ಶ್ರೀನಿವಾಸಪುರ:ಅದ್ಧೂರಿಯ ಡಾ||ಅಂಬೇಡ್ಕರ್ ಜಯಂತಿ ಆಚರಣೆ

Source: shabbir | By Arshad Koppa | Published on 17th April 2017, 8:33 AM | State News |

ಶ್ರೀನಿವಾಸಪುರ, ಏ ೧೪: ಅಂಬೇಡ್ಕರ್‍ರವರು ಈ ದೇಶದ ಆಸ್ಥಿ, ಬಹು ದೊಡ್ಡ ಮಾನವತಾವಾದಿ ಇವರ ಆದರ್ಶಗಳನ್ನು ಯುವ ಜನಾಂಗ ಪಾಲಿಸಬೇಕು ಮತ್ತು ಇವರು ಯಾವುದೇ ಒಂದು ಜನಾಂಗಕ್ಕೆ ಸೀಮಿತವಲ್ಲವೆಂದು ಆರೋಗ್ಯ ಸಚಿವ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.


ಪಟ್ಟಣದ ತಾಲ್ಲೂಕು ಕಛೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಏರ್ಪಡಿಸಲಾಗಿದ್ದ ಡಾ||ಬಿ.ಆರ್.ಅಂಬೇಡ್ಕರ್‍ರವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಮಾಜದ ಎಲ್ಲಾ ವರ್ಗದ ಏಳಿಗೆಗಾಗಿ ಅಂಬೇಡ್ಕರ್‍ರವರು ಶ್ರಮಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರು ಮುಖ್ಯವಾಹಿನಿಗೆ ಬರಬೇಕು, ಅಂಬೇಡ್ಕರ್‍ರವರು ಸಂವಿಧಾನದ ರಚನೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಮಂಡಿಸಿದ್ದಾರಲ್ಲದೆ ಆಚರಣೆಯ ವಿಧಿವಿಧಾನಗಳನ್ನು ಕುಲಂಕೂಷವಾಗಿ ವಿವರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಅಂಬೇಡ್ಕರ್ ಭಾವಚಿತ್ರವನ್ನು ಪಟ್ಟಣದ ಎಂ.ಜಿ.ರಸ್ತೆಯಲ್ಲಿ ಡೊಳ್ಳು ಕುಣ ತ, ವೀರಗಾಸೆ ಹಾಗೂ ಮಹಿಳೆಯರ ತಮಟೆ ವಾದ್ಯಗಳೊಂದಿಗೆ ಮೆರವಣಿಗೆಯನ್ನು ನೆರವೇರಿಸಲಾಯಿತು. ಮೆರವಣ ಗೆಗೆ ತಹಶಿಲ್ದಾರ್ ವೈ.ರವಿರವರು ಚಾಲನೆಯನ್ನು ನೀಡಿದರು. ಮತ್ತು ಆವರಣದಲ್ಲಿರುವ ಡಾ||ಅಂಬೇಡ್ಕರ್‍ವರ ಪುತ್ಥಳಿಗೆ ಮಾಲಾರ್ಪಣೆಯನ್ನು ನೆರವೇರಿಸಿದರು.
ಪ್ರತಿಭಾವಂತ ಎಸ್‍ಎಸ್‍ಎಲ್‍ಸಿ ವಿಧ್ಯಾರ್ಥಿಗಳಿಗೆ ಸನ್ಮಾನ ಹಾಗೂ ತಹಶೀಲ್ದಾರ್ ವೈ.ರವಿ, ಪುರಸಭೆ ಮುಖ್ಯಾಧಿಕಾರಿ ವಿ.ಶ್ರೀಧರ್, ಪುರಸಭೆ ಅಧ್ಯಕ್ಷೆ ಅರುಣಾ ಜಗದೀಶ್‍ರವರುಗಳಿಗೆ ಸನ್ಮಾನವನ್ನು ನೆರವೇರಿಸಲಾಯಿತು. 
ಈ ಸಂದರ್ಭದಲ್ಲಿ ಮಾವು ಮಂಡಳಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಅಶೋಕ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಸದಸ್ಯ ಗೋವಿಂದಸ್ವಾಮಿ, ತಾ||ಪಂ||ಅಧ್ಯಕ್ಷೆ ಸುಗುಣಮ್ಮ, ಉಪಾಧ್ಯಕ್ಷೆ ಮಂಜುಳಾ, ಪುರಸಭೆ ಅಧ್ಯಕ್ಷೆ ಅರುಣಾ ಜಗದೀಶ್, ಮುಖ್ಯಾಧಿಕಾರಿ ವಿ.ಶ್ರೀಧರ್, ಮುಖಂಡರಾದ ರಾಮಾಂಜಮ್ಮ, ಮಂಜಲನಗರ ನಾರಾಯಣಸ್ವಾಮಿ, ವೆಂಕಟೇಶ್, ಈರಪ್ಪ, ತಿಮ್ಮಯ್ಯ, ಸೀತಪ್ಪ, ಪಾಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...