ಭಟ್ಕಳ ತಾಲೂಕಿನ 9ಕೇಂದ್ರಗಳಲ್ಲಿ ಮಾ.೨೧ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ

Source: sonews | By Staff Correspondent | Published on 20th March 2019, 5:31 PM | Coastal News | Don't Miss |

•    1930 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ
•    ಈ ಬಾರಿ ಶೇ.95ಕ್ಕೂ ಫಲಿತಾಂಶದ ಗುರಿ

ಭಟ್ಕಳ: ಹತ್ತನೆ ತರಗತಿಯ ವಾರ್ಷೀಕ ಪರೀಕ್ಷೆಗಳು ಇಂದಿನಿಂದ ಆರಂಭಗೊಳ್ಳುತ್ತಿದ್ದು ಭಟ್ಕಳ ತಾಲೂಕಿನ 9 ಪರೀಕ್ಷಾ ಕೇಂದ್ರಗಳಲ್ಲಿ 1930 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ತಿಳಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರತಿನಿಧಿಗಳಿಗೆ ವಿವರವನ್ನು ನೀಡಿದ ಅವರು ಪರೀಕ್ಷೆಗೆ ಬೇಕಾದಂತಹ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದು ಯಾವುದೇ ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯನ್ನು ವಹಿಸಲಾಗಿದೆ ಎಂದರು. 

927 ಗಂಡು ಹಾಗೂ 1003 ಹೆಣ್ಣು ವಿದ್ಯಾರ್ಥಿಗಳು ಈ ಸಲ ಮೊದಲ ಬಾರಿ ಪರೀಕ್ಷೆಗೆ ಕುಳಿತುಕೊಂಡಿದ್ದು ವಿದ್ಯಾರ್ಥಿನೀಯರ ಸಂಖ್ಯೆ ಹೆಚ್ಚಾಗಿದೆ. 9ಕೇಂದ್ರಗಳಿಗೆ  ಮುಖ್ಯ ಮೇಲ್ವಿಚಾರಕರು, ಸಿಟಿಂಗ್ಸ್ ಸ್ಕ್ವಾಡ್ಸ್, ಹಾಗೂ 9 ಮಂದಿ ವೀಕ್ಷಕರನ್ನು ನೇಮಿಸಲಾಗಿದೆ. ತಾಲೂಕು ಮಟ್ಟದಲ್ಲಿ 2 ಸಂಚಾರಿ ಜಾಗೃತ ದಳ ಹಾಗೂ ಬೇರೆ ಜಿಲ್ಲೆಯಿಂದ ಪ್ಲಾಯಿಂಗ್ ಸ್ಕ್ವಾಡ್ಸ್ ಗಳನ್ನೂ ನೇಮಿಸಿದ್ದು ಪರೀಕ್ಷೆಯನ್ನು ಸುಗಮವಾಗಿ ನಡೆಯುವಂತೆ ವ್ಯವಸ್ಥೇಯನ್ನು ಮಾಡಲಾಗಿದೆ. 

ಕಳೆದ ವರ್ಷ 2145 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಶೇ.87.64 ಫಲಿತಾಂಶವನ್ನು ದಾಖಲಿಸಿ ಭಟ್ಕಳ ತಾಲೂಕು ಉ.ಕ.ಜಿಲ್ಲೆಗೆ ನಾಲ್ಕನೇ ಸ್ಥಾನವನ್ನು ಪಡೆದಿತ್ತು. ಆ ಹಿನ್ನೆಲೆಯಲ್ಲಿ ಈ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಪಡಿಸಲು ಹಲವು ಕ್ರಾಂತಿಕಾರಿ ಯೋಜನೆಗಳನ್ನು ವರ್ಷಪೂರ್ತಿ ಹಾಕಿಕೊಂಡಿದ್ದು ಶೇ.95ಕ್ಕೂ ಹೆಚ್ಚು ಫಲಿತಾಂಶವನ್ನು ನಿರೀಕ್ಷಿಸಲಾಗಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿಯನ್ನು ನೀಡುವ ವ್ಯವಸ್ಥೇಯನ್ನು ಕೈಗೊಳ್ಳಲಾಗಿದ್ದು ಜಿಲ್ಲಾ ತರಬೇತಿ ಕೇಂದ್ರ ಡಯಟ್ ನಿಂದ 2 ವಿಶೇಷ ಬೋಧನಾ ಕೇಂದ್ರಗಳಲ್ಲಿ 100 ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಅಲ್ಲದೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಲಯದಿಂದ 5 ಕೋಚಿಂಗ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುವ ವ್ಯವಸ್ಥೇಯನ್ನು ಮಾಡಲಾಗಿದೆ ಎಂದೂ ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ವಿಷಯ ಸಂಯೋಜಕರಾದ ಎಸ್.ಪಿ.ಭಟ್ ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...