ತೆಲಂಗಾಣ: ಉರುಳಿ ಬಿದ್ದ ಬಸ್: 40ಕ್ಕೂ ಅಧಿಕ ಯಾತ್ರಿಕರ ಸಾವು

Source: sonews | By Staff Correspondent | Published on 11th September 2018, 4:47 PM | National News | Incidents | Don't Miss |

ಹೈದರಾಬಾದ್: ರಾಜ್ಯ ಸರಕಾರಿ ಸ್ವಾಮ್ಯದ ಬಸ್ ಘಾಟಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಘಟನೆಯಲ್ಲಿ ಎಂಟು ಮಕ್ಕಳು ಸಹಿತ 40ಕ್ಕೂ ಅಧಿಕ ಮಂದಿ ಯಾತ್ರಿಕರು ಮೃತಪಟ್ಟಿದ್ದರೆ, ಹಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಈ ಘಟನೆಯು ತೆಲಂಗಾಣ ರಾಜ್ಯದ ಜಗಿಟಿಯಲ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಯಾತ್ರಿಕರು ಕೊಂಡಗಟ್ಟು ಬೆಟ್ಟದಲ್ಲಿರುವ ಪ್ರಸಿದ್ಧ ಹನುಮಾನ್ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬಸ್ 70ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು.

 ಮಂಗಳವಾರ ಬೆಳಗ್ಗೆ 11:30ರ ಸುಮಾರಿಗೆ ಬಸ್ ಚಾಲಕ ಘಾಟಿಯಲ್ಲಿ ತಿರುವು ಪಡೆಯುತ್ತಿದ್ದಾಗ ಬ್ರೇಕ್ ವೈಫಲ್ಯಗೊಂಡು ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸುಮಾರು 10 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ರಕ್ಷಣಾಕಾರ್ಯದಲ್ಲಿ ನೆರವಾಗಿದ್ದಾರೆ. ಜಿಲ್ಲಾಧಿಕಾರಿ ಶರತ್ ಹಾಗೂ ಎಸ್ಪಿ ಸಿಂಧು ಶರ್ಮಾ ಪೊಲೀಸ್ ಪಡೆಯೊಂದಿಗೆ ಘಟನಾಸ್ಥಳಕ್ಕೆ ಧಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...