ಶ್ರೀನಿವಾಸಪುರ ರಾಷ್ಟ್ರೀಯ ಜಂತು ಹುಳ ನಿರ್ಮೂಲನಾ ದಿನಾಚರಣೆ

Source: sonews | By Staff Correspondent | Published on 9th February 2019, 11:59 PM | State News |

ಶ್ರೀನಿವಾಸಪುರ: ಪೋಷಕರು ತಮ್ಮ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆ ಕೊಡುವ ಮೂಲಕ ಸಂಭವನೀಯ ಅನಾರೋಗ್ಯದಿಂದ ಪಾರುಮಾಡಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಸಿ.ವಿಜಯ ಹೇಳಿದರು.

ಪಟ್ಟಣದ ಚಿಂತಾಮಣಿ ಸರ್ಕಲ್ಸಮೀಪದ ಮೊಹಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಜಂತು ಹುಳ ನಿರ್ಮೂಲನಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕುಟುಂಬದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮನೆಯಲ್ಲಿಯ ಶೌಚಾಲಯ ಬಳಸಬೇಕು ಎಂದು ಹೇಳಿದರು.

ಬಯಲು ಶೌಚ ಮಾಡುವುದರಿಂದ ಜಂತು ಹುಳು ದೇಹದಲ್ಲಿ ಪ್ರವೇಶ ಪಡೆಯುವ ಸಾಧ್ಯತೆ ಇರುತ್ತದೆ. ಅದು ಒಮ್ಮೆ ದೇಹ ಪ್ರವೇಶಿಸಿದ ಬಳಿಕ ತನ್ನ ಸಂತತಿಯನ್ನು ಹೆಚ್ಚಿಸಿಕೊಂಡು, ಅಸೌಖ್ಯ ಉಂಟುಮಾಡುತ್ತದೆ. ನಿರ್ಲಕ್ಷಿಸಿದರೆ ಜಂತು ಹುಳು ಮಾರಣಾಂತಿಕವಾಗುತ್ತದೆ ಎಂದು ಹೇಳಿದರು.

ಆರೋಗ್ಯವೇ ಭಾಗ್ಯ. ಸಾರ್ವಜನಿಕರು ಆರೋಗ್ಯ ರಕ್ಷಣೆಗೆ ಅಗತ್ಯವಾದ ಎಲ್ಲ ಮುಂಚಾಗ್ರತಾ ಕ್ರಮ ಅನುಸರಿಸಬೇಕು. ಸ್ವಚ್ಛತೆಗೆ ಮಹತ್ವ ನೀಡಬೇಕು. ಪರಿಸರ ಮಾಲೀನ್ಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಂದರ್ಭದಲ್ಲಿ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರ ವಿತರಿಸಲಾಯಿತು. ವೈದ್ಯಾಧಿಕಾರಿ ಡಾ. ಸೈಯದ್ಅಮೀರ್ಫಾತಿಮಾ ಇದ್ದರು.

 

 

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...