ಶ್ರೀನಿವಾಸಪುರ: ದಾಸ ಸಾಹಿತ್ಯ ಎಲ್ಲರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ-ಮಾಯಾಬಾಲಚಂದ್ರ

Source: shabbir | By Arshad Koppa | Published on 18th July 2017, 8:42 AM | State News | Special Report |

ಶ್ರೀನಿವಾಸಪುರ:ಸಂಗೀತದ ಮಾರ್ಗದಲ್ಲಿ ಹರಿದುಬರುತ್ತಿರುವ ಸಾಹಿತ್ಯದ ಪ್ರಕಾರವಾದ ದಾಸ ಸಾಹಿತ್ಯ ಎಲ್ಲರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ ಎಂದು ತಾಲ್ಲೂಕು ದಾಸಸಾಹಿತ್ಯ ಪರಿಷತ್ ಅಧ್ಯಕ್ಷೆ ಮಾಯಾಬಾಲಚಂದ್ರ ಅಭಿಪ್ರಾಯಪಟ್ಟರು. 


ಆರಿಕುಂಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಸಸಾಹಿತ್ಯ ಅಭಿಯಾನವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದಾಸರ ತತ್ವಗಳನ್ನು ಅನುಸರಿಸಿದರೆ ಶೈಕ್ಷಣ ಕ ಪ್ರಗತಿಯೊಂದಿಗೆ ಮಾನಸಿಕ ನೆಮ್ಮದಿಪಡೆಯಬಹುದು ಎಂದರು. 
ಉಪನ್ಯಾಸಕಿ ಮಂಜುಳ ಪ್ರಾಸ್ತಾವಿಕವಾಗಿ ಮಾತನಾಡಿ ದಾಸಸಾಹಿತ್ಯ ಪರಿಷತ್ತು ನಡೆದುಬಂದ ಹಾದಿಯನ್ನು ವಿವರಿಸಿದರು. ಗೀತಾರಾಜ್ ದಾಸರ ಪದಗಳನ್ನು ವಿದ್ಯಾರ್ಥಿಗಳಿಗೆ ಭಜನಾ ರೂಪದಲ್ಲಿ ಹೇಳಿಕೊಟ್ಟರು. ದಾಸರ ಪದಗಳ ಗಾಯನ ಮಾಡಿದ  ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಹಾಗೂ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮುಖ್ಯೋಪಾದ್ಯಾಯಿನಿ ಭಾಗ್ಯಲಕ್ಷ್ಮಿ ಅವರು ದಾಸ ಸಾಹಿತ್ಯದಿಂದ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬಹುದಾದ ಮೌಲ್ಯಗಳನ್ನು ವಿವರಿಸಿದರು. ಸಮಾಜಮುಖಿ ಅಭಿಯಾನದೊಂದಿಗೆ ಎಲ್ಲರೂ ಕೈಜೋಡಿಸಬೇಕೆಂದು ಕರೆಕೊಟ್ಟರು. ಶಾಲಾಶಿಕ್ಷಕರಾದ ಮುರಳಿಬಾಬು, ಶ್ರೀಧರ್ ಉಪಸ್ಥಿತರಿದ್ದರು. 


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...