ವಿಶೇಷ ಲೋಕ ಅದಾಲತ್‌ನಲ್ಲಿ ಗಂಡ-ಹೆಂಡಿರನ್ನು ಒಂದು ಮಾಡಿದ ಸುಪ್ರಿಂ ಕೋರ್ಟ್ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ

Source: S.O. News Service | By Manju Naik | Published on 12th August 2018, 9:27 PM | State News | Don't Miss |

ಹುಬ್ಬಳ್ಳಿ : ಹುಬ್ಬಳ್ಳಿ ನೂತನ ನ್ಯಾಯಾಲಯಗಳ ಸಂಕೀರ್ಣಗಳ ಉದ್ಘಾಟನೆಗಾಗಿ ಆಗಮಿಸಿದ್ದ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಇಂದು ನೂತನ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ವಾಜ್ಯ ಒಂದನ್ನು ಖುದ್ದಾಗಿ ಇತ್ಯರ್ಥ ಪಡಿಸಿದರು.  ಹುಬ್ಬಳ್ಳಿ ಕೌಟುಂಬಿಕ ನ್ಯಾಯಾಲಯದ ಮುಂದೆ ಇದ್ದ ಗಂಡ-ಹೆಂಡಿರ ನಡುವಿನ ವಿಚ್ಛೆದನ ಪ್ರಕರಣ ಬಗೆಹರಿಸಿ ದಂಪತಿ ಹಾಗೂ ಮಕ್ಕಳನ್ನು ಒಗ್ಗೂಡಿಸಿದರು. 
ಇಲ್ಲಿನ ಕೇಶ್ವಾಪುರದ ನಿವಾಸಿ ಜಗದೀಶ್ ಶೆಳಗಿ ಹಾಗೂ ಪಾರ್ವತಿ ದಂಪತಿಗಳ ವಿಚ್ಛೆಧನ ಪ್ರಕರಣ ವಿóಶೇಷ ಲೋಕ ಅದಾಲತ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮುಂದೆ ವಿಚಾರಣೆಗೆ ಬಂದಿತು. ನ್ಯಾಯಿಕ ಸಂಧಾನಕಾರರಾದ ಮಹೇಶ್ ಪಾಟೀಲ್ ಹಾಗೂ ವಕೀಲ ಸಂಧಾನಕಾರರಾದ ಶೋಭಾ ಪವಾರ್ ಅವರು ಪ್ರಕರಣ ನಿರ್ವಹಿಸುತ್ತಿದ್ದರು. ವಿಚ್ಛೆದನ ಕೋರಿದ ದಂಪತಿ ಹಾಗೂ ಮಕ್ಕಳಾದ ರೋಹಿತ್, ನಂದಿನಿ, ರಕ್ಷಿತಾ, ಹಾಗೂ ಸಿದ್ಧಾರ್ಥರೊಂದಿಗೆ ಮುಖ್ಯ ನ್ಯಾಂಮೂರ್ತಿಗಳ ಮುಂದೆ ಹಾಜರು ಪಡಿಸಿದರು. ನ್ಯಾ. ದೀಪಕ್ ಮಿಶ್ರಾ ಅವರು ಗಂಡ-ಹೆಂಡತಿಗೆ ಕೌಂಟುಬಿಕ ಮೌಲ್ಯಗಳನ್ನು ತಿಳಿಸುವುದರ ಮೂಲಕ ವಾದಿ-ಪ್ರತಿವಾದಿಗಳ ಮನ ಒಲಿಸಿದರು. “ಈಗ ನೀವಿಬ್ಬರೂ ಹಟ ಬಿದ್ದು ವಿಚ್ಛೆಧನ ಪಡೆದರೆ, ನಾಳೆ ನಿಮ್ಮ ಮಕ್ಕಳಿಗೆ ಯಾವ ರೀತಿಯಾಗಿ ಮದುವೆ ಹಾಗೂ ಕೌಟುಂಬಿಕ ಜೀವನವನ್ನು ಕಟ್ಟಿಕೊಳ್ಳಲು ಹೇಳುತ್ತಿರಿ? ನಿಮ್ಮ ನಡುವಿನ ಜಗಳಗಳನ್ನು ನೋಡಿ ಬೆಳದ ಮಕ್ಕಳು ಭವಿóಷ್ಯದಲ್ಲಿ ಕುಂಟುಬ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡು ಮದುವೆಯಾಗಲು ಹಿಂದೇಟು ಹಾಕುತ್ತಾರೆ. ಕುಟುಂಬ ವ್ಯವಸ್ಥೆ ಹಾಳಾದರೆ ಸಮಾಜದ ಸ್ವಾಸ್ಥö್ಯ ಕೆಡುತ್ತದೆ. ಮಕ್ಕಳಿಗೆ ಹಾಗೂ ಮುಂದಿನ ಪೀಳಿಗೆಗೆ ಮಾದರಿಯಾಗಿದ್ದು ನೈತಕವಾಗಿ ಜೀವಿಸಿ ಸುಖಸಂತಸದಿಂದರಿ ಎಂದು ಸಲಹೆ ನೀಡಿದರು. ನ್ಯಾಯಮೂರ್ತಿಗಳ ಮಾತು ಕೇಳಿದ ದಂಪತಿ ತಮ್ಮ ವಿಚ್ಛೆದನ ಪ್ರಕರಣವನ್ನು  ಹಿಂಪಡೆದು ಪ್ರಕರಣ ಸುಖಾಂತ್ಯಗೊಳಿಸಿಕೊಂಡರು. ಒಟ್ಟು ೯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಶೇಷ ಲೋಕ ಅದಾಲತ್‌ನಲ್ಲಿ ಬಗೆ ಹರಿಸಲಾಯಿತು. ಹುಬ್ಬಳ್ಳಿ ನೂತನ ನ್ಯಾಯಾಲಯಗಳ ಸಂಕೀರ್ಣದಲ್ಲಿ ನಡೆದ ಮೊದಲ ವಿಶೇಷ ಲೋಕ ಅದಾಲತ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳೇ ಖುದ್ದಾಗಿ ಭಾಗವಹಿಸಿ ವಿಚ್ಛೆದನಕ್ಕೆ ಮುಂದಾಗಿದ್ದ ದಂಪತಿಗಳನ್ನು ಒಂದುಗೂಡಿಸಿದ್ದು ಐತಿಹಾಸಿಕ ನೆನಪಾಗಿ ಜನಮನದಲ್ಲಿ ಚಿರಕಾಲ ಉಳಿಯಲಿದೆ.

Read These Next

ವಂಚನೆಗೊಳಗಾದ ಸಾವಿರಾರು ಅಗ್ರಿಗೋಲ್ಡ್ ಗ್ರಾಹಕರಿಗೆ ಸರ್ಕಾರ ನ್ಯಾಯ ಒದಗಿಸಬೇಕು-ರಮೇಶ

ಭಟ್ಕಳ: ಅಗ್ರಿಗೋಲ್ಡ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದ ಗ್ರಾಹಕರಿಗೆ ನ್ಯಾಯ ವದಗಿಸುವ ದೃಷ್ಟಿಯಿಂದ ಅಗ್ರಿಗೋಲ್ಡ್ ಗ್ರೂಫ್ ಆಫ್ ...

ಮುರ್ಡೇಶ್ವರದ ಆರ್.ಎನ್.ಎಸ್.ಪ್ರಥಮ ದರ್ಜೆ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಸಂದರ್ಶನ

ಭಟ್ಕಳ: ಗ್ರೀಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ (ಟ್ಯಾಲಿ ಸಾಪ್ಟವೇರ್ ಗ್ರೂಪ್) ಬೆಂಗಳೂರು ಕಂಪನಿಯಲ್ಲಿ ಕೆಲಸ ನಿರ್ವಹಿಸಲು 100 ಜನ ...

ರಾ.ಹೆ.ಅಗಲೀಕರಣ;೩೦ರ ಬದಲು ೪೫ಮೀಟರ್ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಭಟ್ಕಳ: ಇಲ್ಲಿನ ಶಿರಾಲಿ ಪಂಚಾಯತ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲೀಕರಣ ವಿಚಾರವಾಗಿ ಸುಮಾರು 700 ಮೀಟರವರೆಗೆ ರಸ್ತೆ ಅಗಲೀಕರಣವನ್ನು 45 ...