೆಗಳನ್ನು ಮರೆಮಾಚುತ್ತದೆ. ಧಾರ್ಮಿಕ ಯಾತ್ರೆಯ ನೆಪದಲ್ಲಿ ಅಲ್ಪಸಂಖ್ಯಾತರನ್ನು ಯಾತ್ರೆಗೆ ಕರೆದುಕೊಂಡು ಹೋಗುವುದು ಹಾಗು ದಾಖಲೆಗಳ ವಶಪಡಿಸಿಕೊಂಡು ಅವರ ಮತದಾನವನ್ನು ತಪ್ಪಿಸುವುದು, ವೋಟಿಂಗ್ ಸ್ಲಿಪ್ ನಲ್ಲಿ ಅಲ್ಪಸಂಖ್ಯಾತರ ಹೆಸರು ತಪ್ಪಿಸುವುದು ಹೀಗೆ ಹಲವು ಕುಕೃತ್ಯಗಳನ್ನು ಈ ತಂಡವು ವ್ಯವಸ್ಥಿತವಾಗಿ ಮಾಡುತ್ತಿದೆ.

ಇನ್ನು ಈ ತಂಡ ಎಷ್ಟು ಪ್ರಬಲವಾಗಿದೆಯೆಂದರೆ ತನ್ನ ಕುಕೃತ್ಯಗಳಿಗಾಗಿ ಸರಕಾರಿ ಯಂತ್ರವನ್ನು ಬಳಸುತ್ತಿದೆ. ಸರಕಾರಿ ಅಧಿಕಾರಿಗಳ ಮೂಲಕ ಮತದಾರ ಚೀಟಿಯನ್ನು ಪಡೆದುಕೊಳ್ಳುತ್ತದೆ. ಈ ಮೂಲಕ ಮತದಾರರ ಮೂಲಕ ಒತ್ತಡ ಹೇರುತ್ತಿದೆ. ಇದೇ ರೀತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ‘ನಾಪತ್ತೆ’ಯನ್ನಾಗಿಸುತ್ತದೆ. ಇದರಲ್ಲೂ ಈ ತಂಡದ ಪ್ರಮುಖ ಟಾರ್ಗೆಟ್ ಅಲ್ಪಸಂಖ್ಯಾತರೇ ಎನ್ನುವುದು ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಲ್ಲಿನ ಉಲ್ಲೇಖಾರ್ಹ ಅಂಶ. ಇತ್ತೀಚೆಗೆ ಕೆಲ ರಾಜ್ಯಗಳ ವಿಧಾನಸಭಾ ಚುನಾವಣಾ ಸಂದರ್ಭ ಈ ತಂಡವು ಸಕ್ರಿಯವಾಗಿ ಕಾರ್ಯ ನಿರ್ವಹಿಸಿತ್ತು. ಇದೀಗ ಕರ್ನಾಟಕಕ್ಕೂ ಈ ತಂಡ ಕಾಲಿಟ್ಟಿದ್ದು, ಈಗಾಗಲೇ ತನ್ನ ಕೆಲಸವನ್ನು ಮಾಡುತ್ತಿದೆ. ಈ ತಂಡವು ಸಮಾಜವನ್ನು ಒಡೆಯುವ ಮೂಲಕ ಅಧಿಕಾರ ಹಿಡಿಯುವವರಿಗೆ ನೆರವಾಗುತ್ತಿದ್ದು, ಈ ಬಗ್ಗೆ ರಾಜ್ಯದ ಮತದಾರರು ಎಚ್ಚರ ವಹಿಸಬೇಕಾಗಿದೆ.

ಮತದಾನ ಆದಷ್ಟು ಬೇಗ ಮಾಡಿ: ಮೇ 12ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಸಾಮಾನ್ಯವಾಗಿ ಮತದಾರರು ಸಂಜೆಯವರೆಗೂ ಮತದಾನಕ್ಕಾಗಿ ಕಾಯುತ್ತಾರೆ. ಆದರೆ ಈ ಬಗ್ಗೆ ಅಲ್ಪ ಸಂಖ್ಯಾತರು ಎಚ್ಚರ ವಹಿಸಬೇಕಾಗಿದೆ. ಸಾಧ್ಯವಾದಷ್ಟು ಬೇಗ ಮತದಾನ ಮಾಡುವುದು ಒಳಿತು. ಇಲ್ಲದಿದ್ದಲ್ಲಿ ಈ ಸಮಾಜಘಾತುಕ ಶಕ್ತಿಗಳು ಕೊನೆಯ ಕ್ಷಣದಲ್ಲಿ ತೊಂದರೆ ಮಾಡುವ, ಮತದಾನಕ್ಕೆ ಅಡ್ಡಿಪಡಿಸುವ ಸಾಧ್ಯತೆಯಿದೆ.

ಕೃಪೆ: vbnewsonline

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...